AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi: ಹುಬ್ಬಳ್ಳಿಯಲ್ಲಿ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ಆರೋಪ: ಬಂಧನ

ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಆರೋಪ ಮಾಡಲಾಗಿದ್ದು, ಆರೋಪಿ ಅಫ್ತಾಬ್‌ನನ್ನು ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ಬಳಿಕ ಆರೋಪಿಯನ್ನು ಜಡ್ಜ್‌ ಮುಂದೆ ಹಾಜರುಪಡಿಸಲಾಗಿದೆ ಎಂದು ಟಿವಿ9ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್‌ ಮಾಹಿತಿ ನೀಡಿದ್ದಾರೆ.

Hubballi: ಹುಬ್ಬಳ್ಳಿಯಲ್ಲಿ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ಆರೋಪ: ಬಂಧನ
ಹಲ್ಲೆ ಆರೋಪ ಕೇಸ್​
ಶಿವಕುಮಾರ್ ಪತ್ತಾರ್
| Edited By: |

Updated on:Apr 22, 2024 | 8:22 PM

Share

ಹುಬ್ಬಳ್ಳಿ, ಏಪ್ರಿಲ್​ 22: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್​ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ (neha murder case) ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಸದ್ಯ ನೇಹಾ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನಗರದಲ್ಲಿ ಹಿಂದೂ ಯುವತಿ (girl) ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಆರೋಪ ಮಾಡಲಾಗಿದೆ. ಅಫ್ತಾಬ್ ಎಂಬಾತನಿಂದ ಹಲ್ಲೆ ಆರೋಪ ಕೇಳಿಬಂದಿದ್ದು, ಸದ್ಯ ಕೇಶ್ವಾಪುರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹಲ್ಲೆ ಮಾಡಿದ ಆರೋಪಿ ಅಫ್ತಾಬ್ ನನ್ನ ವಿಚಾರಣೆ ಮಾಡಿ ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದೆ ಎಂದು ಟಿವಿ9ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಹೇಳಿದ್ದಾರೆ.

ಸಂತ್ರಸ್ತ ಯುವತಿ ಅಫ್ತಾಬ್ ಜೊತೆ ಕೆಲ ದಿನಗಳಿಂದ ಸ್ನೇಹ ಹೊಂದಿದ್ದಾಳೆ. ಸ್ನೇಹದಿಂದ ಇದ್ದಾಗ ಯುವತಿಗೆ  ಅಫ್ತಾಬ್ ಕೆಲವು ಗಿಫ್ಟ್​ಗಳನ್ನ ಕೊಟ್ಟಿದ್ದಾನೆ. ಗಿಫ್ಟ್ ವಾಪಸ್ ಕೊಡುವ ಸಮಯದಲ್ಲಿ ಹಲ್ಲೆ ಮಾಡಿರುವ ಆರೋಪ ಮಾಡಲಾಗಿದೆ. ಸದ್ಯ ಹಲ್ಲೆ ಆರೋಪ ಪ್ರಕರಣ ಕೇಶ್ವಾಪುರ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಗಿಫ್ಟ್ ಸುಟ್ಟು ಹಾಕಿ ಬಳಿಕ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ: ಸಂತ್ರಸ್ತ ಯುವತಿ

ಹಲ್ಲೆಗೊಳಗಾದ ಸಂತ್ರಸ್ತ ಯುವತಿ ಪ್ರತಿಕ್ರಿಯಿಸಿದ್ದು, ಹಣ್ಣಿನ ಅಂಗಡಿ ವ್ಯಾಪಾರಿ ಅಫ್ತಾಬ್​ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ಮಾಡಿರುವ ಅಫ್ತಾಬ್ ನನಗೆ ಎರಡು ವರ್ಷದಿಂದ ಪರಿಚಯ. ಅಫ್ತಾಬ್ ಮತ್ತು ನನ್ನ ನಡುವೆ ಸ್ನೇಹವಿತ್ತು, ಪ್ರೀತಿಸುವಂತೆ ಪೀಡಿಸುತ್ತಿದ್ದ. ನನ್ನ ಮುಸ್ಲಿಂ ಗೆಳತಿ ಅಫ್ತಾಬ್​ನನ್ನು ಪರಿಚಯ ಮಾಡಿಕೊಟ್ಟಿದ್ದಳು ಎಂದಿದ್ದಾಳೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದ್ದನ್ನು ಸ್ವಾಗತಿಸಿದ ನಿರಂಜನ ಹಿರೇಮಠ

ನನ್ನ ಬರ್ತ್​​ಡೇ ಮತ್ತು ರಂಜಾನ್​ಗೆ ಬಲವಂತವಾಗಿ ಗಿಫ್ಟ್ ಕೊಟ್ಟಿದ್ದ. ನೇಹಾ ಪ್ರಕರಣದ ಬಳಿಕ ಸ್ನೇಹ ಕಳೆದುಕೊಳ್ಳಲು ನಿರ್ಧಾರ ಮಾಡಿದ್ದೆ. ಇವತ್ತು ನನಗೆ ಕರೆ ಮಾಡಿ ಹಣ್ಣಿನ‌ ಅಂಗಡಿ ಬಳಿ ಬರಲು ತಿಳಿಸಿದ್ದ. ಅಫ್ತಾಬ್ ಅಂಗಡಿ ಹತ್ತಿರ ಹೋಗಿ ಆತನ ಗಿಫ್ಟ್ ವಾಪಸ್​ ನೀಡಿದೆ. ಆ ಗಿಫ್ಟ್ ಸುಟ್ಟು ಹಾಕಿ ಬಳಿಕ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ. ಸ್ಥಳೀಯರು ಅಫ್ತಾಬ್​ನನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿರುವ ಅಫ್ತಾಬ್​ಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:10 pm, Mon, 22 April 24

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ