AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕ್ಸಲ್ ವಿಕ್ರಂ ಗೌಡ ಪೊಲೀಸ್ ಬಲೆಗೆ ಬಿದ್ದಿದ್ಹೇಗೆ? ರೋಚಕ ಕಾರ್ಯಾಚರಣೆಯ ರಹಸ್ಯ ಇಲ್ಲಿದೆ

ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕ್ಸಲ್ ಮುಖಂಡ ವಿಕ್ರಂ ಗೌಡನನ್ನು ನಕ್ಸಲ್ ನಿಗ್ರಹ ಪಡೆ ಪೊಲೀಸರು ಕೊನೆಗೂ ಖೆಡ್ಡಾಕ್ಕೆ ಕೆಡವಿದ್ದು ಹೇಗೆ? ಪೊಲೀಸರ ತಂತ್ರ ಹೇಗೆ ಕೆಲಸ ಮಾಡಿತು? ಎಎನ್​ಎಫ್​ ಗುಂಡಿಗೆ ವಿಕ್ರಂ ಗೌಡ ಬಲಿಯಾದ ಕ್ಷಣ ಹೇಗಿತ್ತು? ಎಲ್ಲ ವಿವರಗಳು ಇಲ್ಲಿವೆ.

ನಕ್ಸಲ್ ವಿಕ್ರಂ ಗೌಡ ಪೊಲೀಸ್ ಬಲೆಗೆ ಬಿದ್ದಿದ್ಹೇಗೆ? ರೋಚಕ ಕಾರ್ಯಾಚರಣೆಯ ರಹಸ್ಯ ಇಲ್ಲಿದೆ
ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆದ ಪಿತ್ತಬೈಲ್​ನ ಪ್ರದೇಶ
ಪ್ರಜ್ವಲ್ ಅಮೀನ್​, ಉಡುಪಿ
| Updated By: Ganapathi Sharma|

Updated on:Nov 20, 2024 | 9:29 AM

Share

ಉಡುಪಿ, ನವೆಂಬರ್ 20: ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸಿದ್ದ ಎಎನ್​ಎಫ್​ ಪೊಲೀಸರು ಸೋಮವಾರ ರಾತ್ರಿ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕಬ್ಬಿನಾಲೆ ಬಳಿ ಎನ್​​ಕೌಂಟರ್​ ಮಾಡಿ ನಕ್ಸಲ್ ಮುಖಂಡ ವಿಕ್ರಂ ಗೌಡನನ್ನು ಹತ್ಯೆ ಮಾಡಿದ್ದರು. ಆದರೆ, ವಿಕ್ರಂ ಗೌಡ ನಕ್ಸಲ್ ನಿಗ್ರಹ ಪಡೆ ಪೊಲೀಸರ ಬಲೆಗೆ ಅಷ್ಟು ಸುಲಭವಾಗಿ ಬಿದ್ದಿದ್ಹೇಗೆ ಎಂಬ ಕುತೂಹಲ ಈಗ ಮೂಡಿದೆ. ವಿಕ್ರಂ ಗೌಡನನ್ನು ಪೊಲೀಸರು ಖೆಡ್ಡಾಕ್ಕೆ ಕೆಡವಿದ ರೀತಿ ಹೇಗಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ಸೋಮವಾರ ಸಂಜೆ 6.30 ರ ವೇಳೆಗೆ ಕಬ್ಬಿನಾಲೆಯ ಪಿತ್ತಬೈಲ್​​​ನಲ್ಲಿರುವ ಮನೆಗೆ ವಿಕ್ರಂ ಹಾಗೂ ತಂಡ ಬಂದಿತ್ತು. ಪಿತ್ತಬೈಲ್​​ನಲ್ಲಿ ಮೂರು ಕುಟುಂಬಗಳು ವಾಸವಾಗಿವೆ. ಈ ಪೈಕಿ ಸುಧಕರ್ ಗೌಡ ಎಂಬುವವರ ಮನೆಗೆ ವಿಕ್ರಂ ಗೌಡ ಹಾಗೂ ತಂಡ ಬಂದಿತ್ತು. ದಿನಸಿ ಸಾಮಗ್ರಿ ಪಡೆಯುವುದಕ್ಕೆಂದು ಅವರು ಬಂದಿದ್ದರು.

ಮೂರು ದಿನಗಳ ಹಿಂದೆಯೇ ಮನೆ ಖಾಲಿ ಮಾಡಿಸಿದ್ದ ಎಎನ್​ಎಫ್

ಸುಧಕರ್ ಗೌಡ ಮನೆಗೆ ವಿಕ್ರಂ ಗೌಡ ಬರಬಹುದು ಎಂಬ ಸುಳಿವಿದ್ದ ಎಎನ್​ಎಫ್ ಸಿಬ್ಬಂದಿ ಮೂರು ದಿನಗಳ‌ ಹಿಂದೆಯೇ ಸುಧಕರ್ ಕುಟುಂಬವನ್ನು ಅಲ್ಲಿಂದ ಖಾಲಿ ಮಾಡಿಸಿದ್ದರು. ಬಳಿಕ ಎಎನ್​ಎಫ್​ ಸಿಬ್ಬಂದಿಯೇ ಮನೆಯಲ್ಲಿ ತಂಗಿದ್ದರು. ಆದರೆ, ಮನೆಯೊಳಗೆ ಎಎನ್ಎಫ್ ಪಡೆ ಇರುವುದರ ಸಣ್ಣ ಸುಳಿವು ಕೂಡ ಇಲ್ಲದ ವಿಕ್ರಂ ಗೌಡ ಮನೆಯೊಳ ಹೊಕ್ಕಿದ್ದಾನೆ. ತಕ್ಷಣವೇ ಎಎನ್ಎಫ್ ಸಿಬ್ಬಂದಿ ಎದುರಾಗಿದ್ದಾರೆ. ಕೂಡಲೇ ವಿಕ್ರಂ ಗೌಡ ತಪ್ಪಿಸಿಕೊಂಡು ಓಡಿಹೋಗಲು ಅಂಗಳಕ್ಕೆ ಓಡಿ ಬಂದಿದ್ದ. ಆದರೆ ಅಂಗಳದಲ್ಲೇ ವಿಕ್ರಂ ಗೌಡನನ್ನು ಎಎನ್ಎಫ್ ಸಿಬ್ಬಂದಿ ಸುತ್ತುವರೆದಿದ್ದರು. ವಿಕ್ರಂ ಗೌಡನನ್ನು ಸುತ್ತುವರೆದ ಎಎನ್​ಎಫ್​ ಸಿಬ್ಬಂದಿ, ಶರಣಾಗುವಂತೆ ಸೂಚನೆ ನೀಡಿದ್ದಾರೆ. ಆದರೆ ಆತ, ‘ಪ್ರಾಣ ಕೊಟ್ಟರೂ ಶರಣಾಗಲ್ಲ’ ಎಂದಿದ್ದಲ್ಲದೆ, ತನ್ನ ನಾಡಬಂದೂಕಿನಿಂದ ದಾಳಿ‌ನಡೆಸಲು ಮುಂದಾಗಿದ್ದಾನೆ. ಈ ವೇಳೆ, ಮನೆಯ ಸುತ್ತಲೂ ಕವರ್ ಅಪ್ ಆಗಿದ್ದ ಎಎನ್ಎಫ್ ಸಿಬ್ಬಂದಿ ಪ್ರತಿ ದಾಳಿ ನಡೆಸಿದ್ದಾರೆ. ಮೂರೂ ಕಡೆಯಿಂದ ವಿಕ್ರಂ ಗೌಡನಿಗೆ ಗುಂಡು ಹೊಡೆದಿದ್ದಾರೆ. ಹೀಗಾಗಿ ಮನೆಯ ಅಂಗಳದಲ್ಲೇ ಆತ ಅಸುನೀಗಿದ.

ಇದನ್ನೂ ಓದಿ: ಯಾರು ಈ ವಿಕ್ರಂ ಗೌಡ? ಎನ್​ಕೌಂಟರ್​ಗೆ ಬಲಿಯಾದ ನಕ್ಸಲನ ಹಿನ್ನೆಲೆ ಇಲ್ಲಿದೆ

ಎಎನ್ಎಫ್ ಸಿಬ್ಬಂದಿಯ ಎಕೆ 47 ನಿಂದ ಹೊರಬಿದ್ದ ಆ ಮೂರು ಗುಂಡುಗಳು ಆತನ ಬಲಿಪಡೆದವು. ಎರಡು ಗುಂಡುಗಳು ಪಕ್ಕೆಲುಬು, ಒಂದು ಗುಂಡು ತೊಡೆಗೆ ತಗುಲಿತ್ತು.

ಪಿತ್ತಬೈಲ್ ಪಕ್ಕದ ಗ್ರಾಮದಲ್ಲಿಯೇ ವಾಸವಾಗಿದ್ದ ವಿಕ್ರಂ ಗೌಡ

ನಕ್ಸಲ್ ಮುಖಂಡ ವಿಕ್ರಂ ಗೌಡ ಎನ್​ಕೌಂಟರ್ ನಡೆದ ಪಕ್ಕದ ಗ್ರಾಮದಲ್ಲಿಯೇ ವಾಸವಾಗಿದ್ದ. ಪಿತೇಬೈಲ್​​​ನ ಪಕ್ಕದ ಗ್ರಾಮ ಕೂಡ್ಲೂವಿನ ನಾಡ್ಪಾಲಿನಲ್ಲಿ ವಾಸವಾಗಿದ್ದ. 20 ವರ್ಷದ ಹಿಂದೆ ಕೊಡ್ಲುವಿನ ಮನೆಯಲ್ಲಿ ಮನೆಯವರ ಜೊತೆ ವಾಸವಾಗಿದ್ದ. ಕಳೆದ 7 ವರ್ಷಗಳ ಹಿಂದೆ ಆತನ ಸಹೋದರಿ ಸುಗುಣ ಮನೆ ಕಟ್ಟಲು ತಯಾರಿ ನಡೆಸುತ್ತಿದ್ದರು. ಆದರೆ ಆರ್ಥಿಕ ಸಮಸ್ಯೆಯಿಂದ ಅರ್ಧದಲ್ಲಿಯೇ ಮನೆಯ ಕಾಮಗಾರಿ ಸ್ಥಗಿತಗೊಂಡಿತ್ತು. ಆದರೆ, ವಿಕ್ರಂ ಗೌಡ ಮಾತ್ರ 20 ವರ್ಷಗಳಿಂದ ಮನೆ ಕಡೆ ಮುಖ ಮಾಡಿರಲಿಲ್ಲ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:26 am, Wed, 20 November 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ