ಚೈತ್ರಾಳ ಹಿಂದೂ ಪರ ಭಾಷಣಕ್ಕೂ ಈ ಪ್ರಕರಣಕ್ಕೆ ತಳಕು ಹಾಕುವುದು ಬೇಡ ಎಂದ ಗೃಹ ಸಚಿವ
ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನವಾಗಿದ್ದು, ಇದು ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಅದು ಈ ಕೆಳಗಿನಂತಿದೆ.
ಬೆಂಗಳೂರು, (ಸೆಪ್ಟೆಂಬರ್ 14): ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂ. ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ(Chaitra Kundapura) ಸೇರಿದಂತೆ ಹಲವರನ್ನು ಬಂಧಿಸಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇನ್ನು ಈ ಪ್ರಕರಣ ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಬಗ್ಗೆ ಮೊದಲ ಬಾರಿಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನನಗೆ ಬಂದ ಮಾಹಿತಿ ಪ್ರಕಾರ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿದ್ದಾರೆ. 3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ಕಂಪ್ಲೆಂಟ್ ಆಗಿದೆ. ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆ ಎಂದು ಹೇಳಿದರು.
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿರುವ ಬಗ್ಗೆ ಮಾಹಿತಿ ಇದೆ. 3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ಕಂಪ್ಲೆಂಟ್ ಆಗಿದ್ದು, ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆ. ಪೊಲೀಸರು ಸುಮೊಟೋ ಕೇಸ್ ದಾಖಲಿಸಿಲ್ಲ. ದೂರಿನ ಆಧಾರದ ಮೇಲೆ ಚೈತ್ರಾ ಕುಂದಾಪುರ ಬಂಧನವಾಗಿದೆ. ಈ ಕೇಸ್ನಲ್ಲಿ ಸ್ವಾಮೀಜಿ ಭಾಗಿಯಾಗಿದ್ದರೆ ಅವರ ಬಂಧನವೂ ಆಗುತ್ತೆ. ಯಾರೇ ತಪ್ಪು ಮಾಡಿದರೂ ಕೂಡ ಕಾನೂನಿನಡಿ ಕ್ರಮ ಆಗಲಿದೆ. ಚೈತ್ರಾ ಕುಂದಾಪುರ ಹಿಂದೂ ಪರವಾಗಿ ಭಾಷಣ ಮಾಡಿದ್ದಾರೆ. ಈ ಪ್ರಕರಣವನ್ನು ಅದಕ್ಕೆ ಮಿಕ್ಸಪ್ ಮಾಡುವುದು ಬೇಡ ಎಂದರು.
ಇದನ್ನೂ ಓದಿ: ಮಠದಲ್ಲೇ ಟಿಕೆಟ್ ಡೀಲ್ ನಡೆದಿತ್ತಾ? ಗೋವಿಂದ್ ಬಾಬು, ಚೈತ್ರಾ-ಸ್ವಾಮೀಜಿ ಭೇಟಿ ಫೋಟೋಸ್ ವೈರಲ್
ಇನ್ನೊಂದೆಡೆ ಈ ಪ್ರಕರಣದ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಹಿಂದೂ ಸಂಘಟನೆಗೂ ಇದಕ್ಕೂ ತಳಕು ಹಾಕುವುದು ಸರಿಯಲ್ಲ. ಹಿಂದೂ ಪರ ಭಾಷಣ ಮಾಡಿರುವುದನ್ನು ನಾನೂ ನೋಡಿದ್ದೇನೆ. ಆದರೆ ಈ ವಿಚಾರವನ್ನು ಸಂಘಟನೆಗೆ ಸೇರಿಸುವುದು ಸರಿಯಲ್ಲ. ಇದೊಂದು ಪ್ರತ್ಯೇಕ ಪ್ರಕರಣ ಅಂತಲೇ ಪರಿಗಣಿಸಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 12:04 pm, Thu, 14 September 23