AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ; ವಿಡಿಯೋ ವೈರಲ್

ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ; ವಿಡಿಯೋ ವೈರಲ್

ಸಂಜಯ್ಯಾ ಚಿಕ್ಕಮಠ
| Edited By: |

Updated on: Apr 04, 2026 | 9:58 PM

Share

ಹುಬ್ಬಳ್ಳಿ ನಗರದಲ್ಲಿ ನಡೆದ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಮುಲ್ಲಾ ಮೇಲೆ ಹಲ್ಲೆ ನಡೆದಿದೆ. ಶ್ರೀರಾಮಸೇನೆ ಕಾರ್ಯಕರ್ತರು ಮತ್ತು ಎಸ್ಎಸ್‌ಕೆ ಸಮಾಜದ ಯುವಕರು ಸಮೀರ್ ಮುಲ್ಲಾನನ್ನು ಮನಸೋ ಇಚ್ಛೆ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಸುಮಾರು ಐವತ್ತಕ್ಕೂ ಹೆಚ್ಚು ಜನರಿರುವ ಗುಂಪಿನಿಂದ ಥಳಿತಕ್ಕೊಳಗಾದ ಸಮೀರ್‌ನನ್ನು ಹಳೆ ಹುಬ್ಬಳ್ಳಿ ಪೊಲೀಸರಿಗೆ ಒಪ್ಪಿಸಲಾಗಿದೆ.

ಹುಬ್ಬಳ್ಳಿ, ಏಪ್ರಿಲ್​ 04: ಹುಬ್ಬಳ್ಳಿಯ ಜಿಮ್​ ಟ್ರೈನರ್ ಸಮೀರ್​ ವಿರುದ್ಧ ಅತ್ಯಾಚಾರ ಆರೋಪ​ ಕೇಸ್​ ದಾಖಲಾಗಿದೆ. ಈ ಮಧ್ಯೆ ಸಮೀರ್​ಗೆ ಐವತ್ತಕ್ಕೂ ಹೆಚ್ಚು ಜನರ ಗುಂಪಿನಿಂದ ಮನಸೋ ಇಚ್ಛೆ ಥಳಿಸಿರುವ ವಿಡಿಯೋ ಒಂದು ಇದೀಗ ವೈರಲ್​ ಆಗಿದೆ. ಹುಬ್ಬಳ್ಳಿ ನಗರದ ದೇವಾಂಗಪೇಟ್​ನಲ್ಲಿರುವ ಸಮೀರ್ ಅಪಾರ್ಟ್‌ಮೆಂಟ್​ಗೆ ನಿನ್ನೆ ಮುಂಜಾನೆ ಶ್ರೀರಾಮಸೇನೆ ಸಂಘಟನೆ ಕಾರ್ಯಕರ್ತರು ಮತ್ತು ಕೆಲ ಎಸ್​ಎಸ್​ಕೆ ಸಮಾಜದ ಯುವಕರು ತೆರಳಿದ್ದಾರೆ. ಸಮೀರ್ ಬರುತ್ತಿದ್ದಂತೆ ಆತನ ಮೊಬೈಲ್ ಕಸಿದುಕೊಂಡಿದ್ದಾರೆ. ನಂತರ ಹಿಗ್ಗಾಮುಗ್ಗಾ ಥಳಿಸಿ, ಹಳೆ ಹುಬ್ಬಳ್ಳಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us