AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nagara Palike Election: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ನಗರ ಪಾಲಿಕೆಗಳಿಗೆ ಚುನಾವಣಾ ದಿನಾಂಕ ಘೋಷಣೆ

ಆಗಸ್ಟ್ 23 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಸೆಪ್ಟೆಂಬರ್  3ರಂದು ಮತದಾನ ನಡೆಯಲಿದೆ. ಸೆಪ್ಟೆಂಬರ್ 6 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

Nagara Palike Election: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ನಗರ ಪಾಲಿಕೆಗಳಿಗೆ ಚುನಾವಣಾ ದಿನಾಂಕ ಘೋಷಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 11, 2021 | 3:37 PM

Share

ಬೆಂಗಳೂರು: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ನಗರ ಪಾಲಿಕೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಿದೆ. ಆಗಸ್ಟ್ 16 ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಆಗಸ್ಟ್ 23 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಸೆಪ್ಟೆಂಬರ್  3ರಂದು ಮತದಾನ ನಡೆಯಲಿದೆ. ಸೆಪ್ಟೆಂಬರ್ 6 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಕಳೆದ ಎರಡು ವರ್ಷಗಳಿಂದ ನಗರ ಪಾಲಿಕೆ ಚುನಾವಣೆಗಳು ನೆನೆಗುದಿಗೆ ಬಿದ್ದಿದ್ದವು. ಆದರೆ ಈ ಬಾರಿ ರಾಜ್ಯ ಚುನಾವಣಾ ಆಯೋಗ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ನಗರ ಪಾಲಿಕೆಗಳಿಗೆ ಚುನಾವಣೆ ಘೋಷಿಸಿದೆ. ಹೀಗಾಗಿ ಈ ಮೂರು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ರಾಜಕೀಯ ಸದ್ದು ಗದ್ದಲ ಹೆಚ್ಚಾಗುವುದು ಖಚಿತವಾದಂತಾಗಿದೆ. ಸದ್ಯ ರಾಜ್ಯದಲ್ಲಿ ಕೊವಿಡ್ ಮೂರನೇ ಅಲೆಯ ಭೀತಿಯೂ ವ್ಯಾಪಿಸುತ್ತಿದ್ದು ನಗರ ಪಾಲಿಕೆ ಚುನಾವಣೆಗಳ ಇದರ ನಡುವೆಯೇ ನಡೆಯಬೇಕಾದಂತಾಗಿದೆ. ಹೀಗಾಗಿ ಕೊವಿಡ್ ತಡೆ ನಿಯಮಗಳನ್ನು ಅತ್ಯಂತ ಕಠಿಣವಾಗಿ ಜಾರಿಗೊಳಿಸಿ ಮತ್ತು ಅವುಗಳನ್ನು ಪಾಲಿಸಿ ನಗರ ಪಾಲಿಕೆ ಚುನಾವಣೆಗಳು ನಡೆಸಬೇಕಿದೆ.

ಇದನ್ನೂ ಓದಿ: 

ಭಾರತದ ಹೊರಗೆ ಕೊವಿಡ್ ಲಸಿಕೆ ಪಡೆದವರಿಗೆ ಶೀಘ್ರದಲ್ಲೇ ಪ್ರಮಾಣಪತ್ರ ನೀಡಲಿದೆ ಕೇಂದ್ರ ಸರ್ಕಾರ

ಭಾರತದಲ್ಲಿ ಕೊವಿಡ್ ಪರಿಸ್ಥಿತಿ ಹದಗೆಡುತ್ತಿದೆ, ಸಾವಿನ ಸಂಖ್ಯೆ ಚಿಂತೆಗೀಡುಮಾಡಿದೆ:  ಹಿರಿಯ ವಿಜ್ಞಾನಿ  ಕಳವಳ

(Hubli Dharwad Belagavi Kalaburagi municipal election date announced)

Published On - 3:08 pm, Wed, 11 August 21