ಗುಡುಗು, ಸಿಡಿಲು ಬಡಿತದಿಂದ ರಕ್ಷಣೆ ಪಡೆಯಲು ಏನೇನು ಮಾಡಬಹುದು? ಇಲ್ಲಿದೆ ಸಲಹೆ

ಗುಡುಗು ಮತ್ತು ಸಿಡಿಲು ಬಡಿತದಿಂದ ರಕ್ಷಣೆ ಪಡೆಯಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು (NDRF) ಸಲಹೆ, ಸೂಚನೆಗಳನ್ನು ನೀಡಿದ್ದು, ಅವುಗಳ ವಿವರ ಇಲ್ಲಿದೆ.

ಗುಡುಗು, ಸಿಡಿಲು ಬಡಿತದಿಂದ ರಕ್ಷಣೆ ಪಡೆಯಲು ಏನೇನು ಮಾಡಬಹುದು? ಇಲ್ಲಿದೆ ಸಲಹೆ
ಸಾಂದರ್ಭಿಕ ಚಿತ್ರ
Follow us
|

Updated on: May 22, 2023 | 8:12 PM

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾನುವಾರದಿಂದ (Karnataka Rains) ಮಳೆಯಾಗುತ್ತಿದೆ. ಇನ್ನೂ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಮಧ್ಯೆ ರಾಜ್ಯದ ಕೆಲವು ಕಡೆ ಸಿಡಿಲು (Thunderstorms) ಬಡಿದು ಜನ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಪ್ರತಿ ವರ್ಷ ಮಳೆ ಜತೆಗೆ ಸಿಡಿಲು ಬಡಿದು ಜಾನುವಾರುಗಳು ಮೃತಪಡುವ ಪ್ರಕರಣಗಳು ವರದಿಯಾಗುತ್ತವೆ. ಈ ಮಧ್ಯೆ, ಗುಡುಗು ಮತ್ತು ಸಿಡಿಲು ಬಡಿತದಿಂದ ರಕ್ಷಣೆ ಪಡೆಯಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು (NDRF) ಸಲಹೆ/ ಸೂಚನೆಗಳನ್ನು ನೀಡಿದೆ.

ಕರ್ನಾಟಕದ ಹಲವು ಭಾಗಗಳಲ್ಲಿ ಸಾಮಾನ್ಯವಾಗಿ ಮುಂಗಾರುಪೂರ್ವದಲ್ಲಿ ಹಾಗೂ ಮುಂಗಾರಿನ ಸಂದರ್ಭದಲ್ಲಿ ಗುಡುಗು – ಸಿಡಿಲು ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು – ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಕೈಗೊಳ್ಳಬೇಕಾದ ಅಥವಾ ಅನುಸರಿಸಬೇಕಾದ ಕ್ರಮಗಳನ್ನು ಇಲ್ಲಿ ನೀಡಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ಉಲ್ಲೇಖಿಸಿದೆ.

ಸಿಡಿಲಿಗೆ ಸಾಮಾನ್ಯವಾಗಿ ತುತ್ತಾಗುವ೦ತಹ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕ ಆಸ್ತಿ / ಮೂಲಸೌಕರ್ಯಗಳ ರಕ್ಷಣೆಗೆ ಕ್ರಮ ವಹಿಸಬೇಕು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇ೦ದ್ರದಿಂದ ನೀಡುವ ಗುಡುಗು – ಸಿಡಿಲಿನ ಮುನ್ಸೂಚನೆಗಳನ್ನು ಸ್ಥಳೀಯ ಮಟ್ಟಕ್ಕೆ ತಲುಪಿಸಲು ಸಾಮಾಜಿಕ ಮತ್ತು ಇತರ ಸಮೂಹ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ನಿರ್ದಿಷ್ಟ ಮುನೈಚ್ಮರಿಕೆಯನ್ನು ಪ್ರಸಾರ ಮಾಡಬೇಕು ಹಾಗೂ ಈ ಕುರಿತು ಅರಿವು ಮೂಡಿಸಬೇಕು. ರೈತ ಸ೦ಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ನಾ ಕೇಂದ್ರಗಳು ಹಾಗೂ ಗ್ರಾಮ ಪಂಚಾಯಿತಿಗಳ ಮೂಲಕವೂ ಸಹ ಮಾಹಿತಿ ನೀಡಬೇಕು ಹಾಗೂ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿ ವರ್ಗಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ನಿರ್ದೇಶನ ನೀಡಿದೆ.

ಇದನ್ನೂ ಓದಿ: Bangalore Rains: ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ, ಅಂಡರ್​ಪಾಸ್​​ಗಳಲ್ಲಿ ಸಂಚರಿಸಬೇಡಿ; ಸಂಚಾರ ಪೊಲೀಸರ ಮನವಿ

ಗುಡುಗು-ಸಿಡಿಲು ಸಂದರ್ಭಗಳಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಸರಣ ಮಾಡುವುದು ಹಾಗೂ ಅರಿವು ಮೂಡಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಪ್ರಾಧಿಕಾರ ಹೇಳಿದೆ.

ಗುಡುಗು, ಸಿಡಿಲಿನ ಸ೦ದರ್ಭದಲ್ಲಿ ಏನು ಮಾಡಬೇಕು?

  1. ಹೊರಗೆ ಹೋಗುವ ಅನಿವಾರ್ಯತೆ ಇದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆಗಳನ್ನು ಮೊಬೈಲ್‌ನಲ್ಲಿ ಗಮನಿಸಿಸುವುದು.
  2. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಕೇತ್ರದಲ್ಲಿ ಕಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು.
  3. ಗುಡುಗು-ಸಿಡಿಲಿನ ಸ೦ದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ. ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯುವುದು.
  4. ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯುವುದು.
  5. ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿ೦ದ ದೂರವಿರುವುದು.
  6. ವಿದ್ಯುತ್‌ ಉಪಕರಣ ಹಾಗೂ ವಿದ್ಯುತ್‌ ಸರಬರಾಜು ಮಾರ್ಗ, ದೂರವಾಣಿ ಸ೦ಪರ್ಕ, ಮೊಬೈಲ್‌ ಟವರ್‌, ಪವನ ವಿದ್ಯುತ್‌ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.
  7. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು.
  8. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅ೦ತರವನ್ನು ಕಾಯ್ದುಕೊಳ್ಳುವುದು.
  9. ಗುಡುಗು ಮತ್ತು ಸಿಡಿಲು ಸ೦ದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ತಿತ ಸ್ಥಳದಲ್ಲಿ ಆಶ್ರಯ ಪಡಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು.
  10. ವಿದ್ಯುತ್‌ ಅಥವಾ ಟಿಲಿಫೋನ್‌ ಕ೦ಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡಯಬಾರದು, ಇವು ಮಿಂಚನ್ನು ಆಕರ್ಷಿಸುತ್ತವೆ.
  11. ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ/ಚಿಕ್ಕ ಮರಗಳ ಕಳಗೆ ಆಶ್ರಯ ಪಡಯುವುದು.
  12. ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್‌ ಅಥವಾ ದೂರವಾಣಿ ಕ೦ಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿ೦ದ ದೂರವಿರುವುದು.
  13. ಸಿಡಿಲು ಸ೦ದರ್ಭದಲ್ಲಿ ಮೊಬೈಲ್‌ ಫೋನ್​​ಗಳನ್ನು ಬಳಸಬಾರದು.
  14. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು.
  15. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ, ಬೆ೦ಕಿ ಮತ್ತು ವಿದ್ಯುತ್‌ ಶಕ್ತಿ ಸ೦ಪರ್ಕದಿಂದ ದೂರವಿರುವುದು.
  16. ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು.
  17. ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕುವುದು.
  18. ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆ ಇರುವುದರಿಂದ, ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್‌ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಹೊಗೆಯಬಾರದು.
  19. ವಿದ್ಯುತ್‌ ಸ೦ಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು.
  20. ಗುಡುಗು – ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಮರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು ಉತ್ತಮ.
  21. ಗುಡುಗು ಸಿಡಿಲಿನ ಸಮಯದಲ್ಲಿ, ಮೋಟರ್‌ ಸೈಕಲ್‌ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡದಿರುವುದು ಒಳ್ಳೆಯದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ