ಅಂಜಲಿ ಹತ್ಯೆ: ದೂರು ಬಂದಿದ್ರೂ ನಿರ್ಲಕ್ಷ್ಯ, ಬೆಂಡಿಗೇರಿ ಠಾಣೆಯ ಇನ್ಸ್​ಪೆಕ್ಟರ್-ಪೇದೆ ಸಸ್ಪೆಂಡ್

ಹುಬ್ಬಳ್ಳಿಯಲ್ಲಿ ನಡೆದ ಮತ್ತೊಂದು ಯುವತಿಯ ಹತ್ಯೆ ಪ್ರಕರಣ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹತ್ಯೆ ಬಗ್ಗೆ ಮೊದಲೇ ಅಂಜಲಿ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದರೂ, ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿರುವ ಬೆಂಡಿಗೇರಿ ಠಾಣೆ ಇನ್ಸ್​ಪೆಕ್ಟರ್​ ಮತ್ತು ಮಹಿಳಾ ಕಾನ್ಸ್​ಟೇಬಲ್​​ ಅನ್ನು ಅಮಾನತು ಮಾಡಲಾಗಿದೆ ಎಂದು ಟಿವಿ9ಗೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಅಂಜಲಿ ಹತ್ಯೆ: ದೂರು ಬಂದಿದ್ರೂ ನಿರ್ಲಕ್ಷ್ಯ, ಬೆಂಡಿಗೇರಿ ಠಾಣೆಯ ಇನ್ಸ್​ಪೆಕ್ಟರ್-ಪೇದೆ ಸಸ್ಪೆಂಡ್
ಅಂಜಲಿ ಹತ್ಯೆ: ದೂರು ಬಂದಿದ್ರೂ ನಿರ್ಲಕ್ಷ್ಯ, ಬೆಂಡಿಗೇರಿ ಠಾಣೆಯ ಇನ್ಸ್​ಪೆಕ್ಟರ್-ಪೇದೆ ಸಸ್ಪೆಂಡ್
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:May 15, 2024 | 10:03 PM

ಹುಬ್ಬಳ್ಳಿ, ಮೇ 15: ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಯುವತಿ ಅಂಜಲಿ (Anjali) ಅಂಬಿಗೇರ ಹತ್ಯೆ ಪ್ರಕರಣ ಹಿನ್ನಲೆ ಬೆಂಡಿಗೇರಿ ಠಾಣೆ ಇನ್ಸ್​ಪೆಕ್ಟರ್​ ಮತ್ತು ಮಹಿಳಾ ಕಾನ್ಸ್​ಟೇಬಲ್​​ ಅನ್ನು ಅಮಾನತು (suspend) ಮಾಡಲಾಗಿದೆ. ಈ ಕುರಿತಾಗಿ ಟಿವಿ9ಗೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಮಾಹಿತಿ ನೀಡಿದ್ದು, ಅಂಜಲಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅಂಬಿಗೇರ ಅಜ್ಜಿ ಬೆಂಡಿಗೇರಿ ಠಾಣೆಗೆ ದೂರು ನೀಡಿದ್ದರು. ದೂರು ನೀಡಿದ್ದರೂ ಪೊಲೀಸರು ನಿರ್ಲಕ್ಷಿಸಿದ್ದ ಆರೋಪ ಕೇಳಿಬಂದಿತ್ತು. ಹೀಗಾಗಿ ಬೆಂಡಿಗೇರಿ ಠಾಣೆ ಇನ್ಸ್​ಪೆಕ್ಟರ್ ಚಂದ್ರಶೇಖರ ಬಿ.ಚಿಕ್ಕೋಡಿ, ಕಾನ್ಸ್​ಟೇಬಲ್ ರೇಖಾ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನೂ ಆರೋಪಿ ವಿಶ್ವ ಒಂದು ವಾರದ ಹಿಂದೆಯೇ ಅಂಜಲಿಗೆ ಜೀವ ಬೆದರಿಕೆ ಹಾಕಿದ್ದು, ನನ್ನ ಜೊತೆಗೆ ಬಾರದಿದ್ದರೆ ನೇಹಾ ತರ ಕೊಲೆ ಮಾಡುತ್ತೇನೆ ಎಂದು ವಾರ್ನಿಂಗ್ ಮಾಡಿದ್ದ ಎನ್ನಲಾಗಿದೆ. ಕೂಡಲೇ ಅಂಜಲಿ ಕುಟುಂಬಸ್ಥರು ಬೆಂಡಿಗೇರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಪೊಲೀಸರು ಅಂಜಲಿ ಕುಟುಂಬಸ್ಥರಿಗೆ ಬೈದು ನಿಮ್ಮದು ಮೂಢನಂಬಿಕೆ ಹಾಗೇನು ಆಗಲ್ಲ ಹೋಗಿ ಅಂತ ನಿರ್ಲಕ್ಷ್ಯ ತೋರಿಸಿದ್ದರು. ಆ ಹಿನ್ನೆಲೆ ಇದೀಗ ಅವರುನ್ನು ಅಮಾನತ್ತು ಮಾಡಲಾಗಿದೆ.

ಇದನ್ನೂ ಓದಿ: ಅಂಜಲಿ ಕೊಲೆ: ರಜೆ ರದ್ದುಗೊಳಿಸಿ ಕರ್ತವ್ಯಕ್ಕೆ ಹಾಜರಾದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್

ಪ್ರೀತಿ ಒಪ್ಪದ ಕಾರಣ ವಿಶ್ವ ಎನ್ನುವ ಪಾಗಲ್ ಪ್ರೇಮಿ ಅಂಜಲಿಯನ್ನು ಹತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಮೂಲತಃ ಕಳ್ಳತನ ಚಾಳಿ ರೂಢಿಸಿಕೊಂಡಿದ್ದ ವಿಶ್ವ ಅಲಿಯಾಸ್ ಗೀರಿಶ್, ಅಂಜಲಿ ಕ್ಲಾಸ್ಮೆಂಟ್ ಆಗಿದ್ದ. ಆಗಿನಿಂದಲೂ ಅಂಜಲಿಯನ್ನು ಒನ್ ಸೈಡ್ ಲವ್ ಮಾಡುತ್ತಿದ್ದ. ತನ್ನನ್ನು ಲವ್ ಮಾಡುವಂತೆ ಅಂಜಲಿಯನ್ನು ಪೀಡಿಸುತ್ತಿದ್ದ ಎನ್ನಲಾಗಿದೆ.

ಈ‌ ವಿಷಯ ಅಂಜಲಿ ಕುಟುಂಬಸ್ಥರಿಗೆ ತಿಳಿದು ಅಂಜಲಿ ತಂದೆ ಮೋಹನ್ ಆರೋಪಿಗೆ ವಿಶ್ವನಿಗೆ ಬುದ್ದಿವಾದ ಹೇಳಿದ್ದರು. ಆದರೂ ಸಹ ವಿಶ್ವ ಮಾತ್ರ ತನ್ನ ಚಾಳಿ ಮುಂದುವರಿಸಿದ್ದ. ತನ್ನ ಪ್ರೀತಿ ಒಪ್ಪದಿದ್ದ್ರೆ ನೇಹಾ ತರ ಕೊಲೆ ಮಾಡತ್ತಿನಿ ಅಂತ ಬೆದರಿಕೆ ಹಾಕಿದ್ದ. ಇದ್ದಕ್ಕೂ ಅಂಜಲಿ ಬಗ್ಗದ ಹಿನ್ನೆಲೆ ಆಕ್ರೋಶಗೊಂಡ ವಿಶ್ವ, ಹೇಳಿದಂತೆ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ಹತ್ಯೆ ಮಾಡಿ ಪರಾರಿಯಾಗಿರುವ ವಿಶ್ವನ ಬಂಧನಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಎರಡು ವಿಶೇಷ ತಂಡ ರಚನೆ ಮಾಡಿದೆ. ಮತ್ತೊಂದು ಕಡೆ ಹತ್ಯೆ ಬಗ್ಗೆ ಮೊದಲೇ ಅಂಜಲಿ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದರೂ, ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿರುವ ಬೆಂಡಿಗೇರಿ ಪೊಲೀಸರ ಮೇಲೂ ತನಿಖೆ ನಡೆಯುತ್ತಿದೆ. ಏಪ್ರಿಲ್ 21 ರಂದು ಅಂಜಲಿ ಕುಟುಂಬ ಬೆಂಡಿಗೇರಿ ಪೊಲೀಸ್ ಠಾಣೆ ಬಂದು ಹೋಗಿರುವ ಸಿಸಿ ಕ್ಯಾಮರಾ ದೃಶ್ಯಗಳಿದ್ದು, ಅವರು ಯಾಕೆ ಬಂದಿದ್ದರು ಎನ್ನುವ ಸ್ಪಷ್ಟತೆಯಿಲ್ಲ.

ಇದನ್ನೂ ಓದಿ: ಹುಬ್ಬಳ್ಳಿ ಅಂಜಲಿ ಹಂತಕನ ಪತ್ತೆಗೆ ಎರಡು ವಿಶೇಷ ತಂಡ ರಚನೆ, ಪೊಲೀಸ್ ಆಯುಕ್ತೆ ಹೇಳಿದ್ದೇನು?

ಇನ್ನೂ ಅವರ ಬೇರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆ ಬಂದಿದ್ದಿರುವ ಬಗ್ಗೆ ಠಾಣೆ ಸಿಬ್ಬಂದಿ ‌ಸಮಜಾಯಿಷಿ ನೀಡಿದ್ದು, ಇದರ ಬಗ್ಗೆ ಸಂಪೂರ್ಣ ತನಿಖೆ ಮಾಡಿ ಸಿಬ್ಬಂದಿ ನಿರ್ಲಕ್ಷ್ಯ ಕಂಡು ಬಂದ್ರೆ ಕ್ರಮ ಕೈಗೊಳ್ಳುವ ಚಿಂತನೆಯಲ್ಲಿ ಹಿರಿಯ ಅಧಿಕಾರಿಗಳು ಇದ್ದಾರೆ. ಇನ್ನೂ ಪ್ರಕರಣ ಪ್ರಾಥಮಿಕ ಹಂತ ಬಗ್ಗೆ ಕಮಿಷನರ್ ರೇಣುಕಾ ಸುಕುಮಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:45 pm, Wed, 15 May 24

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ