ಎಷ್ಟೇ ಕೊರೊನಾ ಅಲೆ ಬರಲಿ..ನೀವಿರುವವರೆಗೂ ನಮಗೆ ಏನೂ ಆಗಲ್ಲ; ಶಾಸಕ ರೇಣುಕಾಚಾರ್ಯಗೆ ಗ್ರಾಮಸ್ಥರಿಂದ ಶ್ಲಾಘನೆ
ಇದೇ ವೇಳೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ನಾನು ರಾತ್ರಿ ಒಂದು ಗಂಟೆಗೆ ಮಲಗಿ ಬೆಳಗ್ಗೆ ಐದು ಗಂಟೆಗೆ ಎದ್ದು ಸೋಂಕಿತರಿಗೆ ಯೋಗ ಮಾಡಿಸುವೆ. ಮೂರನೇ ಅಲೆ ಎದುರಿಸಲು ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ದಾವಣಗೆರೆ: ನೀವು ಇರುವವರೆಗೂ ಕೊರೊನಾ ಸೋಂಕಿನ ಐದಾರು ಅಲೆ ಬಂದರೂ ನಮಗೆ ಏನೂ ಆಗುವುದಿಲ್ಲ ಎಂದು ಜನರಿಂದ ಶ್ಲಾಘನೆಗೆ ಪಾತ್ರವಾಗುವ ಭಾಗ್ಯ ದೊರೆತಿದ್ದು ಹೊನ್ನಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ತಿಮ್ಲಾಪುರ ಗ್ರಾಮಸ್ಥರು ಶಾಸಕ ರೇಣುಕಾಚಾರ್ಯ ಅವರಿಗೆ ವಂದನಾ ಕಾರ್ಯಕ್ರಮ ಏರ್ಪಡಿಸಿದ್ದರು. ಶಾಸಕ ರೇಣುಕಾಚಾರ್ಯ ಗ್ರಾಮದಲ್ಲಿ ಲಸಿಕೆ ಅಭಿಯಾನವನ್ನು ಆರಂಭಿಸಿದ ಕಾರಣಕ್ಕೆ ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಗ್ರಾಮಸ್ಥರು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ನಿಮ್ಮಂತಹ ಆತ್ಮಸ್ಥೈರ್ಯ ತುಂಬುವ ಶಾಸಕರಿದ್ದರೇ ಸಾಕು. ಯಾವ ಅಲೆ ಬಂದರೂ ನಮಗೆ ಏನೂ ಆಗುವುದಿಲ್ಲ ಎಂದು ಶಾಸಕ ರೇಣುಕಾಚಾರ್ಯಗೆ ಧನ್ಯವಾದ ಅರ್ಪಿಸಿದ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದರು. ಇದೇ ವೇಳೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ನಾನು ರಾತ್ರಿ ಒಂದು ಗಂಟೆಗೆ ಮಲಗಿ ಬೆಳಗ್ಗೆ ಐದು ಗಂಟೆಗೆ ಎದ್ದು ಸೋಂಕಿತರಿಗೆ ಯೋಗ ಮಾಡಿಸುವೆ. ಮೂರನೇ ಅಲೆ ಎದುರಿಸಲು ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕೊರೊನಾದಿಂದ ಅನಾಥಳಾದ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಕೊರೊನಾ ಮಹಾಮಾರಿ ಕಾಲದಲ್ಲಿ ತಮ್ಮ ಕ್ಷೇತ್ರದಲ್ಲಿ ಜನಸೇವೆಯಲ್ಲಿ ಸಕ್ರಿಯವಾಗಿರುವ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಈಗ ಇನ್ನೂ ಒಂದು ಹೆಜ್ಜೆ ಮುಂದಿಟ್ಟು, ಕೊರೊನಾ ಕಾಲದಲ್ಲಿ ಅನಾಥಳಾದ ಬಾಲಕಿಯನ್ನು ದತ್ತು ತೆಗೆದುಕೊಳ್ಳುವ ಮಾತನ್ನಾಡಿದ್ದಾರೆ. ಪತ್ನಿ ಸುಮಿತ್ರಾ ಅವರ ಜತೆ ಬಾಲಕಿಯ ನಿವಾಸಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಬಾಲಕಿಯ ಸಂಬಂಧಿಕರು ಒಪ್ಪಿದರೆ ದತ್ತು ಪಡೆಯುವುದಾಗಿ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದೊಡ್ಡೇರಹಳ್ಳಿ ಗ್ರಾಮ ಬಾಲಕಿ ಕೊರೊನಾ ಸೋಂಕಿನಿಂದಾಗಿ ತಂದೆಯನ್ನು ಕಳೆದುಕೊಂಡಿದ್ದಾಳೆ. ಕೆಲ ವರ್ಷಗಳ ಹಿಂದೆ ತಾಯಿಯನ್ನು ಕಳೆದುಕೊಂಡು, ಎರಡು ತಿಂಗಳ ಹಿಂದೆ ಕೋವಿಡ್ ನಿಂದ ತಂದೆಯನ್ನೂ ಬಾಲಕಿ ಕಳೆದುಕೊಂಡಿದ್ದಾಳೆ. ಶಾಸಕ ರೇಣುಕಾಚಾರ್ಯ ಇಂದು ಆ ಬಾಲಕಿಗೆ ಸಾಂತ್ವನ ಹೇಳಿ, ಆರ್ಥಿಕ ಸಹಾಯ ಮಾಡಿದ್ದಾರೆ.
ಬಾಲಕಿಯ ಸಂಬಂಧಿಕರು ಒಪ್ಪಿದರೆ ದತ್ತು ಪಡೆದು, ತಂದೆ-ತಾಯಿಯ ಸ್ಥಾನದಲ್ಲಿ ನಿಂತು ಮುಂದಿನ ವಿದ್ಯಾಭ್ಯಾಸ ಕೊಡಿಸುವುದಾಗಿ ಶಾಸಕ ರೇಣುಕಾಚಾರ್ಯ ಹೇಳಿದರು. ರೇಣುಕಾಚಾರ್ಯ ದಂಪತಿ ಬಾಲಕಿಯನ್ನು ಬಾಚಿ ತಬ್ಬಿಕೊಂಡು ಸಾಂತ್ವನ ಹೇಳಿದರು.
ಇದನ್ನೂ ಓದಿ:
ಬಳ್ಳಾರಿ: ಕೊವಿಡ್ನಿಂದ ಗುಣಮುಖರಾದ ಮಕ್ಕಳಲ್ಲಿ ಮಿಸ್- ಸಿ ಕಾಯಿಲೆ; ಪೋಷಕರಲ್ಲಿ ಹೆಚ್ಚಿದ ಆತಂಕ
ಏಷ್ಯಾದಲ್ಲಿ ಕೊವಿಡ್-19: ಮೂರನೇ ಅಲೆಯ ಆತಂಕದಲ್ಲಿ ಭಾರತ; ಇತರ ರಾಷ್ಟ್ರಗಳು ಏನೇನು ಸಿದ್ಧತೆ ಮಾಡಿಕೊಂಡಿವೆ?
(Honnali MLA MP Renukacharya Appreciated by villagers for Covid Vaccine distribution drive)