ಧಾರವಾಡ: ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಧಾರವಾಡ ನಗರದ ಲಕಮನಹಳ್ಳಿ ಬಡಾವಣೆಯಲ್ಲಿ ಸುಮಾರು 10 ಎಕರೆ ಅನಧಿಕೃತ ಲೇಔಟ್‌ಗಳನ್ನು ತೆರವುಗೊಳಿಸಲಾಯಿತು.
ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ನೇತ್ರತ್ವದಲ್ಲಿ ನಡೆದ ಈ ಕಾರ್ಯಾಚರಣೆ ವೇಳೆ ಲೇಔಟ್ನ ಕಲ್ಲುಗಳನ್ನು, ವಿದ್ಯುತ್‌ಕಂಬಗಳನ್ನು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸಲಾಯಿತು. ಒಂದು ವಾರದ ಹಿಂದೆ ಇದೇ ಲೇಔಟ್ ತೆರವುಗೊಳಿಸಿದ್ದರೂ ಸಹ ಪ್ಲಾಟ್ ಕಲ್ಲುಗಳನ್ನು ಹಾಕಲಾಗಿತ್ತು. ಹೀಗಾಗಿ ಇದಿಗ ಮತ್ತೆ ಕಾರ್ಯಾಚರಣೆ ನಡೆಸಲಾಗಿದೆ. ಈ ಬಗ್ಗೆ ಟಿವಿ-9 ಡಿಜಿಟಲ್ ಜತೆ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿ, ಯಾವುದೇ ಕಾರಣಕ್ಕೆ ಇದೀಗ ನಡೆಸುತ್ತಿರುವ ಕಾರ್ಯಾಚರಣೆ ನಿಲ್ಲಿಸುವುದಿಲ್ಲ ಎಂದಿದ್ದಾರೆ.
ಈ ಸಂದರ್ಭದಲ್ಲಿ ಹುಡಾ ಸದಸ್ಯರಾದ ಚಂದ್ರಶೇಖರ ಗೋಕಾಕ. ಸುನೀಲ ಮೊರೆ. ಆಯುಕ್ತ ಶ್ರೀ ಎನ್.ಹೆಚ್. ಕುಮ್ಮಣ್ಣನವರ್, ನಗರ ಯೋಜಕ ಸದಸ್ಯ ವಿವೇಕ ಕಾರೇಕರ, ಕಾರ್ಯನಿರ್ವಾಹಕ ಅಧಿಕಾರಿ ಎಂ. ರಾಜಶೇಖರ್ ಉಪಸ್ಥಿತರಿದ್ದರು.
ಇದನ್ನೂ ಓದಿ: ರಾಜ್ಯದ ಎಲ್ಲ ಕೆರೆಗಳ ಸರ್ವೆ ನಡೆಸಿ, ಒತ್ತುವರಿಯಾಗಿದ್ದರೆ ತೆರವುಗೊಳಿಸಿ: ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ
Published On - 12:49 pm, Thu, 15 July 21