30ಕ್ಕೂ ಹೆಚ್ಚು ಜನರ ಮೇಲೆ ದಾಳಿ: ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ್ದ ಹುಚ್ಚುನಾಯಿ ಸೆರೆ

ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿ ಹುಚ್ಚು ನಾಯಿಯೊಂದು ದಾಳಿ ಮಾಡಿ 20ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದೆ. ವಿದ್ಯಾರ್ಥಿಗಳು ಸೇರಿದಂತೆ ಹಲವು ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಲಿಕೆ ಅಧಿಕಾರಿಗಳು ಘಟನೆಯ ನಂತರ ನಾಯಿಯನ್ನು ಹಿಡಿದಿದ್ದಾರೆ. ಆದರೆ, ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವುದು ಜನರಲ್ಲಿ ಆತಂಕ ಶುರುವಾಗಿದೆ.

30ಕ್ಕೂ ಹೆಚ್ಚು ಜನರ ಮೇಲೆ ದಾಳಿ: ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ್ದ ಹುಚ್ಚುನಾಯಿ ಸೆರೆ
30ಕ್ಕೂ ಹೆಚ್ಚು ಜನರ ಮೇಲೆ ದಾಳಿ: ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ್ದ ಹುಚ್ಚುನಾಯಿ ಸೆರೆ
Edited By:

Updated on: Oct 28, 2024 | 10:08 PM

ಹುಬ್ಬಳ್ಳಿ, ಅಕ್ಟೋಬರ್ 28: ಹುಚ್ಚು ನಾಯಿಯೊಂದು (dog) ಸಾರ್ವಜನಿಕರ ಮೇಲೆ ದಾಳಿ ನಡೆಸಿದ ಪರಿಣಾಮ ವಿದ್ಯಾರ್ಥಿನಿಯರು ಸೇರಿದಂತೆ 20ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ನಡೆದಿದೆ. ನಗರದ ಗೋಕುಲ್ ರಸ್ತೆಯ ಹೊಸ ಬಸ್ ನಿಲ್ದಾಣದ ಬಳಿಯಲ್ಲಿ ಈ ಘಟನೆ ನಡೆದಿದೆ. ಹೊಸ ಬಸ್ ನಿಲ್ದಾಣದ ಬಳಿ ಸಂಜೆ 5.30 ಸುಮಾರಿಗೆ ಸಾರ್ವಜನಿಕರು ಓಡಾಡುತ್ತಿದ್ದ ರಸ್ತೆಯಲ್ಲಿ ಬಂದ ಹುಚ್ಚು ನಾಯಿ, ಕಂಡ ಕಂಡವರ ಮೇಲೆ ದಾಳಿ ಮಾಡಿತ್ತು. ಸಿಕ್ಕ ಸಿಕ್ಕವರ ಕೈ, ಕಾಲು ಕಚ್ಚಿದೆ. ಬಹುತೇಕವಾಗಿ ಮಹಿಳೆಯರು ಮತ್ತು ವಿದ್ಯಾರ್ಥಿಗಳು ನಾಯಿ ದಾಳಿಗೆ ಒಳಗಾಗಿದ್ದಾರೆ. ಸದ್ಯ ಗಾಯಾಳುಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ ಇತ್ತೀಚಿನ ನಗರದಲ್ಲಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸಾರ್ವಜನಿಕರು ಸಾಕಷ್ಟು ಬಾರಿ ಪಾಲಿಕೆಗೆ ದೂರು ನೀಡಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ, ನಿರ್ಲಕ್ಷ್ಯ ಧೋರಣೆ ತೋರಿದ ಪರಿಣಾಮ, ಇಂತಹ ಘಟನೆ ಮರುಕಳಿಸುತ್ತಿದೆ ಅಂತ ಗಾಯಗಳು ಮತ್ತು ಜನ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಬೀದಿನಾಯಿಗಳ ಕಾಟ: ಟಿವಿ9 ಅಭಿಯಾನ ಬೆನ್ನಲ್ಲೇ ಸಹಾಯವಾಣಿ ಬಿಡುಗಡೆ ಮಾಡಿದ ಬಿಬಿಎಂಪಿ

ಯಾವಾಗ 30 ಕ್ಕೂ ಹೆಚ್ಚು ಜನರಿಗೆ ನಾಯಿ ಕಡದಿರುವ ವಿಷಯ ತಿಳಿಯಿತೋ ಪಾಲಿಕೆ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಘಟನೆ ನಡೆದ ಮೂರು ಗಂಟೆಯಲ್ಲಿ ದಾಳಿ ಮಾಡಿದ ಹುಚ್ಚು ನಾಯಿಯನ್ನು ಪಾಲಿಕೆ ಸಿಬ್ಬಂದಿ ಹುಬ್ಬಳ್ಳಿಯ ವಾಸವಿ ನಗರದ ಬಳಿ ಹಿಡಿದಿದ್ದಾರೆ.

ಒಟ್ಟಾರೆ ಜನರ ನೆಮ್ಮದಿ ಕೆಡಿಸಿದ್ದ ಹುಚ್ಚು ನಾಯಿಯನ್ನ ಪಾಲಿಕೆ ಸಿಬ್ಬಂದಿ ಹಿಡಿದಿದ್ದಾರೆ. ಆದರೂ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೀದಿ ನಾಯಿಗಳ ಹಾವಳಿಗೆ ಪಾಲಿಕೆ ಅಧಿಕಾರಿಗಳು ಕಡಿವಾಣ ಹಾಕಬೇಕಿದೆ.

ಬೀದಿ ನಾಯಿಗಳ ಹಾವಳಿಗೆ ಬೇಸತ್ತ ಕೋಲಾರದ ಜನ

ಕೋಲಾರ: ಬೀದಿ ನಾಯಿಗಳ ಹಾವಳಿಗೆ ಕೋಲಾರದ ಜನ ಬೇಸತ್ತಿದ್ದಾರೆ. ದಿನೇ‌ ದಿನೇ‌ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ಪ್ರತಿ ಬೀದಿಯಲ್ಲಿ ಸುಮಾರು 10 ರಿಂದ 15 ನಾಯಿಗಳ ಗುಂಪ್ಪಿವೆ. ಮಹಿಳೆಯರು ಮತ್ತು ವೃದ್ದರ ಮೇಲೆ ನಾಯಿಗಳು ದಾಳಿ ಮಾಡುತ್ತಿವೆ. ಹೀಗಾಗಿ ಮಕ್ಕಳು ಮನೆಯಿಂದ‌ ಹೊರ ಬರಲು ಹೆದರುವಂತಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾದ ಬೀದಿ ನಾಯಿಗಳ ಕಾಟ; ಕಬ್ಬನ್ ಪಾರ್ಕ್ ನಲ್ಲೂ ಸಾಕುನಾಯಿಗಳ ಮಾಲೀಕರಿಂದ ರೂಲ್ಸ್ ಬ್ರೇಕ್

ಈಗಾಗಲೇ‌ ಕೋಲಾರ ಸೇರಿದಂತೆ ಶ್ರೀನಿವಾಸಪುರ ತಾಲೂಕಿನಲ್ಲಿ 20ಕ್ಕೂ ಹೆಚ್ಚು ಜನರಿಗೆ ನಾಯಿ ಕಚ್ಚಿ ಗಾಯಗೊಳಿಸಿದೆ. ನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Loading...
Unable to load recommendations.
Follow Us