AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್​​ನಲ್ಲಿ ಹೇಗಿತ್ತು ಪ್ರಜ್ವಲ್ ರೇವಣ್ಣ ನಡತೆ? ಸಂಸತ್​ ಚಟುವಟಿಕೆಗಳ ವಿವರ ಇಲ್ಲಿದೆ

Prajwal Revanna: ಅಶ್ಲೀಲ ವಿಡಿಯೋ ಪ್ರಕಣದಲ್ಲಿ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿರುವ ಸಂಸದನಾಗಿ ಪ್ರಜ್ವಲ್ ರೇವಣ್ಣ ಮಾಡಿದ್ದೇನು? ಸಂಸತ್ತಿನಲ್ಲಿ ಪ್ರಜ್ವಲ್ ಚಟುವಟಿಕೆಗಳು ಹೇಗಿದ್ದವು? ಕಲಾಪಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರೇ? ಇತ್ಯಾದಿ ಪ್ರಶ್ನೆಗಳಿಗೆ ಅಂಕಿ ಅಂಶಗಳ ಮೂಲಕ ಉತ್ತರ ಕಂಡುಕೊಳ್ಳುವ ಪ್ರಯತ್ನ ಇಲ್ಲಿದೆ.

ಸಂಸತ್​​ನಲ್ಲಿ ಹೇಗಿತ್ತು ಪ್ರಜ್ವಲ್ ರೇವಣ್ಣ ನಡತೆ? ಸಂಸತ್​ ಚಟುವಟಿಕೆಗಳ ವಿವರ ಇಲ್ಲಿದೆ
ಪ್ರಜ್ವಲ್ ರೇವಣ್ಣ ಸಂಸತ್​ ಚಟುವಟಿಕೆಗಳ ವಿವರ ಇಲ್ಲಿದೆ ನೋಡಿ
Ganapathi Sharma
|

Updated on: May 04, 2024 | 3:18 PM

Share

ಬೆಂಗಳೂರು, ಮೇ 4: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ವಿದೇಶದಲ್ಲಿ ತಲೆಮೆರೆಸಿಕೊಂಡಿರುವ ಹಾಸನ ಜೆಡಿಎಸ್ (JDS) ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಬಂಧನಕ್ಕೆ ರಾಜ್ಯ ಸರ್ಕಾರದ ವಿಶೇಷ ತನಿಖಾ ತಂಡಹಲೋ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರಜ್ವಲ್ ವಿರುದ್ಧ ಈಗಾಗಲೇ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದ್ದು, ಇದೀಗ ಬ್ಲೂ ಕಾರ್ನರ್ ನೋಟಿಸ್ ಬಿಡುಗಡೆ ಮಾಡುವಂತೆ ಸಿಬಿಐ ಅಧಿಕಾರಿಗಳಿಗೆ ಎಸ್ಐಟಿ ಮನವಿ ಮಾಡಿದೆ. ಕಳೆದ ಕೆಲವು ದಿನಗಳಿಂದಂತೂ ರಾಜ್ಯದಲ್ಲಿ ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣವೇ ಭಾರಿ ಸದ್ದು ಮಾಡುತ್ತಿದೆ. ಹಾಗಾದರೆ, ಸಂಸದನಾಗಿ ಪ್ರಜ್ವಲ್ ರೇವಣ್ಣ ಮಾಡಿದ್ದೇನು? ಸಂಸತ್ತಿನಲ್ಲಿ ಪ್ರಜ್ವಲ್ ಚಟುವಟಿಕೆಗಳು ಹೇಗಿದ್ದವು? ಕಲಾಪಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರೇ? ಇತ್ಯಾದಿ ಪ್ರಶ್ನೆಗಳಿಗೆ ಅಂಕಿ ಅಂಶಗಳ ಮೂಲಕ ಉತ್ತರ ಕಂಡುಕೊಳ್ಳುವ ಪ್ರಯತ್ನ ಇಲ್ಲಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿ ಸಂಸತ್​ಗೆ ಪ್ರವೇಶ ಪಡೆದಿದ್ದರು. ಇದು ಸಂಸದರಾಗಿ ಅವರ ಮೊದಲ ಅವಧಿ.

ಎಷ್ಟಿದೆ ಪ್ರಜ್ವಲ್ ಹಾಜರಾತಿ ಪ್ರಮಾಣ?

2019ರಲ್ಲಿ ಆಯ್ಕೆಯಾದ ಲೋಕಸಭೆಯಲ್ಲಿ ಇರುವ ಒಟ್ಟು ಸಂಸದರ ಹಾಜರಾತಿಯ ರಾಷ್ಟ್ರೀಯ ಸರಾಸರಿ ಶೇಕಡ 79ರಷ್ಟಿದ್ದರೆ, ಕರ್ನಾಟಕದ ಒಟ್ಟು ಸಂಸದರ ಹಾಜರಾತಿ ಪ್ರಮಾಣ ಶೇಕಡ 71ರಷ್ಟಿದೆ. ಈ ಪೈಕಿ, ಪ್ರಜ್ವಲ್ ರೇವಣ್ಣ ಹಾಜರಾತಿ ಶೇಕಡ 55ರಷ್ಟಿದೆ ಎಂಬುದು prsindia.org ಅಂಕಿ ಅಂಶಗಳಿಂದ ತಿಳಿದು ಬಂದಿದೆ. ಸಂಸತ್ತಿನಲ್ಲಿ ಒಟ್ಟಾರೆಯಾಗಿ ಎರಡು ಚರ್ಚೆಗಳಲ್ಲಿ ಪ್ರಜ್ವಲ್ ಭಾಗಿಯಾಗಿದ್ದಾರೆ. ರಾಜ್ಯ ಮತ್ತು ರಾಷ್ಟ್ರದ ಎಲ್ಲ ಸಂಸದರು ಸರಾಸರಿ 210 ಪ್ರಶ್ನೆಗಳನ್ನು ಕೇಳಿದ್ದರೆ, ಪ್ರಜ್ವಲ್ ರೇವಣ್ಣ ಸರಾಸರಿ 89 ಪ್ರಶ್ನೆಗಳನ್ನು ಕೇಳಿದ್ದಾರೆ.

ಖಾಸಗಿಯಾಗಿ ಮಸೂದೆ ಮಂಡಿಸಿದ ವಿಚಾರದಲ್ಲಿ ನೋಡಿದರೆ ದೇಶದ ಸಂಸದರ ಸರಾಸರಿ ಶೇ 1.5 ಇದೆ. ಪ್ರಜ್ವಲ್ ರೇವಣ್ಣ ಖಾಸಗಿಯಾಗಿ ಯಾವುದೇ ಮಸೂದೆಯನ್ನು ಮಂಡಿಸಿಲ್ಲ.

2020ರ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಜ್ವಲ್ ರೇವಣ್ಣ ಹಾಜರಾತಿ ಶೇಕಡ 100 ರಷ್ಟು ಇದೆ. ಇದೇ ಅವರ ಗರಿಷ್ಠ ಹಾಜರಾತಿ. ಮತ್ತೆಂದೂ ಶೇ 100ರ ಹಾಜರಾತಿ ದಾಖಲಿಸಿಲ್ಲ. ಅತಿ ಕಡಿಮೆ ಎಂದರೆ, 2024ರ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಂಡಿದ್ದು. ಬಜೆಟ್ ಅಧಿವೇಶನದಲ್ಲಿ ಪ್ರಜ್ವಲ್ ಹಾಜರಾತಿ ಕೇವಲ ಶೇಕಡ 22ರಷ್ಟಿದೆ. 2023ರ ಬಜೆಟ್ ಅಧಿವೇಶನದಲ್ಲಿ ಪ್ರಜ್ವಲ್ ರೇವಣ್ಣ ಪಾಲ್ಗೊಂಡೇ ಇಲ್ಲ. ಇದು ಅವರ ಶೂನ್ಯ ಸಾಧನೆ.

ಇದನ್ನೂ ಓದಿ: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್​ಗೆ ಎಸ್​ಐಟಿ ಮನವಿ: ರೆಡ್ ಕಾರ್ನರ್​ಗೂ ಇದಕ್ಕೂ ಏನು ವ್ಯತ್ಯಾಸ? ಇಲ್ಲಿದೆ ವಿವರ

ಕೇಂದ್ರ ಸರ್ಕಾರದ ಕೃಷಿಕಾಯ್ದೆಗಳ ಕುರಿತಾದ ಚರ್ಚೆ ಮತ್ತು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದಾರೆ. ಇದು ಬಿಟ್ಟರೆ ಇನ್ಯಾವುದೇ ಚರ್ಚೆಗಳಲ್ಲಿ ಪಾಲ್ಗೊಂಡಿಲ್ಲ.

ಯಾವೆಲ್ಲ ಪ್ರಶ್ನೆಗಳನ್ನು ಕೇಳಿದ್ದಾರೆ?

ಪ್ರಜ್ವಲ್ ರೇವಣ್ಣ ಐದು ವರ್ಷಗಳಲ್ಲಿ ಸಂಸತ್ತಿನಲ್ಲಿ ಒಟ್ಟು 89 ಪ್ರಶ್ನೆಗಳನ್ನು ಕೇಳಿದ್ದಾರೆ. ಕರ್ನಾಟಕದಲ್ಲಿ ಏಮ್ಸ್ ಆಸ್ಪತ್ರೆ ಸ್ಥಾಪನೆ, ರಾಜ್ಯದ ನೀರಾವರಿ ಯೋಜನೆಗಳು, ಕರ್ನಾಟಕದಲ್ಲಿ ಮಹಿಳಾ ಮತ್ತು ಮಕ್ಕಳ ಸಬಲೀಕರಣ, ಯೋಗದ ಪ್ರಚಾರ, ವಂದೇ ಭಾರತ್ ಐಷಾರಾಮಿ ರೈಲಿಗೆ ಸಂಬಂಧಿಸಿದ್ದೂ ಸೇರಿದಂತೆ 89 ಪ್ರಶ್ನೆಗಳನ್ನು ಅವರು ಕೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನುಓದಲು ಇಲ್ಲಿ ಕ್ಲಿಕ್ ಮಾಡಿ

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ