ಇನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಗುಡ್​ನ್ಯೂಸ್

HSRP Number Plate : ಇನ್ನೂ ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಕರ್ನಾಟಕ ಹೈಕೋರ್ಟ್​ (Karnataka High Court) ಸಿಹಿ ಸುದ್ದಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರವು ಸಹ ಗುಡ್​ನ್ಯೂಸ್ ನೀಡಿದೆ. ಕೋರ್ಟ್​ ಜುಲೈ 4ರ ವರೆಗೆ ಅವಕಾಶ ನೀಡಿತ್ತು. ಆದ್ರೆ, ಇದೀಗ ರಾಜ್ಯ ಸರ್ಕಾರವೇ , ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಮೂರು ತಿಂಗಳ ಕಾಲಾವಕಾಶ ನೀಡಿದೆ. ಇದರಿಂದ ಇನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದಿರುವ ವಾಹನ ಸವಾರರು ನಿರಾಳರಾಗಿದ್ದಾರೆ.

ಇನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಗುಡ್​ನ್ಯೂಸ್
ಪ್ರಾತಿನಿಧಿಕ ಚಿತ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Jun 19, 2024 | 2:58 PM

ಬೆಂಗಳೂರು, (ಜೂನ್ 19): ಕರ್ನಾಟಕದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (HSRP) ಅಳವಡಿಕೆಗೆ ಈಗಾಗಲೇ ಎರಡ್ಮೂರು ಬಾರಿ ಅವಧಿ ವಿಸ್ತರಣೆ ಮಾಡಿದ್ದು, ಜೂನ್ 12ಕ್ಕೆ ಡೆಡ್​ಲೈನ್ ಕೊನೆಗೊಂಡಿದೆ. ಆದರೆ, ಕರ್ನಾಟಕ ಹೈಕೋರ್ಟ್​ (Karnataka High Court) ಹೆಚ್ಎಸ್‌ಆರ್‌ಪಿ ಅಳವಡಿಸದವರ ವಿರುದ್ಧ ಜುಲೈ 4ರ ವರೆಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ (Karnataka Government) ನಿರ್ದೇಶನ ನೀಡಿತ್ತು. ಅಲ್ಲದೆ, ಹೆಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ವಿಸ್ತರಿಸಲು ಒಪ್ಪಿಗೆ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ ಕಾಲಾವಕಾಶ ನೀಡಿದೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಸೆಪ್ಟೆಂಬರ್15 ವರಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಡೆಡ್​ಲೈನ್ ನೀಡಲಾಗಿದೆ. ಸೆಪ್ಟೆಂಬರ್ 15 ಬಳಿಕ ಅವಧಿ ವಿಸ್ತರಣೆ ಇಲ್ಲ. ಈಗಾಗಲೇ ಹಲವು ಬಾರಿ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: HSRP Number Plate: ಇನ್ನೂ ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಲ್ಲವೇ, ಸದ್ಯಕ್ಕೆ ಬೇಡ ಆತಂಕ

ಶೀಘ್ರದಲ್ಲೇ ಹೆಚ್ಎಸ್ಆರ್​ಪಿ ಗಡುವು ವಿಸ್ತರಣೆ ಆದೇಶ ಹೊರಡಿಸಲಾಗುತ್ತದೆ. ಮತ್ತೆ ಗಡುವು ವಿಸ್ತರಣೆ ಮಾಡಲ್ಲ. ಸೆಪ್ಟೆಂಬರ್ 15ರೊಳಗೆ ವಾಹನಗಳಿಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಆಳವಡಿಸಿಕೊಳ್ಳಿ ಎಂದು ವಾಹನ ಸವಾರರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮನವಿ ಮಾಡಿದರು.

2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಸಲು ಜೂನ್ 12 ಕೊನೆ ದಿನವಾಗಿತ್ತು. ಆದ್ರೆ, ಹೆಚ್‌ಎಸ್‌ಆರ್‌ಪಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4ರ ತನಕ ವಿಸ್ತರಣೆ ಮಾಡಿದೆ. ಇದೀಗ ಖುದ್ದು ರಾಜ್ಯ ಸರ್ಕಾರ, ಸೆಪ್ಟೆಂಬರ್ 15ರ ವರೆಗೆ ವಿಸ್ತರಣೆ ಮಾಡಲು ಮುಂದಾಗಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದು, ಶೀಘ್ರದಲ್ಲೇ ಸರ್ಕಾರಿಂದ ಅಧಿಕೃತ ಸುತ್ತೋಲೆ ಹೊರಬೀಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:39 pm, Wed, 19 June 24

ತಾಜಾ ಸುದ್ದಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!