AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತ್ರೆ ನೋಡಲು ಹೋಗಿ ಹಸೆಮಣೆ ಏರಬೇಕಿದ್ದವನ ದುರಂತ ಅಂತ್ಯ: ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದು ಸಾವು

ಬೆಂಗಳೂರಿನ ಹುಳಿಮಾವು ಜಾತ್ರೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಹಸೆಮಣೆ ಏರಬೇಕಿದ್ದ ಯುವಕ , ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್ ಹರಿದು ದಾರುಣವಾಗಿ ಮೃತಪಟ್ಟಿದ್ದಾರೆ. ಮದುವೆ ಆಹ್ವಾನ ಪತ್ರಿಕೆ ನೀಡಲು ಬಂದಿದ್ದ ಈತ, ಜಾತ್ರೆ ನೋಡಲು ನಿಂತಿದ್ದಾಗ ಈ ದುರಂತ ಸಂಭವಿಸಿದೆ. ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದೆ ಎನ್ನಲಾಗಿದ್ದು, ಹುಳಿಮಾವು ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಜಾತ್ರೆ ನೋಡಲು ಹೋಗಿ ಹಸೆಮಣೆ ಏರಬೇಕಿದ್ದವನ ದುರಂತ ಅಂತ್ಯ: ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದು ಸಾವು
ಮೃತ ಯುವಕImage Credit source: Tv9 Kannada
ರಾಮು, ಆನೇಕಲ್​
| Edited By: |

Updated on: Apr 09, 2026 | 12:18 PM

Share

ಆನೇಕಲ್​​, ಏಪ್ರಿಲ್​​ 09: ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದ ಪರಿಣಾಮ ಹಸೆಮಣೆ ಏರಬೇಕಿದ್ದ ಯುವಕ ದಾರುಣವಾಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಹುಳಿಮಾವು ಜಾತ್ರೆಯಲ್ಲಿ ನಡೆದಿದೆ. ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ನಿನ್ನೆ ನಡೆದಿದ್ದು, ರಥೋತ್ಸವ ಹಿನ್ನಲೆ ರಾತ್ರಿ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಲ್ಲಕ್ಕಿಗಳನ್ನ ನೋಡುತ್ತಾ ನಿಂತಿದ್ದ ಯುವಕನ ಮೇಲೆ ಟ್ರ್ಯಾಕ್ಟರ್​​ ಹರಿದಿದ್ದು, ಅಕ್ಷತ್ (27) ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಉಸಿರು ಚೆಲ್ಲಿದ್ದಾರೆ.

ಬನಶಂಕರಿ ನಿವಾಸಿಯಾಗಿರುವ ಅಕ್ಷತ್​​, ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೆ ಮದುವೆಯ ಅಹ್ವಾನ ಪತ್ರಿಕೆ ವಿತರಿಸಲೆಂದು ಬಂದಿದ್ದರು. ಹಾಗೆ ಜಾತ್ರೆಯನ್ನೂ ನೋಡಿ ಹೋಗೊಣ ಎಂದು ಅಲ್ಲಿಯೇ ಉಳಿದುಕೊಂಡಿದ್ದರು ಎನ್ನಲಾಗಿದೆ. ಇನ್ನು ಟ್ರ್ಯಾಕ್ಟರ್​ ಚಾಲಕನ ಅಜಾಗರೂಕತೆಯಿಂದಲೇ ಅಪಘಾತ ನಡೆದಿದೆ ಎನ್ನಲಾಗಿದ್ದು, ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಹುಳಿಮಾವು ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದ್ದು, ಸ್ಥಳಕ್ಕೆ ಬೆಂಗಳೂರು ದಕ್ಷಿಣ ಸಂಚಾರ ಡಿಸಿಪಿ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುರ್ಘಟನೆ ನಡೆದು ಓರ್ವ ಮೃತಪಟ್ಟಿದ್ದರೂ ದೇವಾಲಯದ ಟ್ರಸ್ಟಿಗಳು ಸ್ಥಳಕ್ಕೆ ಬಂದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಬೆಳಗಾವಿ ಸಿದ್ದೇಶ್ವರ ಜಾತ್ರೆಯಲ್ಲಿ ರಕ್ತದೊಕುಳಿ; ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಕಾರು ಡಿಕ್ಕಿ:ಮೂವರಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕೆಂದನಹಳ್ಳಿ ಗೇಟ್ ಬಳಿ ಕಾರು ಡಿಕ್ಕಿಯಾದ ಪರಿಣಾಮ ಬೈಕ್​ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವಿಜಯ್, ದೊಡ್ಡಗೌಡ, ಅಂಬರೀಶ್​​ ಗಾಯಾಳುಗಳಾಗಿದ್ದು, ಇವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ