AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ರಸ್ತೆ ಅಪಘಾತ ಸಂಭವಿಸಿದೆ. ಎರಡು ಕಾರುಗಳ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು
ಕಾರು ಅಪಘಾತImage Credit source: tv9 kannada
Jagadisha B
| Edited By: |

Updated on:Jun 04, 2026 | 4:34 PM

Share

ತುಮಕೂರು, ಜೂನ್​ 04: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ (Accident) ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರು ಆಂಧ್ರಪ್ರದೇಶ ಮೂಲದವರು ಎನ್ನಲಾಗುತ್ತಿದೆ. ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಖ್ಯಾಂಶಗಳು

  • ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವು
  • ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದ ಬಳಿ ಘಟನೆ ನಡೆದಿದೆ
  • ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ

ನಡೆದಿದ್ದೇನು?

ಹಿರಿಯೂರಿನಿಂದ ಹುಳಿಯಾರು ಕಡೆಗೆ ಬರುತ್ತಿದ್ದ ಓಮ್ನಿ ಕಾರುಗೆ ಎದುರಿನಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕಕ್ಕೆ ಓಮ್ನಿ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ವೃದ್ಧ ದಂಪತಿ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಘಟನಾ ​ಸ್ಥಳಕ್ಕೆ ಹುಳಿಯಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಸದ್ಯ ಮೃತದೇಹಗಳನ್ನು ಹುಳಿಯಾರು ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.

ಮೈನಿಂಗ್ ಲಾರಿ ಬೈಕ್​​ಗೆ ಡಿಕ್ಕಿ: ತಂದೆ-ಮಗ ಸಾವು

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚಿನ್ನಿಬಸಪ್ಪ ಕ್ಯಾಂಪ್ ಬಳಿಯ ಕುಮಾರಸ್ವಾಮಿ ದೇವಸ್ಥಾನದ ರಸ್ತೆಯಲ್ಲಿ ಬೈಕ್ ಹಾಗೂ ಮೈನಿಂಗ್ ಲಾರಿ ನಡುವೆ ಡಿಕ್ಕಿಯಾಗಿ ತಂದೆ ಮತ್ತು ಮಗ ಇಬ್ಬರು ಮೃತಪಟ್ಟಿರುವಂತಹ ಘಟನೆ ನಡೆದಿದೆ. ಮೈನಿಂಗ್ ಕಂಪನಿಯಲ್ಲಿ ವಾಚ್‌ಮೆನ್ ಆಗಿ ಕೆಲಸ ಮಾಡುತ್ತಿದ್ದ ಬೆಳ್ಳಿ ನಾಗರಾಜ (45)ರನ್ನು ಕೆಲಸಕ್ಕೆ ಬಿಡಲು ಪುತ್ರ ದುರಗೇಶ್ (22) ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ.

ಇದನ್ನೂ ಓದಿ: ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

ಈ ವೇಳೆ ವೇಗವಾಗಿ ಬಂದ ಮೈನಿಂಗ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಳ್ಳಿ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ದುರಗೇಶ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ಸಂಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:20 pm, Thu, 4 June 26

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್