AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಲ್ಲರ್​ ಬಿಎಂಟಿಸಿಗೆ ಒಂದೇ ಕುಟುಂಬದ ಮೂವರು ಬಲಿ: ಓರ್ವ ಮಗು ಸ್ಥಿತಿ ಗಂಭೀರ

ಹೊಸಕೋಟೆ ತಾಲೂಕಿನ ಸೂಲಿಬೆಲೆ ಬಳಿ ರಾಂಗ್ ರೂಟ್‌ನಲ್ಲಿ ಬಂದ ಬಿಎಂಟಿಸಿ (BMTC) ಬಸ್ ಡಿಕ್ಕಿಯಾಗಿ ದೇವನಹಳ್ಳಿಯ ದಂಪತಿ ಹಾಗೂ 2 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಮತ್ತೋರ್ವ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಘಟನಾ ಸ್ಥಳಕ್ಕೆ ಸೂಲಿಬೆಲೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಿಲ್ಲರ್​ ಬಿಎಂಟಿಸಿಗೆ ಒಂದೇ ಕುಟುಂಬದ ಮೂವರು ಬಲಿ:  ಓರ್ವ ಮಗು ಸ್ಥಿತಿ ಗಂಭೀರ
ಕಿಲ್ಲರ್​ ಬಿಎಂಟಿಸಿಗೆ ಒಂದೇ ಕುಟುಂಬದ ಮೂವರು ಬಲಿImage Credit source: Tv9 Kannada
ನವೀನ್ ಕುಮಾರ್ ಟಿ
| Edited By: |

Updated on:Jun 19, 2026 | 8:05 PM

Share

ದೇವನಹಳ್ಳಿ, ಜೂನ್​​ 19: ಕಿಲ್ಲರ್​ ಬಿಎಂಟಿಸಿಗೆ ಒಂದೇ ಕುಟುಂಬದ ಮೂವರು ಬಲಿಯಾಗಿರುವ ಅಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಬಳಿ ನಡೆದಿದೆ. ಬೈಕ್​ಗೆ ಬಿಎಂಟಿಸಿ ಬಸ್​ ಡಿಕ್ಕಿಯಾದ ಪರಿಣಾಮ ದಂಪತಿ, ಪುತ್ರಿ ಮತಪಟ್ಟಿದ್ದಾರೆ. ಮೃತರನ್ನು ಅರುಣ್(35), ಅನುಷಾ(32) ಮತ್ತು ಹರ್ನಾ(2) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 5 ವರ್ಷದ ಅನುಶಿಕಾಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸೂಲಿಬೆಲೆಯಿಂದ ಹೊಸಕೋಟೆ ಕಡೆಗೆ ಹೋಗ್ತಿದ್ದ ಬಿಎಂಟಿಸಿ ಬಸ್ ದೇವನಹಳ್ಳಿ ಕಡೆ ಇಬ್ಬರು ಮಕ್ಕಳೊಂದಿಗೆ ದಂಪತಿ ತೆರಳುತ್ತಿದ್ದ ಬೈಕ್​​ಗೆ ಡಿಕ್ಕಿ ಹೊಡೆದಿದೆ. ರಾಂಗ್ ರೂಟ್​ನಲ್ಲಿ ಬಿಎಂಟಿಸಿ ಬಸ್ ಬಂದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಮೃತರು ದೇವನಹಳ್ಳಿ ತಾಲೂಕಿನ ತೆಲ್ಲಹಳ್ಳಿ ಗ್ರಾಮದ ನಿವಾಸಿಗಳು ಎಂಬುದು ಗೊತ್ತಾಗಿದೆ. ಘಟನಾ ಸ್ಥಳಕ್ಕೆ ಸೂಲಿಬೆಲೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲೊಂದು ವಿಚಿತ್ರ ಘಟನೆ; ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!

2 ದಿನಗಳಲ್ಲಿ ಬಿಎಂಟಿಸಿಗೆ ನಾಲ್ವರು ಬಲಿ

ಬಿಎಂಟಿಸಿ ಎಲೆಕ್ಟ್ರಿಕ್ ‌ಬಸ್ ಹರಿದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಮಂಗನಹಳ್ಳಿ ಕ್ರಾಸ್ ಬಳಿ ನಿನ್ನೆ (ಜೂನ್​​ 18) ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ರಾಜು(58) ಮೃತ ದುರ್ದೈವಿಯಾಗಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದ ಈತ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬಸ್ ಹರಿದು ದುರಂತ ಸಂಭವಿಸಿತ್ತು. ಮನೆಗೆ ತರಕಾರಿ ತರೋಣ ಅಂತಾ ಹೊರಗೆ ಬಂದಿದ್ದ ರಾಜು, ಮಂಗನಹಳ್ಳಿ ಕ್ರಾಸ್ ಬಳಿ ರಸ್ತೆ ದಾಟುವ ವೇಳೆ ಅಮ್ಮ ಆಶ್ರಮ ಸರ್ಕಲ್ ಕಡೆಯಿಂದ ಅತಿ ವೇಗವಾಗಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ರಾಜು ಮೈ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಘಟನೆ ಮಾಸುವ ಮುನ್ನವೇ ಬಿಎಂಟಿಸಿ ಬಸ್​​ ಈಗ ಮತ್ತೆ ಮೂವರ ಬಲಿ ಪಡೆದಿರೋದು ಆತಂಕಕ್ಕೆ ಕಾರಣವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:58 pm, Fri, 19 June 26

Follow Us
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!