AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಹಾ ಹತ್ಯೆ ಕೇಸ್​: ನಾಳೆ ರಾಜ್ಯಾದ್ಯಂತ ಬೃಹತ್​ ಪ್ರತಿಭಟನೆಗೆ ಕರೆ ನೀಡಿದ ಬಿವೈ ವಿಜಯೇಂದ್ರ

ಚುನಾವಣೆಯ ಗಡಿಬಿಡಿಯಲ್ಲಿ ನಾವು ಹೆಣ್ಣು ಮಕ್ಕಳ ಮೇಲಿನ ಕ್ರೌರ್ಯ, ದೈವ ನಿಂದನೆ ಹಾಗೂ ರಾಷ್ಟ್ರ ಭಕ್ತರ ಮೇಲಿನ ಹಲ್ಲೆ ಪ್ರಕರಣಗಳನ್ನು ನಿರ್ಲಕ್ಷಿಸಿ ಕೂರಲಾಗದು. ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಅಮಾನುಷ ಘಟನೆ. ಈ ಹಿನ್ನೆಲೆ ಚುನಾವಣಾ ಕಾರ್ಯವನ್ನು ಬದಿಗಿರಿಸಿ ಏಪ್ರಿಲ್ 22 ರ ಸೋಮವಾರದಂದು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸುವಂತೆ ಬಿ.ವೈ.ವಿಜಯೇಂದ್ರ ಕರೆ ನೀಡಿದೆ.

ನೇಹಾ ಹತ್ಯೆ ಕೇಸ್​: ನಾಳೆ ರಾಜ್ಯಾದ್ಯಂತ ಬೃಹತ್​ ಪ್ರತಿಭಟನೆಗೆ ಕರೆ ನೀಡಿದ ಬಿವೈ ವಿಜಯೇಂದ್ರ
ನೇಹ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಗಂಗಾಧರ​ ಬ. ಸಾಬೋಜಿ
|

Updated on: Apr 21, 2024 | 6:29 PM

Share

ಬೆಂಗಳೂರು, ಏಪ್ರಿಲ್​ 21: ವಿದ್ಯಾರ್ಥಿನಿ ನೇಹಾ (Neha murder case) ಕೊಲೆ ಪ್ರಕರಣ ಹತ್ತಾರು ತಿರುವು ಪಡೆದುಕೊಳ್ಳುತ್ತಿದೆ. ದಿನಕ್ಕೊಂದು ಸತ್ಯ ಬಯಲಾಗುತ್ತಿದೆ. ಲವ್ ಜಿಹಾದ್ ಆಯ್ತು. ನೇಹಾ ಹಾಗೂ ಫಯಾಜ್ ಲವ್ ಮಾಡುತ್ತಿದ್ದರು ಅಂತ ಆರೋಪಿಯ ಪೋಷಕರು ಹೇಳಿಕೆ ಕೂಡ ನೀಡಿದ್ದಾರೆ. ಆರೋಪಿ ಫಯಾಜ್​ಗೆ ಗಲ್ಲು ಶಿಕ್ಷೆ ಕೊಡಿ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆ ನಾಳೆ ಅರ್ಧ ದಿನ ಸ್ವಯಂ ಅಂಗಡಿ-ಮುಂಗಟ್ಟುಗಳನ್ನು ಬಂದ್ (Bandh) ಮಾಡಲಾಗುತ್ತಿದೆ. ಈ ಮಧ್ಯೆ ನೇಹಾ ಹಿರೇಮಠ್​​ ಹತ್ಯೆ ಸೇರಿದಂತೆ ರಾಜ್ಯದಲ್ಲಿ ಮಿತಿಮೀರುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳು ಮತ್ತು ಕಾನೂನು ಸುವ್ಯವಸ್ಥೆ ಖಂಡಿಸಿ ಏ. 22 ರಂದು ರಾಜ್ಯಾದ್ಯಂತ ಬೃಹತ್​ ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದೆ.

ಈ ಕುರಿತಾಗಿ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಬಿ.ವೈ.ವಿಜಯೇಂದ್ರ, ‘ಚುನಾವಣೆಯ ಗಡಿಬಿಡಿಯಲ್ಲಿ ನಾವು ಹೆಣ್ಣು ಮಕ್ಕಳ ಮೇಲಿನ ಕ್ರೌರ್ಯ, ದೈವ ನಿಂದನೆ ಹಾಗೂ ರಾಷ್ಟ್ರ ಭಕ್ತರ ಮೇಲಿನ ಹಲ್ಲೆ ಪ್ರಕರಣಗಳನ್ನು ನಿರ್ಲಕ್ಷಿಸಿ ಕೂರಲಾಗದು. ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಅಮಾನುಷ ಘಟನೆ.

ಬಿ.ವೈ.ವಿಜಯೇಂದ್ರ ಟ್ವೀಟ್​

ಇದನ್ನು ಪೋಲಿಸರು ಎಲ್ಲಾ ಮಗ್ಗಲುಗಳಿಂದಲೂ ತನಿಖೆ ನಡೆಸಬೇಕಾಗಿರುವುದು ಸಾರ್ವಜನಿಕರ ಆಗ್ರಹವಾಗಿದೆ, ಆದರೆ ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಕೆಲ ಸಚಿವರು ಘಟನೆಯ ಕುರಿತು ಲಘುವಾಗಿ ಪ್ರತಿಕ್ರಿಯಿಸಿರುವುದು ನೋಡಿದರೆ ದುಷ್ಟರಿಗೆ ಹಾಗೂ ಹಿಂದೂ ಧರ್ಮದ ಕಂಟಕರಿಗೆ ಸರ್ಕಾರದ ಕೃಪಾಪೋಷಣೆಯ ಉದಾರತೆ ದೊರೆಯುತ್ತಿರುವುದು ಸ್ಪಷ್ಟವಾಗಿದೆ, ಅಲ್ಪಸಂಖ್ಯಾತರ ಓಲೈಕೆಯೇ ಈ ಸರ್ಕಾರದ ಆದ್ಯತೆಯಾಗಿದೆ.

ಇದನ್ನೂ ಓದಿ: ನೇಹಾ ಕೊಲೆ ಖಂಡನೀಯ, ಏ.21 ರಂದು ಅರ್ಧ ದಿನ ಧಾರವಾಡ ಬಂದ್​ಗೆ ಮುಸ್ಲಿಂ ಸಂಘಟನೆ ಕರೆ

ಭಾರತೀಯ ಜನತಾ ಪಾರ್ಟಿ ಸಿದ್ದಾಂತಕ್ಕಾಗಿ ಜನ್ಮ ತಾಳಿದ ಪಕ್ಷ, ನಮ್ಮ ಆದ್ಯತೆ ಏನಿದ್ದರೂ ‘ಧ್ಯೇಯ’ಕ್ಕೇ ಹೊರತು ಅಧಿಕಾರಕ್ಕಲ್ಲ, ಚುನಾವಣಾ ಕಾರ್ಯವನ್ನು ಬದಿಗಿರಿಸಿ ಏಪ್ರಿಲ್ 22 ರ ಸೋಮವಾರದಂದು ನಮ್ಮ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲು ಕರೆ ನೀಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣ; ಪ್ರಲ್ಹಾದ ಜೋಶಿ ಶಾಕಿಂಗ್ ಹೇಳಿಕೆ

ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣವಾಗಿ ಮೈಸೂರಿನಲ್ಲಿ ಮಾತನಾಡಿದ್ದ ಬಿ.ವೈ.ವಿಜಯೇಂದ್ರ, ಒಂದು ಕೋಮಿನವರನ್ನು ಓಲೈಸುವ ಕೆಲಸ ಸರ್ಕಾರ ಮಾಡುತ್ತಿದೆ. ನೇಹಾ ಕೊಲೆ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಆರೋಪಿ ವಿರುದ್ಧ ಕಠಿಣಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕಾಗುತ್ತೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!