AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ನಶೆಯಲ್ಲೇ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ಬೆಂಗಳೂರು ಹೊರವಲಯದಲ್ಲಿ ಭೀಕರ ಕೃತ್ಯ

ಬೆಂಗಳೂರು ಹೊರವಲಯದ ತಾವರೆಕೆರೆಯಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನೊಬ್ಬ ಆಕೆಯನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾದ ಘಟನೆ ಬುಧವಾರ ನಡೆದಿದೆ. ತಂದೆ, ತಾಯಿ ಹಾಗೂ ಸಹೋದರ ಕೂಲಿ ಕೆಲಸಕ್ಕೆ ಹೋಗಿದ್ದಾಗ ಮಟಮಟ ಮಧ್ಯಾಹ್ನವೇ ಮನೆಗೆ ನುಗ್ಗಿದ್ದ ಆರೋಪಿ ಕೃತ್ಯ ಎಸಗಿ ಪರಾರಿಯಾಗಿದ್ದಾನೆ.

ಗಾಂಜಾ ನಶೆಯಲ್ಲೇ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ಬೆಂಗಳೂರು ಹೊರವಲಯದಲ್ಲಿ ಭೀಕರ ಕೃತ್ಯ
ಸಾಂದರ್ಭಿಕ ಚಿತ್ರ
ಪ್ರಶಾಂತ್​ ಬಿ.
| Updated By: Ganapathi Sharma|

Updated on: Jul 10, 2025 | 7:23 AM

Share

ಬೆಂಗಳೂರು, ಜುಲೈ 10: ಮನೆಯಲ್ಲಿ ಒಂಟಿಯಾಗಿ ಇದ್ದ 14 ವರ್ಷದ ಬಾಲಕಿಯ ಮೇಲೆ ಆತ್ಯಚಾರವೆಸಗಿ ನಂತರ ಆಕೆಯನ್ನು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬೆಂಗಳೂರು (Bengaluru) ಹೊರವಲಯದ ತಾವರೆಕೆರೆ ನಗರದಲ್ಲಿ ಬುಧವಾರ ನಡೆದಿದೆ. ಇದರಿಂದಾಗಿ, ಮೂಲತಃ ಕೊಪ್ಪಳ ಜಿಲ್ಲೆಯಿಂದ ಒಂದೂವರೆ ವರ್ಷದ ಹಿಂದೆ ಹೊಟ್ಟೆಪಾಡಿಗಾಗಿ ಕೆಲಸ ಅರಸಿಕೊಂಡು ತಾವರೆಕೆರೆಗೆ ಬಂದ ಆ ಕುಟುಂಬ ಆಘಾತಕ್ಕೊಳಗಾಗಿದೆ. ಬಾಲಕಿಯ ತಂದೆ, ತಾಯಿ ಹಾಗೂ ಸಹೋದರ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಆರೋಪಿ ಕೃತ್ಯ ಎಸಗಿದ್ದಾನೆ.

ಬಾಲಕಿಯ ತಂದೆ ಹಾಗೂ ತಾಯಿ ಕೂಲಿಕೆಲಸಕ್ಕೆ ಹೋಗುತ್ತಿದ್ದರು. ಎರಡನೇ ಮಗ ಸಹ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಕೊನೆಯ ಮಗನನ್ನು ತಾವರೆಕೆರೆಯಲ್ಲಿ ಶಾಲೆಗೆ‌ ಸೇರಿಸಿದ್ದರು. ಆರನೇ ತರಗತಿವರೆಗೂ ವ್ಯಾಸಂಗ ಮಾಡಿದ್ದ ಬಾಲಕಿ ಶಾಲೆಗೆ ಹೋಗದೇ ಮನೆಯಲ್ಲೇ ಇರುತ್ತಿದ್ದಳು. ಪ್ರತಿನಿತ್ಯದಂತೆ ಬುಧವಾರ ಸಹ ದಂಪತಿ ಬೆಳಗ್ಗೆ 8 ಗಂಟೆ ಸಮಯಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದರು. ಬಾಲಕಿಯ ಅಣ್ಣ ಹಾಗೂ ತಮ್ಮ ಕೆಲಸ ಹಾಗೂ ಶಾಲೆಗೆ ಹೋಗಿದ್ದರು. ಹೀಗಾಗಿ ಮನೆಯಲ್ಲಿ ಬಾಲಕಿ ಮಾತ್ರ ಇದ್ದಳು.

ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಮನೆ ಹೊಕ್ಕ ದುರುಳ ಬಾಲಕಿಯ ಮೇಲೆ ಎರಗಿ ಆಕೆಯನ್ನು ಆತ್ಯಾಚಾರಗೈದು ಆನಂತರ ಸಿಲಿಂಡರ್​​ನಿಂದ ಮುಖಕ್ಕೆ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಬಾಲಕಿಯ ಅಣ್ಣ ಕೆಲಸ ಮುಗಿಸಿ ಊಟಕ್ಕೆಂದು ಮಧ್ಯಾಹ್ನ ಮನೆಗೆ ಬಂದಾಗ ಆಕೆ ವಿವಸ್ತ್ರವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದಳು. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು ಎನ್ನುವಷ್ಟರಲ್ಲಿ ಪ್ರಾಣಪಕ್ಷಿ ಹಾರಿಹೋಗಿತ್ತು.

ಇದನ್ನೂ ಓದಿ
Image
ದೆಹಲಿಯಲ್ಲಿ ಸಿಎಂ, ಡಿಸಿಎಂ ಕುತೂಹಲದ ನಡೆ: ಇಂದು ಸಂಜೆ ಹೈಕಮಾಂಡ್ ಭೇಟಿ
Image
ಭೇಟಿ ಸಕ್ಸಸ್: ಸಿದ್ದರಾಮಯ್ಯ ಬೇಡಿಕೆಗಳಿಗೆ ಸ್ಪಂದಿಸಿದ ರಕ್ಷಣಾ ಸಚಿವ!
Image
ಸಂಪುಟ ವಿಸ್ತರಣೆಗಾಗಿ ದೆಹಲಿಗೆ ಬಂದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
Image
ಪಿಎಸ್​ಐ, ಕಾನ್​ಸ್ಟೇಬಲ್ ಆಕಾಂಕ್ಷಿಗಳಿಗೆ ಗೃಹ ಸಚಿವರಿಂದ ಗುಡ್ ನ್ಯೂಸ್

ಗಾಂಜಾ ನಶೆಯಲ್ಲೇ ಅತ್ಯಾಚಾರ, ಕೊಲೆ: ಆರೋಪಿಯ ಬಂಧನ

ಬಾಲಕಿಯ ಮೇಲೆ ಎರಗಿ ಕೊಂದು ಹಾಕಿದ್ದಾತನನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ರಾಯಚೂರು ಮೂಲದವನಾಗಿದ್ದು, ಬಾಲಕಿ ಪೋಷಕರ ಬಗ್ಗೆ ಆತನಿಗೆ ಮೊದಲೇ ಗೊತ್ತಿತ್ತು ಎನ್ನಲಾಗಿದೆ. ತಾವರೆಕೆರೆ ಭಾಗದಲ್ಲಿ ಮರಗೆಲಸ ಮಾಡಿಕೊಂಡಿದ್ದವನು, ಬುಧವಾರ ಮಧ್ಯಾಹ್ನ ಗಾಂಜಾ ನಶೆಯಲ್ಲಿ ಮನೆಗೆ ನುಗ್ಗಿ ಈ ಕೃತ್ಯ ಎಸಗಿದ್ದಾನೆ. ರಾತ್ರಿ ತಾವರೆಕೆರೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ .

ಇದನ್ನೂ ಓದಿ: ಬೀದರ್ ಜಿಲ್ಲೆಯಲ್ಲಿ ಎರಡು ವರ್ಷದಲ್ಲಿ 132 ಮಂದಿ ರೈತರು ಆತ್ಮಹತ್ಯೆಗೆ ಶರಣು

ಬೈಕ್, ಮೊಬೈಲ್ ಕದ್ದಿದ್ದ ಆರೋಪಿ

ಆರೋಪಿ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಅಪರಿಚಿತ ವ್ಯಕ್ತಿಯ ಬೈಕ್ ಹಾಗೂ ಮೊಬೈಲ್ ಕಳ್ಳತನ ಮಾಡಿದ್ದ. ಬುಧವಾರ ಮಧ್ಯಾಹ್ನ ಅದೇ ಬೈಕ್​ನಲ್ಲಿ ಬಾಲಕಿಯ ಮನೆಯ ಬಳಿ ಬಂದಿದ್ದಾನೆ. ಆನಂತರ ಮನೆಯಿಂದ ದೂರದಲ್ಲಿ ಬೈಕ್ ನಿಲ್ಲಿಸಿ ಮನೆಗೆ ತೆರಳಿ ಕೃತ್ಯ ಎಸೆಗಿದ್ದಾನೆ. ಹತ್ಯೆ ನಂತರ ಮನೆಯಲ್ಲಿ ಇದ್ದ ಸಿಲಿಂಡರ್ ಸಹ ಹೊತ್ತೊಯ್ದಿದ್ದಾನೆ. ಆನಂತರ ಪಕ್ಕದ ಗ್ರಾಮವೊಂದರಲ್ಲಿ ಸಿಲಿಂಡರ್ ಮಾರಾಟ ಮಾಡಿದ್ದಾನೆ ಎಂಬುದು ತಿಳಿದುಬಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ