ಹುಬ್ಬಳ್ಳಿ: ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಕೊಲೆ ಬೆದರಿಕೆ, ಮುಸ್ಲಿಂ ಯುವಕ ಅರೆಸ್ಟ್

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಮಿಂಚಿನ ಕಾರ್ಯಚರಣೆ ಮೂಲಕ ಬಂಧಿಸಿದ್ದಾರೆ. ಸದ್ದಾಂ ಹುಸೇನ್‌ ಬಂಧಿತ ಆರೋಪಿ. ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಎಫ್‌ಐಆರ್ ದಾಖಲಾಗಿದೆ.

ಹುಬ್ಬಳ್ಳಿ: ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಕೊಲೆ ಬೆದರಿಕೆ, ಮುಸ್ಲಿಂ ಯುವಕ ಅರೆಸ್ಟ್
ಹುಬ್ಬಳ್ಳಿ: ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಕೊಲೆ ಬೆದರಿಕೆ, ಮುಸ್ಲಿಂ ಯುವಕ ಅರೆಸ್ಟ್
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: May 03, 2024 | 9:21 PM

ಹುಬ್ಬಳ್ಳಿ, ಮೇ 03: ಮೊನ್ನೆ ಮೊನ್ನೆಯಷ್ಟೇ ನಡೆದ ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ನೇಹಾ ಕೊಲೆ (neha murder) ಮಾಡಿದ ಆರೋಪಿ ಫಯಾಜ್​ಗೆ ಗಲ್ಲು ಶಿಕ್ಷೆಯಾಗಬೇಕೆಂದು ಅಮಿತ್​ ಶಾಗೆ ನೇಹಾ ಪೋಷಕರು ಇತ್ತೀಚೆಗೆ ಮನವಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಲವ್​ ಜಿಹಾದ್​ ಆರೋಪ ಕೂಡ ಕೇಳಿಬಂದಿದೆ. ಇದೀಗ ನಗರದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಮಿಂಚಿನ ಕಾರ್ಯಚರಣೆ ಮೂಲಕ ಬಂಧಿಸಿದ್ದಾರೆ. ಸದ್ದಾಂ ಹುಸೇನ್‌ ಬಂಧಿತ ಆರೋಪಿ.

ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೊಟ್ಟೆ ನೋವು ಹಿನ್ನೆಲೆ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ತಪಾಸಣೆ ವೇಳೆ ಅಪ್ರಾಪ್ತೆ ಗರ್ಭಿಣಿಯಾಗಿರುವುದು ದೃಢವಾಗಿದೆ. ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: Hubballi: ಹುಬ್ಬಳ್ಳಿಯಲ್ಲಿ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ಆರೋಪ: ಬಂಧನ

ಮುಸ್ಲಿಂ ಯುವಕನ ವಿರುದ್ಧ ಅಪ್ರಾಪ್ತೆ ಪೋಷಕರು ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ದೂರು ದಾಖಲಿಸಿರುವುದಾಗಿ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರಿಂದ ಅಧಿಕೃತ ಮಾಹಿತಿ ನೀಡಲಾಗಿದೆ.

ಪ್ರತಿಭಟನೆ ಕಾವು ಜೋರಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸ್ ಇಲಾಖೆ ಎಸಿಪಿ ಶಿವಪ್ರಕಾಶ್ ನಾಯ್ಕ್ ಸಮ್ಮುಖದಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ಈ ವೇಳೆ ಆರೋಪಿ ಬಂಧನಕ್ಕೆ ಆಗ್ರಹಿಸಿ ನವನಗರ ಠಾಣೆ ಮುಂದೆ ಹಿಂದೂಪರ ಸಂಘಟನೆ ಮತ್ತು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಗಿದೆ. ಪ್ರತಿಭಟನೆ ಹಿನ್ನಲೆ ನವನಗರ ಠಾಣೆಗೆ ಕಾನೂನು ಸುವ್ಯವಸ್ಥೆ ಡಿಸಿಪಿ ರಾಜೀವ್​ ಆಗಮಿಸಿದ್ದು, ಪ್ರತಿಭಟನಾಕಾರರು ತರಾಟೆ ತೆಗೆದುಕೊಂಡರು.

ಇದನ್ನೂ ಓದು: ಸಿಐಡಿ ಕಸ್ಟಡಿ ಅಂತ್ಯ, ನೇಹಾ ಕೊಲೆಗಡುಕನಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಇತ್ತೀಚೆಗೆ ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಕರೆದುಕೊಂಡು ಬಂದಿದ್ದ. ಗಬ್ಬೂರಿನ ಹೋಟೇಲ್​ನಲ್ಲಿ ಓಡಾಡುತ್ತಿದ್ದನ್ನು ಗಮನಿಸಿದ ಹಿಂದೂ‌ ಜಾಗರಣಾ ವೇದಿಕೆ ಮುಖಂಡರು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ