ಬಾಗಲಕೋಟೆ: ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದ ಹಾಸ್ಟೆಲ್‌ಗಳಲ್ಲಿದ್ದ 11 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ಹಾಸ್ಟೆಲ್‌ನಲ್ಲಿ 8, ಪಕ್ಕದಲ್ಲೇ ಇರುವ ಹಿಂದುಳಿದ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್‌ನಲ್ಲಿ 3 ಕೇಸ್ಗಳು ಪತ್ತೆಯಾಗಿವೆ. ಅಲ್ಪಸಂಖ್ಯಾತ ಹಾಸ್ಟೆಲ್ನಲ್ಲಿ ಐವರು ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಕ್ವಾರಂಟೈನ್ ಮಾಡಲಾಗಿದ್ದು ಮೂವರು ವಿದ್ಯಾರ್ಥಿಗಳು ಮನೆಗೆ ಹೋಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಸದ್ಯ ಕೊರೊನಾ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಹಾಸ್ಟೆಲ್ ಬಂದ್ ಮಾಡಲಾಗಿದೆ. ಈ ಮೊದಲು ಅಲ್ಪಸಂಖ್ಯಾತ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ನ ಅಡುಗೆ ತಯಾರಿಸುವ ಮಹಿಳೆಗೆ ಸೋಂಕು ಕಾಣಿಸಿಕೊಂಡಿತ್ತು.
ನಿನ್ನೆ ರಾಜ್ಯದಲ್ಲಿ 21,794 ಜನರಿಗೆ ಕೊರೊನಾ ದೃಢವಾಗಿದ್ದು, ಸೋಂಕಿತರ ಸಂಖ್ಯೆ 11,98,644 ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 4,49,889 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ರೆ,1,14,833 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೂ ರಾಜ್ಯದಲ್ಲಿ ನಿನ್ನೆ 21ಸಾವಿರದ ಗಡಿ ದಾಟಿ ಕೊರೊನಾ ಅಬ್ಬರಿಸಿದ್ರೆ, 149 ಜೀವಗಳನ್ನ ಕೊಂದು ಹಾಕಿದೆ. ಆ ಮೂಲಕ ಇಲ್ಲಿ ತನಕ 13,646 ಜನ ಹೆಮ್ಮಾರಿ ಆರ್ಭಟಕ್ಕೆ ಪ್ರಾಣ ಬಿಟ್ಟಿದ್ದಾರೆ.
ಇದನ್ನೂ ಓದಿ: ಕಲಬುರಗಿಯಲ್ಲಿ ಬರ್ಬರ ಹತ್ಯೆ; ಚಿಕಿತ್ಸೆ ಫಲಿಸದೆ ಆಟೋ ಚಾಲಕ ಸಾವು