AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಸೋಲಾರ್ ಮಹಾತ್ಮೆ! ಹುಬ್ಬಳ್ಳಿ ವಿಮಾನ ನಿಲ್ದಾಣ ಈಗ ವಿದ್ಯುತ್ ಸ್ವಾವಲಂಬಿ

ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣ ಈಗ 8 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕದ ಸ್ಥಾಪನೆಗೆ ಮುಂದಾಗಿದೆ. ರಾಜ್ಯದ ಮೂರನೇ ಹೆಚ್ಚು ಜನದಟ್ಟಣೆಯಿರುವ ಈ ವಿಮಾನ ನಿಲ್ದಾಣದಲ್ಲಿ 3-4 ತಿಂಗಳಲ್ಲಿ ಸೋಲಾರ್ ವಿದ್ಯುತ್ ಘಟಕದ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣ ರಾಜ್ಯದ ಇತರ ವಿಮಾನ ನಿಲ್ದಾಣಗಳಿಗೆ ಮಾದರಿಯಾಗಲಿದೆ.

ಇದು ಸೋಲಾರ್ ಮಹಾತ್ಮೆ! ಹುಬ್ಬಳ್ಳಿ ವಿಮಾನ ನಿಲ್ದಾಣ ಈಗ ವಿದ್ಯುತ್ ಸ್ವಾವಲಂಬಿ
ಹುಬ್ಬಳ್ಳಿ ವಿಮಾನ ನಿಲ್ದಾಣ
TV9 Web
| Edited By: |

Updated on:Apr 07, 2022 | 5:29 PM

Share

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣ ಈಗ 8 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕದ ಸ್ಥಾಪನೆಗೆ ಮುಂದಾಗಿದೆ. ರಾಜ್ಯದ ಮೂರನೇ ಹೆಚ್ಚು ಜನದಟ್ಟಣೆಯಿರುವ ಈ ವಿಮಾನ ನಿಲ್ದಾಣದಲ್ಲಿ 3-4 ತಿಂಗಳಲ್ಲಿ ಸೋಲಾರ್ ವಿದ್ಯುತ್ ಘಟಕದ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣ ರಾಜ್ಯದ ಇತರ ವಿಮಾನ ನಿಲ್ದಾಣಗಳಿಗೆ ಮಾದರಿಯಾಗಲಿದೆ.

ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಹುಬ್ಬಳ್ಳಿ ಏರ್​ಪೋರ್ಟ್​ನಲ್ಲಿ ರಾಜ್ಯದಲ್ಲೇ ಮೊದಲ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆಗೆ ₹ 64 ಕೋಟಿ ವೆಚ್ಚದ ಯೋಜನೆ ರೂಪಿಸಿದೆ. ಇದಕ್ಕಾಗಿ ಗುಜರಾತ್ ಮೂಲದ ಮಾಧವ ಇನ್​ಫ್ರಾ ಪ್ರಾಜೆಕ್ಟ್ ಕಂಪನಿಗೆ 33 ಕೋಟಿ ರೂಪಾಯಿಗಳ ಟೆಂಡರ್ ನೀಡಿದೆ. ಮಾರ್ಚ್ ಅಂತ್ಯದೊಳಗೆ ಸೋಲಾರ್ ಘಟಕ ಅಳವಡಿಕೆ ಕಾಮಗಾರಿ ಪೂರ್ಣಗೊಳಿಸಲು ನಿರ್ದೇಶನ ನೀಡಿಲಾಗಿದ್ದು, 5 ವರ್ಷದವರೆಗೆ ಇದೇ ಕಂಪನಿ ಅದರ ನಿರ್ವಹಣೆಯನ್ನೂ ನೋಡಿಕೊಳ್ಳಲಿದೆ.

ರನ್​ವೇ ದಕ್ಷಿಣ ಭಾಗದಲ್ಲಿ ಸೋಲಾರ್ ಘಟಕ ಸ್ಥಾಪನೆಗೆ 38 ಎಕರೆ ಜಮೀನು ಗುರುತಿಸಲಾಗಿದೆ. 24 ಎಕರೆ ವ್ಯಾಪ್ತಿಯಲ್ಲಿ 400 ಸೋಲಾರ್ ಪ್ಯಾನಲ್​ಗಳನ್ನು ಅಳವಡಿಸಲಾಗುತ್ತಿದೆ. ಉಳಿದ ಪ್ರದೇಶವನ್ನು ಟ್ರಾನ್ಸ್​ಫಾರ್ಮರ್, ನಿರ್ವಹಣಾ ಕೊಠಡಿ, ವಿದ್ಯುತ್ ಸಂಗ್ರಹಣಾ ಕೊಠಡಿ ನಿರ್ಮಾಣಕ್ಕೆ ಬಳಸಲಾಗುವುದು.

ಉತ್ಪಾದನೆಯಾದ ವಿದ್ಯುತ​ನ್ನು ಸಮೀಪದ ತಾರಿಹಾಳ ವಿದ್ಯುತ್ ಘಟಕಕ್ಕೆ ನೀಡಲು ಒಪ್ಪಂದ ಮಾಡಿಕೊಳ್ಳಲಾಗಿದ್ದು, ಈಗಾಗಲೇ ಮಣ್ಣು ಪರೀಕ್ಷೆ, ಪ್ರದೇಶ ಸಮೀಕ್ಷೆ, ಕೇಬಲ್ ಅಳವಡಿಕೆ, ಟ್ರಾನ್ಸ್​ಫಾರ್ಮರ್ ಅಳವಡಿಕೆ ಕೆಲಸಗಳು ಪೂರ್ಣಗೊಂಡಿವೆ. ಸೋಲಾರ್ ಪ್ಯಾನಲ್ ಅಳವಡಿಕೆ ಸೇರಿದಂತೆ ಇತರ ಹಲವು ಕೆಲಸಗಳು ಬಾಕಿ ಇವೆ.

ಹುಬ್ಬಳ್ಳಿ ವಿಮಾನ ನಿಲ್ದಾಣದ ಸೋಲಾರ್ ಘಟಕ ವಾರ್ಷಿಕ 140 ಲಕ್ಷ ಯೂನಿಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಇದರಿಂದ, ವಿದ್ಯೂತ್​ ಬಿಲ್​ಗೆಂದು ಭರಿಸುತ್ತಿದ್ದ ಕೋಟ್ಯಂತರ ರೂಪಾಯಿಗಳ ಉಳಿತಾಯವಾಗಲಿದೆ.

ಹಸಿರು ಮತ್ತು ನವೀಕರಿಸಬಹುದಾದ ಇಂಧನದ ಬಳಕೆಯನ್ನು ಉತ್ತೇಜಿಸಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಹುಬ್ಬಳ್ಳಿ ಏರ್​ಪೋರ್ಟ್​ನಲ್ಲಿ ಸೋಲಾರ್ ಘಟಕ ಸ್ಥಾಪನೆಗೆ ಮುಂದಾಗಿದೆ. ಖಾಸಗಿ ಒಡೆತನದಲ್ಲಿರುವ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೊರತುಪಡಿಸಿ ಮೈಸೂರು, ಬೆಳಗಾವಿ, ಕಲಬುರಗಿ, HAL ವಿಮಾನ ನಿಲ್ದಾಣಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್) ಮೂಲಕ ವಿದ್ಯುತ್ ಪೂರೈಸಲಿದೆ. ಹಲವಾರು ಯೋಜನೆಗಳ ಮ‌ೂಲಕ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಹುಬ್ಬಳ್ಳಿಯ ವಿಮಾನ ನಿಲ್ದಾಣ ಈ ಮೂಲಕ ಮತ್ತೊಂದು ಮೈಲಿಗಲ್ಲಿಗೆ ಸಾಕ್ಷಿಯಾಗುವತ್ತ ಹೆಜ್ಜೆ ಇಟ್ಟಿದೆ. -ದತ್ತಾತ್ರೇಯ ಪಾಟೀಲ್

ಲಸಿಕೆ ವಿತರಣೆಗೆ ತಯಾರಾಗಿವೆ ಈ ಎರಡು ವಿಮಾನ ನಿಲ್ದಾಣಗಳು

Published On - 7:05 am, Sat, 12 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!