Sign In

By signing in or creating an account, you agree with Associated Broadcasting Company's Terms & Conditions and Privacy Policy.

HSRP Number Plate: ಇನ್ನೂ ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಲ್ಲವೇ, ಸದ್ಯಕ್ಕೆ ಬೇಡ ಆತಂಕ

ಹೆಚ್​ಎಸ್​ಆರ್​ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಈ ಬಾರಿ ಕರ್ನಾಟಕ ಹೈಕೋರ್ಟ್ ಶುಭ ಸುದ್ದಿ ನೀಡಿದೆ. ವಾಸ್ತವದಲ್ಲಿ ಹೆಚ್​ಎಸ್​ಆರ್​ಪಿ ನಂಬರ್ ಪ್ಲೇಟ್ ಅಳವಡಿಕೆ ಅವಧಿ ಜೂನ್ 12ಕ್ಕೆ ಮುಕ್ತಾಯವಾಗಿತ್ತು. ಆದರೆ, ನಂಬರ್ ಪ್ಲೇಟ್ ಅಳವಡಿಸದವರ ವಿರುದ್ಧ ಜುಲೈ 4ರ ವರೆಗೆ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶಿಸಿದೆ. ಜತೆಗೆ, ಅವಧಿಯನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರಕ್ಕೆ ಅವಕಾಶ ನೀಡಿದೆ.

HSRP Number Plate: ಇನ್ನೂ ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಲ್ಲವೇ, ಸದ್ಯಕ್ಕೆ ಬೇಡ ಆತಂಕ
ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್
Follow us
Ganapathi Sharma
|

Updated on: Jun 13, 2024 | 9:10 AM

ಬೆಂಗಳೂರು, ಜೂನ್ 13: ರಾಜ್ಯದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (HSRP) ಅಳವಡಿಕೆಗೆ ಈಗಾಗಲೇ ಎರಡ್ಮೂರು ಬಾರಿ ಅವಧಿ ವಿಸ್ತರಣೆ ಮಾಡಿದ್ದು, ಜೂನ್ 12ಕ್ಕೆ ಡೆಡ್​ಲೈನ್ ಕೊನೆಗೊಂಡಿದೆ. ಆದರೆ, ಇನ್ನೂ ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಕರ್ನಾಟಕ ಹೈಕೋರ್ಟ್​ (Karnataka High Court) ಸಿಹಿ ಸುದ್ದಿ ನೀಡಿದೆ. ಹೆಚ್ಎಸ್‌ಆರ್‌ಪಿ ಅಳವಡಿಸದವರ ವಿರುದ್ಧ ಜುಲೈ 4ರ ವರೆಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ (Karnataka Government) ನಿರ್ದೇಶನ ನೀಡಿದೆ. ಅಲ್ಲದೆ, ಹೆಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ವಿಸ್ತರಿಸಲು ಒಪ್ಪಿಗೆ ನೀಡಿದೆ.

ಗಡುವು ವಿಸ್ತರಣೆಗೆ ವಿನಂತಿಸಿ ಬಿಎನ್‌ಡಿ ಎನರ್ಜಿ ಲಿಮಿಟೆಡ್ ಮತ್ತು ಇತರರು ಸಲ್ಲಿಸಿದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಅವಧಿ ವಿಸ್ತರಣೆಗೆ ಅನುಮತಿ ನೀಡಿದ್ದಾರೆ.

ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಯ ಅನುಷ್ಠಾನಕ್ಕೆ ಮೇ 31 ರ ಗಡುವು ನಿಗದಿಪಡಿಸಲಾಗಿತ್ತು ಎಂದು ರಾಜ್ಯ ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿಕ್ರಂ ಹುಯಿಲಗೋಳ ವಿವರಿಸಿದರು. ಆದರೆ, ಜೂನ್ 12ರವರೆಗೆ ಹೆಚ್‌ಎಸ್‌ಆರ್‌ಪಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮಗಳು ಅಥವಾ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್‌ನ ರಜಾಕಾಲದ ಪೀಠವು ಈ ಹಿಂದೆ ಮೇ 21 ರಂದು ಆದೇಶಿಸಿತ್ತು. ಇದು ಗಡುವು ವಿಸ್ತರಿಸಿ ಅಧಿಸೂಚನೆ ಹೊರಡಿಸದಂತೆ ಸರ್ಕಾರವನ್ನು ತಡೆದಿತ್ತು.

ಗಡುವು ಆಗಸ್ಟ್, ಸೆಪ್ಟೆಂಬರ್ ವರೆಗೆ ವಿಸ್ತರಣೆ ಸಾಧ್ಯತೆ

ಈ ಮಧ್ಯೆ, ಹೆಚ್‌ಎಸ್‌ಆರ್‌ಪಿ ಅಳವಡಿಕೆ ಅವಧಿಯನ್ನು ಆಗಸ್ಟ್ ಅಥವಾ ಸೆಪ್ಟೆಂಬರ್ ವರೆಗೆ ವಿಸ್ತರಿಸಲು ಸರ್ಕಾರ ಯೋಜಿಸಿದೆ ಎಂದು ಹುಯಿಲಗೋಳ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಮೇ 21ರ ಆದೇಶವನ್ನು ಮಾರ್ಪಾಡು ಮಾಡಿ ಸರ್ಕಾರಕ್ಕೆ ವಿಸ್ತರಣೆ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಿದ್ದಾರೆ. ಅನುಮತಿ ನೀಡಿದರೆ ಒಂದು ವಾರದೊಳಗೆ ಗಡುವು ವಿಸ್ತರಿಸಲಾಗುವುದು ಎಂದು ಪೀಠಕ್ಕೆ ಭರವಸೆ ನೀಡಿದ್ದಾರೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಆದಿತ್ಯ ಸೋಂಡಿ, ಅವಧಿ ವಿಸ್ತರಣೆ ಅಧಿಸೂಚನೆಯನ್ನು ಮಂಡಿಸಲು ಸರ್ಕಾರಕ್ಕೆ ಅವಕಾಶ ನೀಡಬೇಕು ಎಂದು ಸಮ್ಮತಿಸಿದ್ದಾರೆ. ಅರ್ಜಿದಾರರ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ. ಈ ಮನವಿಗೆ ನ್ಯಾಯಾಲಯ ಸಮ್ಮತಿಸಿದೆ.

ಇದನ್ನೂ ಓದಿ: ಇನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಗುಡ್​ನ್ಯೂಸ್

ಇದೀಗ ಹೈಕೋರ್ಟ್​ ಮಧ್ಯಂತರ ಆದೇಶ ಜುಲೈ 4 ರವರೆಗೆ ವಿಸ್ತರಣೆಯಾಗಿದ್ದು, ಅಲ್ಲಿಯ ವರೆಗೆ ಹೆಚ್‌ಎಸ್‌ಆರ್‌ಪಿ ಅಳವಡಿಸದವರ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ. ಜತೆಗೆ, ರಾಜ್ಯ ಸರ್ಕಾರವು ಹೆಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್‌ವರೆಗೆ ವಿಸ್ತರಿಸಲು ಕೋರ್ಟ್ ಅನುವು ಮಾಡಿಕೊಟ್ಟಿದೆ. ಹೀಗಾಗಿ ಇದೀಗ ಸರ್ಕಾರ ಅವಧಿ ವಿಸ್ತರಣೆ ಮಾಡಿ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು