ವಯನಾಡ್​ ಗುಡ್ಡ ದುರಂತದಲ್ಲಿ ಸಾವನ್ನಪ್ಪಿದ ಕನ್ನಡಿಗರೆಷ್ಟು? ನಾಪತ್ತೆಯಾದವರು ಎಷ್ಟು? ಮಾಹಿತಿ ಹಂಚಿಕೊಂಡ ಸಂತೋಷ್ ಲಾಡ್

ಕಂಡು ಕೇಳರಿಯದ ಮಳೆಗೆ ಕೇರಳ ತತ್ತರಿಸಿದೆ. ರಾತ್ರಿ ಕಳೆದು ಬೆಳಗಾಗೋದ್ರಲ್ಲೇ ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿದು ಘೋರ ದುರಂತ ನಡೆದಿದೆ. ಕ್ಷಣಕ್ಷಣಕ್ಕೂ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆ ಆಗುತ್ತಿದೆ. ದುರಂತದಲ್ಲಿ ಕರ್ನಾಟಕದ ಜನರು ಮೃತಪಟ್ಟಿದ್ದು, ಪತ್ತೆ ಕೆಲವರು ನಾಪತ್ತೆ ಆಗಿದ್ದಾರೆ. ಸದ್ಯ ರಾಜ್ಯ ಸರ್ಕಾರದ ಸಚಿವ ಸಂತೋಷ್ ಲಾಡ್​ರನ್ನು ಘಟನಾ ಸ್ಥಳಕ್ಕೆ ಕಳುಹಿಸಿದ್ದು, ದುರಂತದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.​

ವಯನಾಡ್​ ಗುಡ್ಡ ದುರಂತದಲ್ಲಿ ಸಾವನ್ನಪ್ಪಿದ ಕನ್ನಡಿಗರೆಷ್ಟು? ನಾಪತ್ತೆಯಾದವರು ಎಷ್ಟು? ಮಾಹಿತಿ ಹಂಚಿಕೊಂಡ ಸಂತೋಷ್ ಲಾಡ್
ವಯನಾಡ್​ ಗುಡ್ಡ ದುರಂತದಲ್ಲಿ ಸಾವನ್ನಪ್ಪಿದ ಕನ್ನಡಿಗರೆಷ್ಟು? ನಾಪತ್ತೆಯಾದವರು ಎಷ್ಟು? ಮಾಹಿತಿ ಹಂಚಿಕೊಂಡ ಸಂತೋಷ್ ಲಾಡ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jul 31, 2024 | 8:57 PM

ಬೆಂಗಳೂರು/ಕೇರಳ, ಜುಲೈ 31: ಕೇರಳದ ವಯನಾಡು (Wayanad) ಜಿಲ್ಲೆಯಲ್ಲಿ ಗುಡ್ಡ ಕುಸಿದು ದೊಡ್ಡ ದುರಂತ ಸಂಭವಿಸಿದೆ. ಘಟನೆಯಲ್ಲಿ ಸದ್ಯ ಮೃತಪಟ್ಟರವರ ಸಂಖ್ಯೆ 254ಕ್ಕೆ ಏರಿಕೆ ಆಗಿದೆ. ಕರ್ನಾಟಕದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಸಿಎಂ ತಿಳಿಸಿದ್ದಾರೆ. ಸಿದ್ದರಾಮಯ್ಯ ಸೂಚನೆ ಮೇರೆಗೆ ಇದೀಗ ದುರಂತ ಸ್ಥಳಕ್ಕೆ ತುರ್ತಾಗಿ ಅಧಿಕಾರಿಗಳೊಂದಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಭೇಟಿ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸಂತೋಷ್ ಲಾಡ್​, ಸಿಎಂ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತೆರಳುತ್ತಿದ್ದೇನೆ.

ಸಚಿವ ಸಂತೋಷ್ ಲಾಡ್ ಟ್ವೀಟ್​ 

ಈಗಾಗಲೇ ನಾಲ್ವರು ಕನ್ನಡಿಗರು ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು, ಇನ್ನೂ ಹಲವರು ಸಿಲುಕಿರುವ, ನಾಪತ್ತೆಯಾಗಿರುವ ಮಾಹಿತಿ ಇದೆ. ಅವರೆಲ್ಲರ ರಕ್ಷಣೆಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಬೆಪ್ಪಾಡಿಯಲ್ಲಿ ಟಿವಿ9ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದು, ದುರಂತದಲ್ಲಿ ಇದುವರೆಗೆ 254 ಜನರು ಸಾವನಪ್ಪಿದ್ದಾರೆ. ದುರಂತದಲ್ಲಿ ಕರ್ನಾಟಕದ ಮೂವರು ಮೃತಪಟ್ಟಿದ್ದು, 9 ಜನರು ನಾಪತ್ತೆಯಾಗಿದ್ದಾರೆ.​ 10 ಕನ್ನಡಿಗರನ್ನ ರಕ್ಷಿಸಿ ಕಾಳಜಿ ಕೇಂದ್ರದಲ್ಲಿರಿಸಿದ್ದೇವೆ. ಕರ್ನಾಟಕದಿಂದ ಕೇರಳಕ್ಕೆ ಸಹಾಯ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ಗಾಯಾಳುಗಳಿಗೆ ಚಿಕಿತ್ಸೆ ಬೇಕಿದ್ದರೆ ಅವರಿಗೂ ಕೊಡುವ ಕೆಲಸ ಮಾಡುತ್ತೇನೆ. ನಾನು ಸಾಕಷ್ಟು ಇಂತಹ ದುರಂತ ಸ್ಥಳಕ್ಕೆ ಭೇಟಿ ಕೊಟ್ಟಿದ್ದೇನೆ. ಇದು ದೊಡ್ಡ ದುರಂತವಾಗಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:54 pm, Wed, 31 July 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್