ವಾಹನ ಮಾಲೀಕರು ಗಮನಕ್ಕೆ: ಇನ್ನೂ ನೀವು ನಿಮ್ಮ ವಾಹನಕ್ಕೆ HSRP ನಂಬರ್​ ಪ್ಲೇಟ್ ಹಾಕಿಸಿಲ್ಲವೇ..?​

HSRP Number Plate: ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ಅಳವಡಿಸಲು (HSRP) ಕೊನೆ ದಿನಾಂಕವನ್ನು ರಾಜ್ಯ ಸರ್ಕಾರ ವಿಸ್ತರಿಸುತ್ತಾ ಬಂದಿದೆ. ಇದೀಗ ಹಳೆಯ ನಂಬರ್‌ ಪ್ಲೇಟ್‌ಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ಅಳವಡಿಸಲು ಗಡುವು ಸಮೀಪಿಸುತ್ತಿದೆ. ಆದ್ರೆ, ಈ ಬಾರಿ ಮತ್ತೆ ಅವಧಿ ವಿಸ್ತರಣೆ ಮಾಡುತ್ತಾರೆ ಎಂದು ಭಾವಿಸಿ HSRP ನಂಬರ್ ಪ್ಲೇಟ್ ಹಾಕಿಸಿಲ್ಲ ಅಂದರೆ ಮೊದಲಿಗೆ ದಂಡಂ ದಶಗುಣಂ. ಕೊನೆಗೆ ವಾಹನ ಸೀಜ್ ಆಗುವುದು ಗ್ಯಾರಂಟಿ.

ವಾಹನ ಮಾಲೀಕರು ಗಮನಕ್ಕೆ: ಇನ್ನೂ ನೀವು ನಿಮ್ಮ ವಾಹನಕ್ಕೆ HSRP ನಂಬರ್​ ಪ್ಲೇಟ್ ಹಾಕಿಸಿಲ್ಲವೇ..?​
ಪ್ರಾತಿನಿಧಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: Sep 04, 2024 | 8:56 PM

ಬೆಂಗಳೂರು, (ಸೆಪ್ಟೆಂಬರ್ 04): ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ಎರಡ್ಮೂರು ಬಾರಿ ಗಡುವು ವಿಸ್ತರಣೆ ಮಾಡಿದೆ. ಆದ್ರೆ, ಇನ್ನೂ ಕೂಡ ವಾಹನ ಮಾಲೀಕರು ಹೆಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಿಕೊಳ್ಳಲು ಮುಂದಾಗಿಲ್ಲ. ಹೆಚ್ಎಸ್ಆರ್​ಪಿ ನಂಬರ್ ಹಾಕಿಸಿಕೊಳ್ಳಬೇಕು ಈ ತಿಂಗಳ ಸೆಪ್ಟೆಂಬರ್ 15 ಕೊನೆ ದಿನವಾಗಿದೆ. ಇನ್ನೇನು 11 ದಿನಗಳು ಮಾತ್ರ ಬಾಕಿ ಉಳಿದಿವೆ. ಒಂದು ವೇಳೆ ಹಾಕಿಸಿಕೊಳ್ಳಲಿಲ್ಲ ಅಂದರೆ ಮೊದಲ ಬಾರಿಗೆ 500 ರುಪಾಯಿ ಎರಡನೇ ಬಾರಿಗೆ ಒಂದು ಸಾವಿರ ರುಪಾಯಿ ದಂಡ ಹಾಕಲಾಗುತ್ತದೆ. ಕೊನೆ ಲಾಸ್ಟ್​ ಮೂರನೇ ಬಾರಿ ವಾಹನವನ್ನೇ ಸೀಜ್ ಮಾಡಲಾಗುತ್ತದೆ.

ಕರ್ನಾಟಕದ ಎರಡು ಕೋಟಿ ವಾಹನಗಳ ಪೈಕಿ ಇಂದಿನವರೆಗೆ ಕೇವಲ 51.5 ಲಕ್ಷ ವಾಹನ ಮಾಲೀಕರು ಮಾತ್ರ ಹೆಚ್ಎಸ್ಆರ್​ಪಿ ಅಳವಡಿಸಿಕೊಂಡಿದ್ದಾರೆ. ರಾಜ್ಯ ಸಾರಿಗೆ ಇಲಾಖೆ ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿಯಾದ ವಾಹನಗಳು ಹೆಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕು ಎಂದು ಆದೇಶ ಹೊರಡಿಸಿದೆ. ಈ ತಿಂಗಳ ಸೆಪ್ಟೆಂಬರ್ 15 ನೇ ತಾರೀಖಿನೊಳಗೆ ಹೆಚ್ಎಸ್ಆರ್ಪಿ ನಂಬರ್ ಗಳನ್ನು ಹಾಕಿಸಿಕೊಳ್ಳಬೇಕು ಒಂದು ವೇಳೆ ಹಾಕಿಸಿಕೊಳ್ಳಲಿಲ್ಲ ಅಂದರೆ ದಂಡ ಕಟ್ಟಿಟ್ಟ ಬುತ್ತಿ.

ಇದನ್ನೂ ಓದಿ: ಇನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಗುಡ್​ನ್ಯೂಸ್

1 ಏಪ್ರಿಲ್‌ 2019 ಕ್ಕಿಂತ ಮುನ್ನ ನೋಂದಣಿಯಾದ ವಾಹನಗಳಿಗೆ 90 ದಿನಗಳಲ್ಲಿ ಎಚ್‌ಎಸ್‌ಆರ್‌ಪಿ ಫಲಕ ಅಳವಡಿಸಬೇಕು ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಕಳೆದ ವರ್ಷ ನವೆಂಬರ್‌ 17 ವರೆಗೂ ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು. ಈ ನಡುವೆ ಕೋರ್ಟ್‌ನಲ್ಲಿ ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನಂಬರ್‌ ಪ್ಲೇಟ್‌ ವಿಸ್ತರಣೆ ಗಡುವು ವಿಸ್ತರಿಸುವಂತೆ ರಾಜ್ಯಕ್ಕೆ ಸೂಚನೆ ನೀಡಿತ್ತು. ಹೈ ಕೋರ್ಟ್‌ ಸೂಚನೆ ಮೇರೆಗೆ ಸಾರಿಗೆ ಇಲಾಖೆ 90 ದಿನಗಳಿಗೆ ಅಂದರೆ ಫೆ. 17ವರೆಗೂ ಅವಧಿ ವಿಸ್ತರಣೆ ಮಾಡಿತ್ತು. ಇದಲ್ಲದೇ ಮತ್ತೆ ಕೋರ್ಟ್​​ ಸೂಚನೆ ಮೇರೆಗೆ ಸೆಪ್ಟೆಂಬರ್ 15ರ ವರೆಗೆ ವಿಸ್ತರಣೆ ಮಾಡಲಾಗಿದೆ.

ಏನಿದು ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್‌ ಪ್ಲೇಟ್?

ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್‌ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್‌ ಪ್ಲೇಟ್‌ಗಳನ್ನು ಅಳವಡಿಸಬೇಕಿದೆ. ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕರ್ನಾಟಕದ ವಾಹಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಹೆಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್