ಆಸ್ಪತ್ರೆಗಳ ‘ಚಿಕಿತ್ಸೆಗೆ’ ಆರೋಗ್ಯ ಸಚಿವ ರಾಮುಲು ವಿಭಿನ್ನ ಪ್ರಯೋಗ
ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀರಾಮುಲು ನಿನ್ನೆ ರಾತ್ರಿಯಿಂದಲೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿರುವ ಸಮಸ್ಯೆಯನ್ನು ಸ್ವತಃ ಶ್ರೀರಾಮುಲು ಅವರೇ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿ ಹತ್ತಿರದಿಂದಲೇ ಅರಿಯುವ ಪ್ರಯತ್ನದಲ್ಲಿದ್ದಾರೆ. ಇಗಾಗಲೇ ಆಸ್ಪತ್ರೆಯ ಶೌಚಾಲಯದಲ್ಲೇ ಸ್ನಾನ ಮುಗಿಸಿದ್ದಾರೆ. ಆಸ್ಪತ್ರೆಯಲ್ಲಿನ ಸಮಸ್ಯೆ ಬಗ್ಗೆ ಸಚಿವ ಶ್ರೀರಾಮುಲು ಸಿಬ್ಬಂದಿಯ ಜೊತೆ ಚಾಮರಾಜನಗರ ಜಿಲ್ಲಾಸ್ಪತ್ರೆಯ ಆವರಣದಲ್ಲೇ ಸಭೆಯನ್ನು ನಡೆಸಿದ್ದು,ಸಚಿವರು ಜಿಲ್ಲಾಸ್ಪತ್ರೆಯಲ್ಲಿಇರುವ ಕುಂದು ಕೊರತೆಗಳು, ಆಸ್ಪತ್ರೆಯ ಶುಶ್ರೂಷಕರು, ಡಿ ದರ್ಜೆ ನೌಕರರ ಸಮಸ್ಯೆಗಳು, ಮತ್ತು ಸೇವಾ ಭದ್ರತೆ, ಸಂಬಳದ ಕೊರತೆ […]
ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀರಾಮುಲು ನಿನ್ನೆ ರಾತ್ರಿಯಿಂದಲೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿರುವ ಸಮಸ್ಯೆಯನ್ನು ಸ್ವತಃ ಶ್ರೀರಾಮುಲು ಅವರೇ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿ ಹತ್ತಿರದಿಂದಲೇ ಅರಿಯುವ ಪ್ರಯತ್ನದಲ್ಲಿದ್ದಾರೆ. ಇಗಾಗಲೇ ಆಸ್ಪತ್ರೆಯ ಶೌಚಾಲಯದಲ್ಲೇ ಸ್ನಾನ ಮುಗಿಸಿದ್ದಾರೆ.
ಆಸ್ಪತ್ರೆಯಲ್ಲಿನ ಸಮಸ್ಯೆ ಬಗ್ಗೆ ಸಚಿವ ಶ್ರೀರಾಮುಲು ಸಿಬ್ಬಂದಿಯ ಜೊತೆ ಚಾಮರಾಜನಗರ ಜಿಲ್ಲಾಸ್ಪತ್ರೆಯ ಆವರಣದಲ್ಲೇ ಸಭೆಯನ್ನು ನಡೆಸಿದ್ದು,ಸಚಿವರು ಜಿಲ್ಲಾಸ್ಪತ್ರೆಯಲ್ಲಿಇರುವ ಕುಂದು ಕೊರತೆಗಳು, ಆಸ್ಪತ್ರೆಯ ಶುಶ್ರೂಷಕರು, ಡಿ ದರ್ಜೆ ನೌಕರರ ಸಮಸ್ಯೆಗಳು, ಮತ್ತು ಸೇವಾ ಭದ್ರತೆ, ಸಂಬಳದ ಕೊರತೆ ಬಗ್ಗೆ ಆಲಿಸಿದ್ದಾರೆ. ಸೇವಾ ಭದ್ರತೆ, ಸಂಬಳದ ಕೊರತೆ ಬಗ್ಗೆ ಶುಶ್ರೂಷಕರು ಡಿ ದರ್ಜೆ ನೌಕರು ಸಚಿವರಿಗೆ ಮನವಿ ಮಾಡಿದ್ದಾರೆ.
ಆಸ್ಪತ್ರೆಯ ಸಮಸ್ಯೆಗಳನ್ನು ಅರಿತ ಸಚಿವರು ಕೇಂದ್ರ ಸರ್ಕಾರ ಕೈಗೊಂಡಿರುವ ಹೊಸ ಯೋಜನೆ ಬಗ್ಗೆ ಆಸ್ಪತ್ರೆ ಸಿಬ್ಬಂದಿಗಳಿಗೆ ವಿವರಿಸಿದ್ರು. ಇನ್ನೂ ಸಂಬಳ ಹೆಚ್ಚಿಸುವುದಾಗಿ ಭರವಸೆ ನೀಡಿದ್ದಾರೆ.
Published On - 11:21 am, Wed, 25 September 19