ಹುಬ್ಬಳ್ಳಿ ಅಂಜಲಿ ಕೊಲೆ ಪ್ರಕರಣದಲ್ಲಿ ಪೊಲೀಸರ ಲೋಪವೂ ಇದೆ: ಜಿ ಪರಮೇಶ್ವರ್​

|

Updated on: May 17, 2024 | 11:53 AM

ಹುಬ್ಬಳ್ಳಿಯಲ್ಲಿ ಒಂದು ತಿಂಗಳ ಅಂತರದಲ್ಲಿ ಇಬ್ಬರು ಯುವತಿಯರು ಬರ್ಬರವಾಗಿ ಕೊಲೆಯಾಗಿದ್ದಾರೆ. ಏಪ್ರಿಲ್​ 18 ನೇಹಾ ಹಿರೇಮಠ ಕೊಲೆಯಾಗಿದ್ದರೇ, ಮೇ 15 ರಂದು ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಕೊಲೆ ಮಾಡಲಾಗಿದೆ. ಇದೀಗ ಸರ್ಕಾರಕ್ಕೆ ತಲೆನೋವಾಗಿರುವ ಅಂಜಲಿ ಕೊಲೆ ಪ್ರಕರಣ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ ಸುದ್ದಿಗೋಷ್ಠಿ ನಡೆಸಿದ್ದಾರೆ.

ಹುಬ್ಬಳ್ಳಿ ಅಂಜಲಿ ಕೊಲೆ ಪ್ರಕರಣದಲ್ಲಿ ಪೊಲೀಸರ ಲೋಪವೂ ಇದೆ: ಜಿ ಪರಮೇಶ್ವರ್​
ಗೃಹ ಸಚಿವ ಜಿ ಪರಮೇಶ್ವರ
Follow us on

ಬೆಂಗಳೂರು, ಮೇ 17: ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಪ್ರತಿಪಕ್ಷಗಳು ಮತ್ತು ಸ್ವಪಕ್ಷದ ​ ನಾಯಕರು ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವ ನಡುವೆ, ಹುಬ್ಬಳ್ಳಿ (Hubballi) ಅಂಜಲಿ ಅಂಬಿಗೇರ (20) ಹತ್ಯೆ (Anjali Ambiger) ಪ್ರಕರಣದಲ್ಲಿ ಪೊಲೀಸರ ಲೋಪವೂ ಇದೆ ಎಂದು ಸ್ವತಃ ಗೃಹ ಸಚಿವ ಜಿ ಪರಮೇಶ್ವರ್​ (G Parmeshwar) ಒಪ್ಪಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ತವ್ಯ ಲೋಪದಡಿ ಪೊಲೀಸ್​ ಇನ್ಸ್​ಪೆಕ್ಟರ್​ ಮತ್ತು ಮಹಿಳಾ ಹೆಡ್​​ಕಾನ್​ಸ್ಟೇಬಲ್​ ಅವರನ್ನು ಅಮಾನತುಗೊಳಿಸಲಾಗಿದೆ. ನನ್ನ ಮೊಮ್ಮಗಳಿಗೆ ಜೀವ ಬೆದರಿಕೆ ಇದೆ ಅಂತ ಕೊಲೆಯಾದ ಅಂಜಲಿ ಅಜ್ಜಿ ಪೊಲೀಸರಿಗೆ ದೂರು ಕೊಟ್ಟಿರಲಿಲ್ಲ, ಕೇವಲ ಮಾಹಿತಿ ನೀಡಿದ್ದರು. ಅಂಜಲಿ ಪೋಷಕರು, ಪೊಲೀಸರಿಗೆ ಮೊದಲೆ ಮಾಹಿತಿ ನೀಡಿದ್ದೇವು ಅಂತ ಅಂದಿದ್ದಾರೆ. ಸದ್ಯ ಕೊಲೆ ಆರೋಪಿ ವಿಶ್ವನನ್ನು ಪೊಲೀಸರು ಬಂಧಿಸಿದ್ದಾರೆ, ಯಾವುದೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಎಸ್​ಐಟಿ ವರದಿ ​ಮಂಡ್ಯ ಶಾಸಕರಿಗೆ ಸಿಗುತ್ತೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಆರೋಪಕ್ಕೆ ಪರಮೇಶ್ವರ್ ಪ್ರತಿಕ್ರಿಯಿಸಿ, ಪ್ರಕರಣ ಇನ್ನೂ ತನಿಖೆ ಆಗುತ್ತಿದೆ. ಅನೇಕ ವಿಚಾರವನ್ನು ಸಾರ್ವಜನಿಕಗೊಳಿಸುವಂತಿಲ್ಲ. ಮಂಡ್ಯ ಶಾಸಕರಿಗೆ ಯಾರು ಮಾಹಿತಿ ನೀಡುತ್ತಾರೆ? ಆರೋಪ ಸುಲಭ, ಆದರೆ ನಾವು ಯಾವ ಮುಲಾಜಿಗೆ ಒಳಪಡಲ್ಲ. ಎಸ್​ಟಿಐ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿದ್ದಾರೆ. ನಮಗೆ, ಸಿಎಂಗೆ ಯಾವ ಮಾಹಿತಿ ಕೊಡಬೇಕು ಕೊಡುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ಹುಬ್ಬಳ್ಳಿ ಅಂಜಲಿ ಹತ್ಯೆ ಆರೋಪಿ ಪೊಲೀಸ್ ಬಲೆಗೆ ಬಿದ್ದಿದ್ದೇ ರೋಚಕ; ರೈಲಿನಲ್ಲಿ ಮತ್ತೊಬ್ಬ ಮಹಿಳೆಗೆ ಚಾಕು ತೋರಿಸಿದ್ದ ಹಂತಕ

ಹಾಸನ ಸಂಸದ ಪ್ರಜ್ವಲ್‌ನನ್ನು ವಿದೇಶದಿಂದ ಕರೆ ತರುವ ವಿಚಾರವಾಗಿ ಮಾತನಾಡಿದ ಅವರು, ಪ್ರಜ್ವಲ್​ ರೇವಣ್ಣರನ್ನು ಕರೆತರುವ ಕೆಲಸ ನಡೆಯುತ್ತಿದೆ, ಅದು ನಿಲ್ಲಲ್ಲ. ಸಂಸದ ಪ್ರಜ್ವಲ್​ರನ್ನು ಕರೆತಂದು ಕಾನೂನು ಕ್ರಮ ಕೈಗೊಳ್ಳುತ್ತೇವೆ. ಸರ್ಕಾರ ಒಳ್ಳೆ ಕೆಲಸ ಮಾಡ್ತಿದೆ ಅಂತಾ ವಿಪಕ್ಷದವರು ಹೇಳುವುದಿಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:21 am, Fri, 17 May 24