ಬೆಂಗಳೂರಲ್ಲಿ ಕೆರೆ ಏರಿ ಒಡೆದು ಸಾವಿರಾರು ಮನೆಗಳಿಗೆ ನುಗ್ಗಿದ ನೀರು

ಬೆಂಗಳೂರು: ಕಾಮಗಾರಿ ನಡೆಸುತ್ತಿದ್ದ ವೇಳೆ ಹುಳಿಮಾವು ಕೆರೆಯ ಏರಿ ಒಡೆದು ನೂರಾರು ಮನೆಗಳಿಗೆ ನೀರು ನುಗ್ಗಿದೆ. ಕೆರೆ ನೀರು ನುಗ್ಗಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ಪೈಪ್​ಲೈನ್ ಅಳವಡಿಕೆ ಸಂಬಂಧ ಜೆಸಿಬಿಯಿಂದ ಕಾಮಗಾರಿ ಕೆಲಸ ನಡೆಯುತ್ತಿತ್ತು. ಈ ವೇಳೆ ಅಚಾತುರ್ಯದಿಂದಾಗಿ ಕೆರೆಯ ಕೋಡಿ ಒಡೆದು ಸಾವಿರಾರು ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಯಲ್ಲಿ ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿದ್ದು, ಸುಮಾರು 500ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಹುಳಿಮಾವು ಕೆರೆಯ ಅಕ್ಕಪಕ್ಕದ ಶಾಂತಿನಿಕೇತನ, ಕೃಷ್ಣನಗರ ಸೇರಿದಂತೆ ಹಲವು ಲೇಔಟ್​ಗಳ ಮನೆಗಳಿಗೆ […]

ಬೆಂಗಳೂರಲ್ಲಿ ಕೆರೆ ಏರಿ ಒಡೆದು ಸಾವಿರಾರು ಮನೆಗಳಿಗೆ ನುಗ್ಗಿದ ನೀರು
sadhu srinath

|

Nov 24, 2019 | 6:41 PM

ಬೆಂಗಳೂರು: ಕಾಮಗಾರಿ ನಡೆಸುತ್ತಿದ್ದ ವೇಳೆ ಹುಳಿಮಾವು ಕೆರೆಯ ಏರಿ ಒಡೆದು ನೂರಾರು ಮನೆಗಳಿಗೆ ನೀರು ನುಗ್ಗಿದೆ. ಕೆರೆ ನೀರು ನುಗ್ಗಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ.

ಪೈಪ್​ಲೈನ್ ಅಳವಡಿಕೆ ಸಂಬಂಧ ಜೆಸಿಬಿಯಿಂದ ಕಾಮಗಾರಿ ಕೆಲಸ ನಡೆಯುತ್ತಿತ್ತು. ಈ ವೇಳೆ ಅಚಾತುರ್ಯದಿಂದಾಗಿ ಕೆರೆಯ ಕೋಡಿ ಒಡೆದು ಸಾವಿರಾರು ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಯಲ್ಲಿ ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿದ್ದು, ಸುಮಾರು 500ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ.

ಹುಳಿಮಾವು ಕೆರೆಯ ಅಕ್ಕಪಕ್ಕದ ಶಾಂತಿನಿಕೇತನ, ಕೃಷ್ಣನಗರ ಸೇರಿದಂತೆ ಹಲವು ಲೇಔಟ್​ಗಳ ಮನೆಗಳಿಗೆ ನೀರು ನುಗ್ಗಿದೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಬಿಬಿಎಂಪಿ ಅಧಿಕಾರಿಗಳು ಹಾಗೂ 2 NDRF ತಂಡಗಳು ದೌಡಾಯಿಸಿವೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada