ಬೆಂಗಳೂರು, ಏಪ್ರಿಲ್ 21: ವಿದ್ಯಾರ್ಥಿನಿ ನೇಹಾ (Neha murder case) ಕೊಲೆ ಪ್ರಕರಣ ಹತ್ತಾರು ತಿರುವು ಪಡೆದುಕೊಳ್ಳುತ್ತಿದೆ. ದಿನಕ್ಕೊಂದು ಸತ್ಯ ಬಯಲಾಗುತ್ತಿದೆ. ಲವ್ ಜಿಹಾದ್ ಆಯ್ತು. ನೇಹಾ ಹಾಗೂ ಫಯಾಜ್ ಲವ್ ಮಾಡುತ್ತಿದ್ದರು ಅಂತ ಆರೋಪಿಯ ಪೋಷಕರು ಹೇಳಿಕೆ ಕೂಡ ನೀಡಿದ್ದಾರೆ. ಆರೋಪಿ ಫಯಾಜ್ಗೆ ಗಲ್ಲು ಶಿಕ್ಷೆ ಕೊಡಿ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆ ನಾಳೆ ಅರ್ಧ ದಿನ ಸ್ವಯಂ ಅಂಗಡಿ-ಮುಂಗಟ್ಟುಗಳನ್ನು ಬಂದ್ (Bandh) ಮಾಡಲಾಗುತ್ತಿದೆ. ಈ ಮಧ್ಯೆ ನೇಹಾ ಹಿರೇಮಠ್ ಹತ್ಯೆ ಸೇರಿದಂತೆ ರಾಜ್ಯದಲ್ಲಿ ಮಿತಿಮೀರುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳು ಮತ್ತು ಕಾನೂನು ಸುವ್ಯವಸ್ಥೆ ಖಂಡಿಸಿ ಏ. 22 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದೆ.
ಈ ಕುರಿತಾಗಿ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಬಿ.ವೈ.ವಿಜಯೇಂದ್ರ, ‘ಚುನಾವಣೆಯ ಗಡಿಬಿಡಿಯಲ್ಲಿ ನಾವು ಹೆಣ್ಣು ಮಕ್ಕಳ ಮೇಲಿನ ಕ್ರೌರ್ಯ, ದೈವ ನಿಂದನೆ ಹಾಗೂ ರಾಷ್ಟ್ರ ಭಕ್ತರ ಮೇಲಿನ ಹಲ್ಲೆ ಪ್ರಕರಣಗಳನ್ನು ನಿರ್ಲಕ್ಷಿಸಿ ಕೂರಲಾಗದು. ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಅಮಾನುಷ ಘಟನೆ.
ಚುನಾವಣೆಯ ಗಡಿಬಿಡಿಯಲ್ಲಿ ನಾವು ಹೆಣ್ಣು ಮಕ್ಕಳ ಮೇಲಿನ ಕ್ರೌರ್ಯ, ದೈವ ನಿಂದನೆ ಹಾಗೂ ರಾಷ್ಟ್ರ ಭಕ್ತರ ಮೇಲಿನ ಹಲ್ಲೆ ಪ್ರಕರಣಗಳನ್ನು ನಿರ್ಲಕ್ಷಿಸಿ ಕೂರಲಾಗದು. ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಅಮಾನುಷ ಘಟನೆ.
ಇದನ್ನು ಪೋಲಿಸರು ಎಲ್ಲಾ ಮಗ್ಗಲುಗಳಿಂದಲೂ ತನಿಖೆ ನಡೆಸಬೇಕಾಗಿರುವುದು ಸಾರ್ವಜನಿಕರ ಆಗ್ರಹವಾಗಿದೆ, ಆದರೆ… pic.twitter.com/ra3AUOix8e
— Vijayendra Yediyurappa (Modi Ka Parivar) (@BYVijayendra) April 21, 2024
ಇದನ್ನು ಪೋಲಿಸರು ಎಲ್ಲಾ ಮಗ್ಗಲುಗಳಿಂದಲೂ ತನಿಖೆ ನಡೆಸಬೇಕಾಗಿರುವುದು ಸಾರ್ವಜನಿಕರ ಆಗ್ರಹವಾಗಿದೆ, ಆದರೆ ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಕೆಲ ಸಚಿವರು ಘಟನೆಯ ಕುರಿತು ಲಘುವಾಗಿ ಪ್ರತಿಕ್ರಿಯಿಸಿರುವುದು ನೋಡಿದರೆ ದುಷ್ಟರಿಗೆ ಹಾಗೂ ಹಿಂದೂ ಧರ್ಮದ ಕಂಟಕರಿಗೆ ಸರ್ಕಾರದ ಕೃಪಾಪೋಷಣೆಯ ಉದಾರತೆ ದೊರೆಯುತ್ತಿರುವುದು ಸ್ಪಷ್ಟವಾಗಿದೆ, ಅಲ್ಪಸಂಖ್ಯಾತರ ಓಲೈಕೆಯೇ ಈ ಸರ್ಕಾರದ ಆದ್ಯತೆಯಾಗಿದೆ.
ಇದನ್ನೂ ಓದಿ: ನೇಹಾ ಕೊಲೆ ಖಂಡನೀಯ, ಏ.21 ರಂದು ಅರ್ಧ ದಿನ ಧಾರವಾಡ ಬಂದ್ಗೆ ಮುಸ್ಲಿಂ ಸಂಘಟನೆ ಕರೆ
ಭಾರತೀಯ ಜನತಾ ಪಾರ್ಟಿ ಸಿದ್ದಾಂತಕ್ಕಾಗಿ ಜನ್ಮ ತಾಳಿದ ಪಕ್ಷ, ನಮ್ಮ ಆದ್ಯತೆ ಏನಿದ್ದರೂ ‘ಧ್ಯೇಯ’ಕ್ಕೇ ಹೊರತು ಅಧಿಕಾರಕ್ಕಲ್ಲ, ಚುನಾವಣಾ ಕಾರ್ಯವನ್ನು ಬದಿಗಿರಿಸಿ ಏಪ್ರಿಲ್ 22 ರ ಸೋಮವಾರದಂದು ನಮ್ಮ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲು ಕರೆ ನೀಡಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣ; ಪ್ರಲ್ಹಾದ ಜೋಶಿ ಶಾಕಿಂಗ್ ಹೇಳಿಕೆ
ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣವಾಗಿ ಮೈಸೂರಿನಲ್ಲಿ ಮಾತನಾಡಿದ್ದ ಬಿ.ವೈ.ವಿಜಯೇಂದ್ರ, ಒಂದು ಕೋಮಿನವರನ್ನು ಓಲೈಸುವ ಕೆಲಸ ಸರ್ಕಾರ ಮಾಡುತ್ತಿದೆ. ನೇಹಾ ಕೊಲೆ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಆರೋಪಿ ವಿರುದ್ಧ ಕಠಿಣಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕಾಗುತ್ತೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.