JP Nadda: ನೇಹಾ ಹತ್ಯೆ ಕೇಸ್​ ಬೆನ್ನಲ್ಲೇ ಹುಬ್ಬಳ್ಳಿಗೆ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ

ಒಂದು ಕಡೆ ಲೋಕಸಭೆ ಚುನಾವಣಾ ಪ್ರಚಾರ ನಡೆಯುತ್ತಿದ್ದರೆ, ಇನ್ನೊಂದೆಡೆ ನೇಹಾ ಹತ್ಯೆ ಪ್ರಕರಣದ ಕಾವು ಜೋರಾಗುತ್ತಿರುವ ಹೊತ್ತಲ್ಲೇ ಏಪ್ರಿಲ್ 21ರಂದು ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸುತ್ತಿದ್ದಾರೆ. ಈಗಾಗಲೇ ನೇಹಾ ಹತ್ಯೆ ಖಂಡಿಸಿ ರಾಜ್ಯದಲ್ಲಿ ಜನರು ಆಕ್ರೋಶಗೊಂಡಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಜೆಪಿ ನಡ್ಡಾ ಅವರು ವಾಣಿಜ್ಯ ನಗರಿಗೆ ಭೇಟಿ ನೀಡುತ್ತಿದ್ದಾರೆ.

JP Nadda: ನೇಹಾ ಹತ್ಯೆ ಕೇಸ್​ ಬೆನ್ನಲ್ಲೇ ಹುಬ್ಬಳ್ಳಿಗೆ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ
Edited By: ವಿವೇಕ ಬಿರಾದಾರ

Updated on: Apr 21, 2024 | 7:18 AM

ಹುಬ್ಬಳ್ಳಿ, ಏಪ್ರಿಲ್​ 20: ನೇಹಾ (neha hiremath) ಕೊಲೆಗೆ ಒಕ್ಕೂರಲ ಖಂಡನೆ ವ್ಯಕ್ತವಾಗಿದೆ. ಕೊಲೆ ಪ್ರಕರಣ ಖಂಡಿಸಿ ಮಠಾಧೀಶರು ಮತ್ತು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ವಿವಿಧ ರಾಜಕಾರಣಿಗಳು, ಮಠಾಧೀಶರು ಮತ್ತು ನಾಗರೀಕರು ನೇಹಾ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುತ್ತಿದ್ದಾರೆ. ಆರೋಪಿಯನ್ನು ಕೊಲ್ಲಬೇಕು ಎಂಬ ಆಗ್ರಹ ವ್ಯಕ್ತವಾಗುತ್ತಿದೆ. ದಿನದಿಂದ ದಿನಕ್ಕೆ ಕಾವು ಜೋರಾಗುತ್ತಿರುವ ಹೊತ್ತಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರು ಇಂದು (ಏ.21) ಹುಬ್ಬಳ್ಳಿಗೆ ಭೇಟಿ ನೀಡುತ್ತಿದ್ದಾರೆ.

ನಡ್ಡಾ ಹುಬ್ಬಳ್ಳಿ ಭೇಟಿ ವಿವರ ಹೀಗಿದೆ

ಇಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸುತ್ತಿರುವ ಜೆಪಿ ನಡ್ಡಾ ವಿವಿಧ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದ್ದು, ಮಧ್ಯಾಹ್ನ 2 ರಿಂದ ರಾತ್ರಿ 10 ಗಂಟೆವರೆಗೂ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 3 ಗಂಟೆಗೆ ಹುಬ್ಬಳ್ಳಿಯ ಡೆನಿಸನ್ ಹೋಟೆಲ್​​ನಲ್ಲಿ ವಿವಿಧ ಸಮುದಾಯದ ಮುಖಂಡರೊಂದಿಗೆ ಸಭೆ ಮಾಡಲಿದ್ದಾರೆ.

ಇದನ್ನೂ ಓದಿ: ಧಾರವಾಡದಲ್ಲಿ ಸ್ಪರ್ಧಿಸಲು ಸ್ವಾಮೀಜಿಗೆ ಪೇಮೆಂಟ್​ ಆಗಿದೆ: ಶಾಸಕ ಯತ್ನಾಳ್​ ಆರೋಪ

ವಿದ್ಯಾನಗರದ ಸಾಖರೆ ಶಾಲೆಯಲ್ಲಿ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿರುವ ನಡ್ಡಾ, ಪ್ರಲ್ಹಾದ್​ ಜೋಶಿ ಪರ ಮತಯಾಚನೆ ಮಾಡಲಿದ್ದಾರೆ. 5 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ರಾತ್ರಿ 9 ಗಂಟೆಗೆ ಡೆನಿಸನ್ ಹೋಟೆಲ್​​ನಲ್ಲಿ ಕೋರ್ ಕಮೀಟಿ ಸಭೆ ಮಾಡಲಿದ್ದಾರೆ.

ವಿದ್ಯಾರ್ಥಿನಿ ನೇಹಾ ಸಾವಿಗೆ ಕರುನಾಡು ಮರುಗಿದೆ. ರಾಜ್ಯದ ಮೂಲೆ ಮೂಲೆಗಳಿಂದಲೂ ಆಗಮಿಸಿದ ಜನ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ವಿವಿಧ ಮಠಾಧೀಶರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಿ, ಘಟನೆಯನ್ನು ಖಂಡಿಸಿದರು. ದಿಂಗಾಲೇಶ್ವರ ಶ್ರೀಗಳ ನೇತೃತ್ವದಲ್ಲಿ ಮಠಾಧೀಶರ ಪ್ರತಿಭಟನೆ ನಡೆಯಿತು. ಮತ್ತೊಂದೆಡೆ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಕೆಲಕಾಲ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ಮಾಡಿದರು. ನಂತರ ಬಿ ವಿ ಕಾಲೇಜು ಬಳಿಯೂ ಪ್ರತಿಭಟನೆ ಮಾಡಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.

ಇದನ್ನೂ ಓದಿ: ಫಯಾಜ್ ತಂದೆತಾಯಿ ಕ್ಷಮೆ ಕೇಳಿದರೆ ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗುತ್ತದೆಯೇ? ನಿರಂಜನ ಹಿರೇಮಠ

ಇದೆ ವೇಳೆ ಬಿಡ್ನಾಳದಲ್ಲಿರುವ ನೇಹಾ ನಿವಾಸಕ್ಕೆ ವಿವಿಧ ಮಠಾಧೀಶರು ರಾಜಕಾರಣಿಗಳು ಮತ್ತು ಜನತೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು. ದಿಂಗಾಲೇಶ್ವರ ಶ್ರೀ, ಜಯಮೃತ್ಯುಂಜಯ ಸ್ವಾಮೀಜಿ, ಮುರುಘಾಮಠದ ಶ್ರೀ, ವಚನಾನಂದ ಸ್ವಾಮೀಜಿ ಸೇರಿ ಹಲವು ಮಠಾಧೀಶರು ಹಿರೇಮಠ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:57 pm, Sat, 20 April 24

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us