AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HPCL Recruitment 2026: HPCL ಗ್ರಾಜುಯೇಟ್ ಅಪ್ರೆಂಟಿಸ್ ನೇಮಕಾತಿ; 358 ಹುದ್ದೆಗಳಿಗೆ ಅರ್ಜಿ ಆಹ್ವಾನ

HPCL ಕೇಂದ್ರ ಸರ್ಕಾರವು 2026-27ನೇ ಸಾಲಿಗೆ 358 ಗ್ರಾಜುಯೇಟ್ ಅಪ್ರೆಂಟಿಸ್ ಎಂಜಿನಿಯರಿಂಗ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ ಪದವೀಧರರು ಅರ್ಜಿ ಸಲ್ಲಿಸಬಹುದು. ಲಿಖಿತ ಪರೀಕ್ಷೆ ಇಲ್ಲ, ನೇರ ಆಯ್ಕೆ ಮೂಲಕ ತಿಂಗಳಿಗೆ 25,000 ರೂ. ಸ್ಟೈಫಂಡ್ ನೀಡಲಾಗುತ್ತದೆ. ಜುಲೈ 31ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ.

HPCL Recruitment 2026: HPCL ಗ್ರಾಜುಯೇಟ್ ಅಪ್ರೆಂಟಿಸ್ ನೇಮಕಾತಿ; 358 ಹುದ್ದೆಗಳಿಗೆ ಅರ್ಜಿ ಆಹ್ವಾನ
HPCL ನೇಮಕಾತಿ
ಅಕ್ಷತಾ ವರ್ಕಾಡಿ
|

Updated on: Jul 23, 2026 | 2:35 PM

Share

ಕೇಂದ್ರ ಸರ್ಕಾರದ ಪ್ರಮುಖ ತೈಲ ಕಂಪನಿಯಾದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL), 2026-27ನೇ ಸಾಲಿಗೆ ಗ್ರಾಜುಯೇಟ್ ಅಪ್ರೆಂಟಿಸ್ (ಎಂಜಿನಿಯರಿಂಗ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ದೇಶಾದ್ಯಂತ ಒಟ್ಟು 358 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಎಂಜಿನಿಯರಿಂಗ್ ಪದವೀಧರರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳು ಸಿವಿಲ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಮತ್ತು ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ ವಿಭಾಗಗಳಲ್ಲಿ ಲಭ್ಯವಿವೆ.

ರಾಜ್ಯವಾರು ಖಾಲಿ ಹುದ್ದೆಗಳ ವಿವರ:

ರಾಜ್ಯವಾರು ಖಾಲಿ ಹುದ್ದೆಗಳ ವಿವರಗಳನ್ನು ನೋಡುವುದಾದರೆ, ಮಹಾರಾಷ್ಟ್ರದಲ್ಲಿ ಗರಿಷ್ಠ 64 ಹುದ್ದೆಗಳು, ಕರ್ನಾಟಕದಲ್ಲಿ 14, ಉತ್ತರ ಪ್ರದೇಶದಲ್ಲಿ 37, ಗುಜರಾತ್‌ನಲ್ಲಿ 32, ತಮಿಳುನಾಡಿನಲ್ಲಿ 20, ತೆಲಂಗಾಣದಲ್ಲಿ 19, ದೆಹಲಿಯಲ್ಲಿ 18, ರಾಜಸ್ಥಾನದಲ್ಲಿ 17, ಪಂಜಾಬ್‌ನಲ್ಲಿ 16 ಹಾಗೂ ಆಂಧ್ರಪ್ರದೇಶದಲ್ಲಿ 15 ಹುದ್ದೆಗಳು ಲಭ್ಯವಿವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಸಂಬಂಧಿತ ಎಂಜಿನಿಯರಿಂಗ್ ವಿಭಾಗದಲ್ಲಿ ಪದವಿ (B.E/B.Tech) ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: ಇಸ್ರೋದಲ್ಲಿ 460 ಅಪ್ರೆಂಟಿಸ್ ಹುದ್ದೆಗಳ ಭರ್ತಿ; ಲಿಖಿತ ಪರೀಕ್ಷೆಯಿಲ್ಲದೆ ನೇರ ಆಯ್ಕೆ!

ವಯೋಮಿತಿಗೆ ಸಂಬಂಧಿಸಿದ ವಿವರ:

ವಯೋಮಿತಿಗೆ ಸಂಬಂಧಿಸಿದಂತೆ, ಜುಲೈ 31, 2026 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳ ವಯಸ್ಸು 18 ರಿಂದ 25 ವರ್ಷಗಳ ನಡುವೆ ಇರಬೇಕು. ಸರ್ಕಾರದ ನಿಯಮಾವಳಿಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯ ಅವಧಿಯಲ್ಲಿ ಪ್ರತಿ ತಿಂಗಳಿಗೆ 25,000ರೂ. ಸ್ಟೈಫಂಡ್ ನೀಡಲಾಗುತ್ತದೆ.

ಯಾವುದೇ ಲಿಖಿತ ಪರೀಕ್ಷೆಯಿಲ್ಲ:

ಈ ನೇಮಕಾತಿಯ ವಿಶೇಷತೆಯೆಂದರೆ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ. ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ, ಪ್ರಮಾಣಪತ್ರಗಳ ಪರಿಶೀಲನೆ ಮತ್ತು ಸಂಸ್ಥೆಯ ನಿಯಮಾವಳಿಗಳನ್ನು ಅನುಸರಿಸಿ ನೇರ ಆಯ್ಕೆ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 31 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಕಾಂಗ್ರೆಸ್ ಶಾಸಕರ ನಡುವೆ ಗಲಾಟೆ: ಕಣ್ಣೀರಿಡುತ್ತಲೇ ಹೊರಹೋದ ಶಾಸಕಿ ರೂಪಕಲಾ!
ಕಾಂಗ್ರೆಸ್ ಶಾಸಕರ ನಡುವೆ ಗಲಾಟೆ: ಕಣ್ಣೀರಿಡುತ್ತಲೇ ಹೊರಹೋದ ಶಾಸಕಿ ರೂಪಕಲಾ!
ಉಪ್ಪಿನ ಬಳಕೆಗೆ ಬ್ರೇಕ್ ಹಾಕಲು ಹೆಲ್ತ್ ಡಿಪಾರ್ಟ್‌ಮೆಂಟ್ ಪ್ಲಾನ್
ಉಪ್ಪಿನ ಬಳಕೆಗೆ ಬ್ರೇಕ್ ಹಾಕಲು ಹೆಲ್ತ್ ಡಿಪಾರ್ಟ್‌ಮೆಂಟ್ ಪ್ಲಾನ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ವಿರುದ್ಧ ದೂರು: ಅಸಲಿ ವಿಷಯ ಇಲ್ಲಿದೆ
‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ವಿರುದ್ಧ ದೂರು: ಅಸಲಿ ವಿಷಯ ಇಲ್ಲಿದೆ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!