ಬೆಂಗಳೂರು ಗ್ರಾಮಾಂತರ: ಎಂಟಿಬಿ ನಾಗಾರಜ್ ವಿರುದ್ಧ ತೊಡೆ ತಟ್ಟಿದ ಶರತ್ ಬಚ್ಚೇಗೌಡ, ಡಿ.5ರಂದು ನಡೆಯಲಿರುವ ಉಪಚುನಾವಣೆಗೆ ಹೊಸಕೋಟೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬರುವ ಕಾರ್ಯಕರ್ತರಿಗೆ ಸ್ವಾಭಿಮಾನಿ ಅನ್ನುವ ಹೆಸರು ಮುದ್ರಿತ ಟಿ-ಶರ್ಟ್ ಹಂಚಿಕೆ ಮಾಡಿದ್ದಾರೆ.
ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಸ್ವತಂತ್ರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬರುವಾಗ ಟಿ-ಶರ್ಟ್ ಧರಿಸುವಂತೆ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಬೆಂಬಲಿಗರಿಗೆ ಕರೆ ನೀಡಿದ್ದಾರೆ. ಸ್ವಾಭಿಮಾನದ ಹೆಸರಲ್ಲಿ ಸ್ಪರ್ಧೆ ಮಾಡುತ್ತಿರುವ ಶರತ್ ಬಚ್ಚೇಗೌಡ ಇಂದು ನಾಮಪತ್ರ ಸಲ್ಲಿಸುವ ಮುಖಾಂತರ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ:
ಅಧಿಕೃತವಾಗಿ ಬಿಜೆಪಿ ನಾಯಕರು ನನ್ನನ್ನು ಭೇಟಿ ಮಾಡಿಲ್ಲ. ನಾನು ಸ್ವತಂತ್ರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸುತ್ತೇನೆ. ಹೆಚ್.ಡಿ.ಕುಮಾರಸ್ವಾಮಿ ಬೆಂಬಲ ಸೂಚಿಸಿರುವುದನ್ನ ಸ್ವಾಗತ ಮಾಡ್ತೀನಿ. ಇನ್ನೂ ಕುಮಾರಣ್ಣ ಅವರ ಭೇಟಿ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ದೇವನಹಳ್ಳಿಯ ವಿಜಯಪುರದಲ್ಲಿ ಶರತ್ ಬಚ್ಚೇಗೌಡ ಹೇಳಿದ್ದಾರೆ.
Published On - 10:16 am, Thu, 14 November 19