Gruha Jyothi: ಬಾಡಿಗೆ ಮನೆ ಬದಲಾಯಿಸಿದ ನಂತರವೂ ಉಚಿತ ವಿದ್ಯುತ್ ಪಡೆಯಬಹುದು! ಮಾಡಬೇಕಾದದ್ದೇನು? ಇಲ್ಲಿದೆ ಮಾಹಿತಿ

ಬಾಡಿಗೆ ಮನೆ ಬದಲಾಯಿಸಿದಾಗ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುವುದು ಹೇಗೆ ಎಂಬುದೇ ಹೆಚ್ಚಿನವರ ಪ್ರಶ್ನೆಯಾಗಿತ್ತು. ಇದೀಗ ಸರ್ಕಾರ ಅದಕ್ಕೆ ಅವಕಾಶ ಕಲ್ಪಿಸಿದೆ. ನಮ್ಮ ಬೆಸ್ಕಾಂ ಈ ಬಗ್ಗೆ ಮಾಹಿತಿ ನೀಡಿದ್ದು, ಆನ್​ಲೈನ್ ಅರ್ಜಿ ಸಲ್ಲಿಸಲು ಲಿಂಕ್​ ಅನ್ನೂ ನೀಡಿದೆ. ಅರ್ಜಿ ಸಲ್ಲಿಕೆ ಲಿಂಕ್ ಇಲ್ಲಿದೆ. ಜತೆಗೆ ಏನು ಮಾಡಬೇಕೆಂಬ ಮಾಹಿತಿಯೂ ಇದೆ.

Gruha Jyothi: ಬಾಡಿಗೆ ಮನೆ ಬದಲಾಯಿಸಿದ ನಂತರವೂ ಉಚಿತ ವಿದ್ಯುತ್ ಪಡೆಯಬಹುದು! ಮಾಡಬೇಕಾದದ್ದೇನು? ಇಲ್ಲಿದೆ ಮಾಹಿತಿ
ಗೃಹ ಜ್ಯೋತಿ
Follow us
|

Updated on: Aug 08, 2024 | 11:03 AM

ಬೆಂಗಳೂರು, ಆಗಸ್ಟ್ 8: ಕರ್ನಾಟಕ ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್​ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ರಾಜ್ಯದ ಎಲ್ಲ ಗ್ರಾಹಕರು ಇದರ ಪ್ರಯೋಜನ ಪಡೆಯಬಹುದೆಂದು ಆರಂಭದಲ್ಲಿಯೇ ಸರ್ಕಾರ ಹೇಳಿತ್ತು. ಬೆಂಗಳೂರು ಹಾಗೂ ಇತರ ನಗರಗಳಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುವವರಿಗೂ ಸರ್ಕಾರ ಯೋಜನೆಯ ಸೌಲಭ್ಯ ಪಡೆದುಕೊಳ್ಳುವಂತೆ ತಿಳಿಸಿತ್ತು. ಬೆಂಗಳೂರಿನಲ್ಲಿ ಬಾಡಿಗೆ ಮನೆಗಳಲ್ಲಿರುವ ಸಾವಿರಾರು ಗ್ರಾಹಕರು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ.

ಆದರೆ, ಬಾಡಿಗೆ ಮನೆಯನ್ನು ಬದಲಾಯಿಸಬೇಕಾಗಿ ಬಂದಾಗ ಏನು ಮಾಡುವುದು ಎಂಬುದೇ ದೊಡ್ಡ ಪ್ರಶ್ನೆಯಾಗಿತ್ತು. ಬಾಡಿಗೆ ಮನೆಯ ಆರ್​ಆರ್ ಸಂಖ್ಯೆ ನೀಡಿ ಯೋಜನೆಯಡಿ ಶೂನ್ಯ ಬಿಲ್ ಪಡೆಯುತ್ತಿದ್ದವರಿಗೆ ಮನೆ ಬದಲಾಯಿಸಬೇಕಾಗಿ ಬಂದಾಗ ಸಮಸ್ಯೆ ಆಗುತ್ತಿತ್ತು. ಇದನ್ನು ಮನಗಂಡ ಸರ್ಕಾರ ಇದೀಗ ಹೊಸ ಆಯ್ಕೆಯನ್ನು ನೀಡಿದೆ.

ಡಿ-ಲಿಂಕ್ ಸೌಲಭ್ಯ: ಬೆಸ್ಕಾಂ ಮಾಹಿತಿ

ಬಾಡಿಗೆ ಮನೆ ಬದಲಾಯಿಸಿದವರಿಗೆ ಗೃಹ ಜ್ಯೋತಿ ಯೋಜನೆಯಡಿ ಪ್ರಯೋಜನ ಪಡೆದುಕೊಳ್ಳಲು ‘ನಮ್ಮ ಬೆಸ್ಕಾಂ’ ಡಿ-ಲಿಂಕ್ ಸೌಲಭ್ಯ ಕಲ್ಪಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿ ಮಾಹಿತಿ ನೀಡಿದೆ. ಮನೆ ಬದಲಾಯಿಸಿದವರಿಗೆ / ಬಾಡಿಗೆದಾರರಿಗೆ ಗೃಹ ಜ್ಯೋತಿ ಡಿ-ಲಿಂಕ್ ಸೌಲಭ್ಯ ಇದೀಗ ಲಭ್ಯ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಬೆಸ್ಕಾಂ ತಿಳಿಸಿದೆ.

ಗ್ರಾಹಕರು ಮಾಡಬೇಕಾದದ್ದೇನು?

ಸೇವಾಸಿಂಧು ಪೋರ್ಟಲ್​ (https://sevasindhu.karnataka.gov.in/GruhaJyothi_Delink/GetAadhaarData.aspx) ಮೂಲಕ ಲಾಗಿನ್ ಆಗಿ ಹಳೆಯ ಮನೆಯ ಆರ್​ಆರ್​ ಸಂಖ್ಯೆಯನ್ನು ನಮೂದಿಸಿ ಆ ಖಾತೆಯನ್ನು ಡಿ-ಲಿಂಕ್ ಮಾಡಬೇಕು. ನಂತರ ಹೊಸ ಮನೆಯ ಆರ್​ಆರ್​ ಸಂಖ್ಯೆಯನ್ನು ನಮೂದಿಸಿ ಲಿಂಕ್ ಮಾಡಬೇಕು.

ಇದನ್ನೂ ಓದಿ: ಜನರ ಕೈಗೇ ಇನ್ಮುಂದೆ ರ‍್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್; ಸಾರ್ವಜನಿಕರೇ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲಿಸಬಹುದು!

ಡಿ-ಲಿಂಕ್ ಹಾಗೂ ಲಿಂಕ್ ಮಾಡಲು ಮೇಲೆ ನೀಡಿರುವ ಲಿಂಕ್​ ಕ್ಲಿಕ್ ಮಾಡಿ ಗೃಹ ಜ್ಯೋತಿಯೊಂದಿಗೆ ನೋಂದಾಯಿತ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು. ಒಟಿಪಿ ಆಧಾರದಲ್ಲಿ ಲಾಗಿನ್ ಆಗಬೇಕು. ನಂತರ ಹಳೆಯ ಮನೆಯ ಆರ್​ಆರ್​ ಸಂಖ್ಯೆಯನ್ನು ನಮೂದಿಸಿ ಡಿ-ಲಿಂಕ್ ಮಾಡಬೇಕು. ಬಳಿಕ ಹೊಸ ಮನೆಯ ಆರ್​ಆರ್​ ಸಂಖ್ಯೆಯನ್ನು ನಮೂದಿಸಿ ಲಿಂಕ್ ಮಾಡಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ