ಮಳೆರಾಯನ ಅವಾಂತರ: ರಾಜ್ಯದ ಹಲವೆಡೆ ಮನೆ ಕುಸಿತ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅತ್ಯಧಿಕ ಮಳೆಯಾಗುತ್ತಿದ್ದು, ಭಾರಿ ಮಳೆ ಹಾಗೂ ಬಿರುಗಾಳಿಯ ಹೊಡೆತಕ್ಕೆ ಮನೆಗಳು ಕುಸಿದುಬಿದ್ದಿರುವ ಪ್ರಕರಣಗಳು ರಾಜ್ಯದಲ್ಲಿ ಕಂಡುಬಂದಿವೆ. ಉಡುಪಿ ಜಿಲ್ಲೆಯ ಕಳತ್ತೂರು ಹಾಗೂ ಪಾದೂರು ಗ್ರಾಮದಲ್ಲಿ ಭಾರಿ ಮಳೆ ಮತ್ತು ಗಾಳಿಯಿಂದಾಗಿ ಎರಡು ಮನೆಗಳಿಗೆ ಹಾನಿಯಾಗಿದೆ. ಮನೆಯೊಳಗಿದ್ದ ಶ್ಯಾಮಲಾ ಮಡಿವಾಳ ಹಾಗೂ ಮೂರ್ತಿ ಎಂಬುವವರ ತಲೆಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕಾಪು ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೊಂದೆಡೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಆರ್ಭಟದಿಂದ ಮನೆ ಕುಸಿತ ಸಂಭವಿಸಿದೆ. ಜಿಲ್ಲೆಯ ಮೂಡಿಗೆರೆ […]

ಮಳೆರಾಯನ ಅವಾಂತರ: ರಾಜ್ಯದ ಹಲವೆಡೆ ಮನೆ ಕುಸಿತ

Updated on: Aug 16, 2020 | 1:57 PM

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅತ್ಯಧಿಕ ಮಳೆಯಾಗುತ್ತಿದ್ದು, ಭಾರಿ ಮಳೆ ಹಾಗೂ ಬಿರುಗಾಳಿಯ ಹೊಡೆತಕ್ಕೆ ಮನೆಗಳು ಕುಸಿದುಬಿದ್ದಿರುವ ಪ್ರಕರಣಗಳು ರಾಜ್ಯದಲ್ಲಿ ಕಂಡುಬಂದಿವೆ.

ಉಡುಪಿ ಜಿಲ್ಲೆಯ ಕಳತ್ತೂರು ಹಾಗೂ ಪಾದೂರು ಗ್ರಾಮದಲ್ಲಿ ಭಾರಿ ಮಳೆ ಮತ್ತು ಗಾಳಿಯಿಂದಾಗಿ ಎರಡು ಮನೆಗಳಿಗೆ ಹಾನಿಯಾಗಿದೆ. ಮನೆಯೊಳಗಿದ್ದ ಶ್ಯಾಮಲಾ ಮಡಿವಾಳ ಹಾಗೂ ಮೂರ್ತಿ ಎಂಬುವವರ ತಲೆಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕಾಪು ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನೊಂದೆಡೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಆರ್ಭಟದಿಂದ ಮನೆ ಕುಸಿತ ಸಂಭವಿಸಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿಯಲ್ಲಿ ಸತತ 3 ದಿನದಿಂದ ಸುರಿಯುತ್ತಿರುವ ಭಾರಿ ಮಳೆಗೆ ಸುಂದರ ಪೂಜಾರಿ ಎಂಬುವವರ ಮನೆ ಕುಸಿದುಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.