Hubballi: ನೇಹಾ ಹತ್ಯೆ ಕೇಸ್: ಫಯಾಜ್ ರುಂಡ ಚೆಂಡಾಡಿದವರಿಗೆ 10 ಲಕ್ಷ ರೂ ಬಹುಮಾನ ಘೋಷಣೆ
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ರಾಜಕೀಯಕ್ಕೆ ತಿರುಗಿದೆ. ಆರೋಪಿಯ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಹಾಕುತ್ತೇವೆ ಎಂದು ಅಂಜುಮನ್ ಸಂಸ್ಥೆ ಹೇಳಿದೆ. ಇದೀಗ ಆರೋಪಿ ಫಯಾಜ್ ರುಂಡ ಚೆಂಡಾಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ ಘೋಷಣೆ ಮಾಡಿದ್ದಾರೆ.
ಹುಬ್ಬಳ್ಳಿ, ಏಪ್ರಿಲ್ 19: ನಗರದಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ (Neha) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ರುಂಡ ಚೆಂಡಾಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫಯಾಜ್‌ಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ನಾಳೆ ಹುಬ್ಬಳ್ಳಿ ಬಂದ್ (Hubballi band) ಮಾಡುತ್ತೇವೆ ಎಂದು ಹೇಳಿದ್ದಾರೆ.
ನೇಹಾ ಹಿರೇಮಠ ಕೊಲೆ ಖಂಡಿಸಿ ನಾಳೆ ಹುಬ್ಬಳ್ಳಿ ಬಂದ್ ಮಾಡುತ್ತೇವೆ. ಯಾರ ಮನೆಯಲ್ಲಿ ಹೆಣ್ಮಕ್ಕಳು ಇದ್ದಾರೋ ಅವರೆಲ್ಲಾ ಬಂದ್ ಬೆಂಬಲಿಸಿ. ನಾಳೆ ಬಂದ್ ಅಂಗವಾಗಿ ಬಿವಿಬಿ ಕಾಲೇಜಿನಿಂದ ಮೆರವಣಿಗೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
ಖಡಕ್ ಕಾನೂನು, ಖಡಕ್ ಶಿಕ್ಷೆಯಾಗಬೇಕು ಎಂದ ಜೈನಮುನಿ ಗುಣಧರನಂದಿ ಸ್ವಾಮೀಜಿ
ಹುಬ್ಬಳ್ಳಿ ತಾಲೂಕಿನ ವರೂರಿನ ಜೈನಮುನಿ ಗುಣಧರನಂದಿ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ನೇಹಾ ಹತ್ಯೆಯಿಂದ ಮಾನಸಿಕವಾಗಿ ನೋವಾಗಿದೆ. ಎಜುಕೇಶನ್ ಕಟ್ಟಡ ಎನ್ನುವುದು ಒಂದು ಮಂದಿರ. ನೇಹಾಗೆ ಶಾಂತಿ ಸಿಗಬೇಕು ಅಂದರೆ ಕೂಡಲೇ ಸರಕಾರ ಕಾನೂನು ಜಾರಿ ಮಾಡಬೇಕು. ಮಂದಿರದಲ್ಲಿ ಆತ ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾನೆ. ಸರ್ಕಾರ ಇದನ್ನು ಹಗುರವಾಗಿ ತಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ನೇಹಾ ಹತ್ಯೆ: ಆರೋಪಿಯ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಹಾಕುತ್ತೇವೆ ಎಂದ ಅಂಜುಮನ್ ಸಂಸ್ಥೆ!
ಇದು ಕರ್ನಾಟಕ ಸಂಸ್ಕ್ರತಿ ಅಲ್ಲ. ಸನ್ಯಾಸಿಗಳ ಹತ್ಯೆ ಆಗಿದೆ. ಸರ್ಕಾರ ವಿಶೇಷ ಕಾಯ್ದೆ ತರಬೇಕು. ಶಾಲೆ ಕಾಲೇಜು ಸುತ್ತ ಎರಡು ಕಿಲೋ ಮೀಟರ್ ಮಾದಕ ಪದಾರ್ಥ ಇರಬಾರದು. ಮದ್ಯ ಸೇರಿ ಯಾವ ಮಾದಕ ಪದಾರ್ಥಗಳು ಸಿಗಬಾರದು. ಇಂತಹ ಘಟನೆ ಮತ್ತೆ ಕರ್ನಾಟಕದಲ್ಲಿ ಆಗಬಾರದು. ಖಡಕ್ ಕಾನೂನು, ಖಡಕ್ ಶಿಕ್ಷೆಯಾಗಬೇಕು ಎಂದಿದ್ದಾರೆ.
ನೇಹಾ ಹಿರೇಮಠ ಹತ್ಯೆ ಪೂರ್ವ ನಿಯೋಜಿತ ಕೃತ್ಯವೆಂದ ಎಬಿವಿಪಿ ಕಾರ್ಯದರ್ಶಿ
ಎಬಿವಿಪಿ ಕಾರ್ಯದರ್ಶಿ ಸಚಿನ್ ಪ್ರತಿಕ್ರಿಯಿಸಿದ್ದು, ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪೂರ್ವ ನಿಯೋಜಿತ ಕೃತ್ಯ. ಮೇಲ್ನೋಟಕ್ಕೆ ಇದೊಂದು ಲವ್ ಜಿಹಾದ್ ಪ್ರಕರಣ ಎನಿಸುತ್ತಿದೆ. ಕಾಲೇಜು ಕ್ಯಾಂಪಸ್‌ನೊಳಗೆ ಚಾಕುವಿನಿಂದ ಚುಚ್ಚಿ ಕೊಂದಿದ್ದಾನೆ. ಸಿಎಂ, ಗೃಹಮಂತ್ರಿ ಅದ್ಹೇಗೆ ಆಕಸ್ಮಿಕ ಘಟನೆ ಅಂತಾರೋ ಗೊತ್ತಿಲ್ಲ. ಅವರ ಹೇಳಿಕೆ ನಮಗೆ ಅಚ್ಚರಿ ಮೂಡಿಸಿದೆ ಎಂದರು.
ಇದನ್ನೂ ಓದಿ: ವೈಯಕ್ತಿಕ ಕಾರಣಕ್ಕೆ ಆದ ಕೊಲೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ನೇಹಾ ತಂದೆ, ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಆಕ್ರೋಶ
ಅನುಕಂಪ ತೋರಿಸದೇ ಹಂತಕನನ್ನು ಎನ್ಕೌಂಟರ್ ಮಾಡಬೇಕು. ಕಾಲೇಜು ಕ್ಯಾಂಪಸ್‌ನಲ್ಲಿ ಭಯಮುಕ್ತ ವಾತಾವರಣ ಸೃಷ್ಟಿಯಾಗಬೇಕು. ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:34 pm, Fri, 19 April 24