Sign In

By signing in or creating an account, you agree with Associated Broadcasting Company's Terms & Conditions and Privacy Policy.

​​​ನನ್ನ ಮೇಲೆ ಹನಿಟ್ರ್ಯಾಪ್ ಯತ್ನ: ಸದನದಲ್ಲೇ ಬಹಿರಂಗಪಡಿಸಿದ ಸಚಿವ ರಾಜಣ್ಣ

ಕಳೆದ ಹಲವು ದಿನಗಳಿಂದ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್​ ಸುದ್ದಿ ಚರ್ಚೆಯಾಗುತ್ತಿತ್ತು. ಪ್ರಭಾವಿ ನಾಯಕನೇ ಪ್ರಭಾವಿ ಸಚಿವರನ್ನೇ ಹನಿಟ್ರ್ಯಾಪ್​​ ಬಲೆಗೆ ಬೀಳಿಸಲು ಯತ್ನಿಸಿದ್ದಾರೆ ಎನ್ನುವ ಸುದ್ದಿ ಭಾರೀ ಸಂಚಲನ ಮೂಡಿಸಿತ್ತು. ಆದ್ರೆ, ಯಾರು? ಏನು ಎನ್ನುವುದು ಅಧಿಕೃತವಾಗಿರಲಿಲ್ಲ. ಆದ್ರೆ, ಇದೀಗ ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ಆಗಿದೆ ಎಂದು ಖುದ್ದು ಹಿರಿಯ ಸಚಿವ ಕೆಎನ್​ ರಾಜಣ್ಣ ಖಚಿತಪಡಿಸಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.

​​​ನನ್ನ ಮೇಲೆ ಹನಿಟ್ರ್ಯಾಪ್ ಯತ್ನ: ಸದನದಲ್ಲೇ ಬಹಿರಂಗಪಡಿಸಿದ ಸಚಿವ ರಾಜಣ್ಣ
Kn Rajanna
Follow us
ರಮೇಶ್ ಬಿ. ಜವಳಗೇರಾ
|

Updated on:Mar 20, 2025 | 5:49 PM

ಬೆಂಗಳೂರು, (ಮಾರ್ಚ್​ 20): ಕರ್ನಾಟಕದ ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್​  (honeytrap)ಬಲೆಗೆ ಬೀಳಿಸುವ ಯತ್ನ ನಡೆದಿದೆ ಎನ್ನುವ ಸುದ್ದಿ ಭಾರೀ ಸದ್ದು ಮಾಡಿತ್ತು. ಆದ್ರೆ ಆ ಸಚಿವರು ಯಾರು? ಅವರನ್ನು ಹನಿಟ್ರ್ಯಾಪ್​ ಬಲೆಗೆ ಬೀಳಿಸುವ ಯತ್ನ ಮಾಡಿದ್ಯಾರು ಎನ್ನುವ ಪ್ರಶ್ನೆ ಎಲ್ಲರಲ್ಲೂ ಕಾಡಿತ್ತು. ಆದ್ರೆ, ಇದೀಗ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದ್ದು, ಸಹಕಾರ ಸಚಿವ ಕೆಎನ್​ ರಾಜಣ್ಣ (KN Rajanna) ಅವರನ್ನೇ ಹನಿಟ್ರ್ಯಾಪ್​ ಬಲೆ ಕೆಡವಲು ಯತ್ನ ನಡೆದಿದೆ ಎನ್ನುವುದು ಖಚಿತವಾಗಿದೆ. ಈ ಬಗ್ಗೆ ಸ್ವತಃ ರಾಜಣ್ಣ ಅವರೇ  ಇಂದು(ಮಾರ್ಚ್ 20)  ಸದನದಲ್ಲಿ ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ಬಹಿರಂಗಪಡಿಸಿದ್ದಾರೆ. ಈ ಮೂಲಕ ರಾಜಣ್ಣ ಅವರು ಕಳೆದ ಹಲವು ದಿನಗಳಿಂದ ಹನಿಟ್ರ್ಯಾಪ್ ಬಗ್ಗೆ ನಡೆಯುತ್ತಿದ್ದ ಗುಸುಗುಸು ಚರ್ಚೆಗೆ ಸ್ಪಷ್ಟನೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ರಾಜ್ಯದಲ್ಲಿ ಹನಿ ಟ್ರ್ಯಾಪ್‌ ಬಗ್ಗೆ ಕೇಳಿ ಬರುತ್ತಿದ್ದ ಗುಸು, ಗುಸು ಬಗ್ಗೆ ಸದನದಲ್ಲಿ ಮೊದಲಿಗೆ ಬಿಜೆಪಿ ಶಾಸಕ ಸುನಿಲ್ ಕುಮಾರ್ ಕಾರ್ಕಳ ಅವರು ಪ್ರಸ್ತಾಪಿಸಿದ್ದರು. ಇದರ ಬೆನ್ನಲ್ಲೇ ಇಂದು ವಿಧಾನಸಭೆಯಲ್ಲಿ ಗಹನವಾದ ಚರ್ಚೆ ನಡೆದಿದೆ. ಸದನದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹನಿಟ್ರ್ಯಾಪ್‌ ವಿಚಾರವನ್ನು ಪ್ರಸ್ತಾಪ ಮಾಡಿದರು. ನೇರವಾಗಿ ಸಹಕಾರ ಸಚಿವರ ಮೇಲೆ ಹನಿಟ್ರ್ಯಾಪ್ ಆಗಿದೆ ಎಂದು ಬಹಿರಂಗವಾಗಿಯೇ ಹೇಳಿದರು.

ಇದನ್ನೂ ಓದಿ: ಹನಿಟ್ರ್ಯಾಪ್ ಬಲೆಯಲ್ಲಿ ಸಚಿವರನ್ನ ಸಿಲುಕಿಸಲು ಮಹಾ ಯತ್ನ: ಕಾಂಗ್ರೆಸ್​ನಲ್ಲಿ ಸಂಚಲನ

ಇನ್ನು ಶಾಸಕ ಯತ್ನಾಳ್ ಅವರ ಮಾತಿಗೆ ಖುದ್ದು ಸಚಿವ ಕೆ.ಎನ್ ರಾಜಣ್ಣ ಎದ್ದು ನಿಂತು ಪ್ರತಿಕ್ರಿಯಿಸಿದ್ದು, ಯತ್ನಾಳ್ ನನ್ನ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಹೀಗಾಗಿ ನಾನು ವಾಸ್ತವವನ್ನು ಹೇಳುತ್ತೇನೆ. ಸಾರ್ವಜನಿಕವಾಗಿ ತಪ್ಪು ಮಾಹಿತಿ ಹೋಗಬಾರದು ಎಂದು ಹೇಳುತ್ತಿದ್ದೇನೆ. ತುಮಕೂರು ಭಾಗದ ಸಚಿವ ಎಂದು ಹೇಳುತ್ತಿದ್ದು, ನಾನು ಮತ್ತು ಪರಮೇಶ್ವರ್ ಇಬ್ಬರೇ ಇರುವುದು. ಕರ್ನಾಟಕ ರಾಜ್ಯ ಸಿಡಿಗೆ ಕಾರ್ಖಾನೆ ಎಂದು ಬಹಳ ಜನ ಹೇಳುತ್ತಾರೆ. ಇದು ಕೇವಲ ಇಲ್ಲಿಗೆ ಸೀಮಿತವಾಗಿಲ್ಲ. ರಾಷ್ಟ್ರಮಟ್ಟದ ನಾಯಕರ ಹನಿಟ್ರ್ಯಾಪ್ ಆಗಿದೆ. ನಾನು ಲಿಖಿತ ರೂಪದಲ್ಲಿ ದೂರು ಕೊಡುತ್ತೇನೆ. ಅದನ್ನ ಆಧರಿಸಿ ತನಿಖೆ ನಡೆಸಬೇಕು. ಸುಮಾರು 48 ರಾಜ್ಯ, ರಾಷ್ಟ್ರಮಟ್ಟದ ನಾಯಕರ ಹನಿಟ್ರ್ಯಾಪ್ ವಿಡಿಯೋಗಳಿವೆ ಎನ್ನುವ ಸ್ಫೋಟಕ ವಿಚಾರವನ್ನು ಸದನದಲ್ಲಿ ತಿಳಿಸಿದರು.

ಇದನ್ನೂ ಓದಿ
Image
ಸಚಿವ ಸತೀಶ್ ಜಾರಕಿಹೊಳಿ ಬಾಂಬ್​: ನಮ್ಮ ಮಂತ್ರಿ ಮೇಲೆ ಹನಿಟ್ರ್ಯಾಪ್ ಆಗಿದೆ​
Image
ಹನಿಟ್ರ್ಯಾಪ್ ಬಲೆಯಲ್ಲಿ ಸಚಿವರನ್ನ ಸಿಲುಕಿಸಲು ಯತ್ನ: ಚರ್ಚೆಗೆ ಗ್ರಾಸ!

ತನಿಖೆ ಮಾಡಿಸಬೇಕೆಂದ ರಾಜಣ್ಣ

ಅಧ್ಯಕ್ಷರೇ ನನಗಿರೋ ಮಾಹಿತಿಯಂತೆ ಒಬ್ಬರು, ಇಬ್ಬರೂ ಇಲ್ಲ. ಇದು ನಮ್ಮ ರಾಜ್ಯಕ್ಕೆ ಸೀಮಿತವಾಗಿಲ್ಲ. ರಾಷ್ಟ್ರಮಟ್ಟದ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಇದರಲ್ಲಿ ಸಿಲುಕಿದ್ದಾರೆ. 48 ಜನ ಈ ಸಿಡಿನಲ್ಲಿ ಇದ್ದಾರೆ. ಸಾರ್ವಜನಿಕ ಜೀವನದಲ್ಲಿ ಹೀಗಾಗಬಾರದು. ಅವರು ಯಾರೇ ಇರಲಿ ಬಹಿರಂಗ ಆಗಲಿ. ವಾಸ್ತವ ಏನು ಎಂಬುದನ್ನ ಜನರಿಗೆ ಗೊತ್ತಾಗಬೇಕು. ಇದರ ತನಿಖೆಯನ್ನ ಮಾಡಿಸಬೇಕು ಎಂದು ಗೃಹ ಮಂತ್ರಿಗಳಿಗೆ ನಾನು ಒತ್ತಾಯಿಸುತ್ತೇನೆ. ಇದರಲ್ಲಿ ಯಾರೆಲ್ಲಾ ಇದ್ದಾರೆ. ಇದರ ಪ್ರೊಡ್ಯೂಸರ್ ಯಾರು. ಎಲ್ಲಾ ತನಿಖೆ ಮೂಲಕ ಹೊರಗೆ ಬರಬೇಕು. ಇದೊಂದು ಪಿಡುಗು, ಸಾರ್ವಜನಿಕವಾಗಿ ಬಹಿರಂಗವಾಗಬೇಕು. ನನ್ನ ಮೇಲೆ ಕೂಡ ಅಟೆಂಪ್ಟ್ ಮಾಡಿದ ಬಗ್ಗೆ ಪುರಾವೆ ಇವೆ. ಎಲ್ಲವನ್ನೂ ಸೇರಿ ನಾನು ದೂರು ನೀಡುತ್ತೇನೆ ಎಂದರು.

ಉನ್ನತ ಮಟ್ಟದ ತನಿಖೆಗೆ ಆದೇಶಿಸುವೆ ಎಂದ ಗೃಹ ಸಚಿವ

ಇನ್ನು ರಾಜಣ್ಣ ಅವರು ಈ ಹನಿಟ್ರ್ಯಾಪ್​ ಬಗ್ಗೆ ಪ್ರಸ್ತಾಪ ಮಾಡಿದ್ದು, ಇದರ ಹಿಂದಿರುವವರನ್ನು ತನಿಖೆ ಮಾಡಿ ಬಯಲಿಗೆಳೆಯಬೇಕೆಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ರಾಜಣ್ಣ ಅವರು ಲಿಖಿತ ದೂರು ನೀಡುವುದಾಗಿ ಹೇಳಿದ್ದಾರೆ. ಲಿಖಿತ ದೂರು ನೀಡಿದರೆ ಉನ್ನತ ಮಟ್ಟದ ತನಿಖೆಗೆ ಆದೇಶಿಸುವೆ ಎಂದು ಸ್ಪಷ್ಟಪಡಿಸಿದರು.

ಇನ್ನು ಇದೇ ವೇಳೆ ನನ್ನ ಮೇಲಿನ ಪ್ರಕರಣ ಏನು ಮಾಡುತ್ತೀರಿ ಎಂದು ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರ ಗೃಹ ಸಚಿವ ಪರಮೇಶ್ವರ್​ ಅವರನ್ನು ಪ್ರಶ್ನಿಸಿದರು. ಈ ವೇಳೆ ಮಧ್ಯೆ ಪ್ರವೇಶಿಸಿದ ಸ್ಪೀಕರ್, ನೀವು ಲಿಖಿತವಾಗಿ ದೂರು ಕೊಡಿ ಎಂದು ಸಲಹೆ ನೀಡಿದರು.

ಆಗ ಮಧ್ಯೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ , ಯಾವ ತನಿಖೆ ಎಂದು ಘೋಷಿಸುವಂತೆ ಪಟ್ಟು ಹಿಡಿದರು. ಹಲವರನ್ನು ಹನಿಟ್ರ್ಯಾಪ್ ಮಾಡಿರುವ ಬಗ್ಗೆ ಆರೋಪವಿದೆ. ಹಾಗಾಗಿ ಜಡ್ಜ್ ನೇತೃತ್ವದಲ್ಲಿ ತನಿಖೆಗೆ ಒತ್ತಾಯಿಸಿದರು.

Published On - 4:32 pm, Thu, 20 March 25

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ