AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi Weekly Express Train: ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ವಿಶೇಷ ರೈಲಿನ ಒಂದು ಟ್ರಿಪ್ ರದ್ದು

ಹುಬ್ಬಳ್ಳಿ-ಕೊಟ್ಟಾಯಂ-ಎಸ್‌ಎಸ್‌ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ನ ಒಂದು ಟ್ರಿಪ್ ಅನ್ನು ರದ್ದುಗೊಳ್ಳಳಿದೆ. ಈ ಬಗ್ಗೆ ನೈಋತ್ಯ ರೈಲ್ವೇ ಪ್ರಕರಣಯಲ್ಲಿ ತಿಳಿಸಿದೆ. ಹಿಂದಿನ ವೇಳಾಪಟ್ಟಿಯಂತೆ ಈ ಎಕ್ಸ್​ಪ್ರೆಸ್ ರೈಲು ಎಂಟು ಟ್ರಿಪ್​ಗಳನ್ನು ನಡೆಸುತ್ತಿತ್ತು. ಡಿಸೆಂಬರ್ 2 ರಿಂದ ಎಂಟರ ಬದಲು ಏಳು ಟ್ರಿಪ್​ಗಳನ್ನು ನಡೆಸಲಿದೆ.

Hubballi Weekly Express Train: ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ವಿಶೇಷ ರೈಲಿನ ಒಂದು ಟ್ರಿಪ್ ರದ್ದು
ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ನ ಒಂದು ಟ್ರಿಪ್ ರದ್ದುಗೊಳಿಸಿದ ನೈಋತ್ಯ ರೈಲ್ವೇ (ಸಾಂದರ್ಭಿಕ ಚಿತ್ರ)Image Credit source: FILE PHOTO
TV9 Web
| Edited By: |

Updated on:Nov 30, 2023 | 7:29 AM

Share

ಹುಬ್ಬಳ್ಳಿ, ನ.30: ಎಸ್‌ಎಸ್‌ಎಸ್ ಹುಬ್ಬಳ್ಳಿ (SSS Hubli) ಮತ್ತು ಕೊಟ್ಟಾಯಂ ರೈಲು ನಿಲ್ದಾಣಗಳ ನಡುವೆ ಬೇಡಿಕೆಯ ಹೆಚ್ಚಳವನ್ನು ಪೂರೈಸಲು ನೈಋತ್ಯ ರೈಲ್ವೇ (SWR) ಡಿಸೆಂಬರ್ 2 ರಿಂದ ಜನವರಿ 20ರ ವರೆಗೆ ವಿಶೇಷ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ. ಅದಾಗ್ಯೂ, ಕಾರ್ಯಾಚರಣೆ ನಿರ್ಬಂಧಗಳಿಂದಾಗಿ ಈ ವಿಶೇಷ ರೈಲುಗಳ ಟ್ರಿಪ್​ಗಳಲ್ಲಿ ಒಂದು ಟ್ರಿಪ್​ ಅನ್ನು ರದ್ದುಗೊಳಿಸಲಾಗಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿದ ನೈಋತ್ಯ ರೈಲ್ವೆ, ರೈಲು ಸಂಖ್ಯೆ 07305/07306 ಎಸ್‌ಎಸ್‌ಎಸ್ ಹುಬ್ಬಳ್ಳಿ-ಕೊಟ್ಟಾಯಂ-ಎಸ್​ಎಸ್​ಎಸ್​ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್‌ನ ಒಂದು ಟ್ರಿಪ್ ಅನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ಹಿಂದಿನ ವೇಳಾಪಟ್ಟಿಯಂತೆ, ರೈಲು ಸಂಖ್ಯೆ 07305/07306 ಎಸ್‌ಎಸ್‌ಎಸ್ ಹುಬ್ಬಳ್ಳಿ-ಕೊಟ್ಟಾಯಂ-ಎಸ್‌ಎಸ್‌ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ಎಂಟು ಟ್ರಿಪ್‌ಗಳನ್ನು ಓಡಿಸಬೇಕಿತ್ತು. ಆದರೆ, ಈಗ ಅದನ್ನು ಏಳು ಟ್ರಿಪ್‌ಗಳಿಗೆ ಇಳಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು-ಧಾರವಾಡ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಬೆಳಗಾವಿವರೆಗೂ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

ಹಿಂದಿನ ಅಧಿಸೂಚನೆಯ ಪ್ರಕಾರ, ವಿಶೇಷ ರೈಲು ಹುಬ್ಬಳ್ಳಿಯಿಂದ ಡಿಸೆಂಬರ್ 2 ರಿಂದ ಜನವರಿ 20, 2024 ರವರೆಗೆ ಮತ್ತು ಕೊಟ್ಟಾಯಂನಿಂದ ಡಿಸೆಂಬರ್ 3 ರಿಂದ ಜನವರಿ 20, 2024 ರವರೆಗೆ ಚಲಿಸಬೇಕಿತ್ತು. ಪರಿಷ್ಕೃತ ವೇಳಾಪಟ್ಟಿಯಂತೆ, ರೈಲು ಸಂಖ್ಯೆ 07305 SSS ಹುಬ್ಬಳ್ಳಿ-ಕೊಟ್ಟಾಯಂ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ಇರುತ್ತದೆ. ಡಿಸೆಂಬರ್ 2 ರಿಂದ ಜನವರಿ 13, 2024 ರವರೆಗೆ ಶನಿವಾರದಂದು ಬೆಳಿಗ್ಗೆ 10.30 ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬೆಳಿಗ್ಗೆ 8.15 ಕ್ಕೆ ಕೊಟ್ಟಾಯಂಗೆ ತಲುಪಲಿದೆ.

ರೈಲು ಸಂಖ್ಯೆ 07306 ಕೊಟ್ಟಾಯಂ-ಎಸ್‌ಎಸ್‌ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ಡಿಸೆಂಬರ್ 3 ರಿಂದ ಜನವರಿ 14, 2024 ರವರೆಗೆ ಭಾನುವಾರದಂದು ಬೆಳಗ್ಗೆ 11 ಗಂಟೆಗೆ ಕೊಟ್ಟಾಯಂನಿಂದ ಹೊರಟು ಮರುದಿನ ಬೆಳಿಗ್ಗೆ 9.50 ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿಗೆ ಆಗಮಿಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:25 am, Thu, 30 November 23

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​