ಮಾನವ-ಪ್ರಾಣಿ ಸಂಘರ್ಷ: ಈ ವರ್ಷದ ಮೊದಲಾರ್ಧದಲ್ಲಿ 28 ಜನ ಮೃತ: ಸಚಿವ ಈಶ್ವರ್​ ಖಂಡ್ರೆ

ಜನವಸತಿ ಪ್ರದೇಶಕ್ಕೆ ಆನೆ ಬರದಂತೆ ತಡೆಯಲು 640 ಕಿಮೀ ರೈಲ್ವೆ ಬ್ಯಾರಿಕೇಡ್ ಹಾಕಬೇಕಿದೆ. ಹೆಚ್ಚುವರಿ 300 ಕಿಮೀ ರೈಲ್ವೆ ಬ್ಯಾರಿಕೇಡ್ ಹಾಕಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಿದ್ದೇನೆ. 1000 ಕಿಮೀ ಸೋಲಾರ್ ತಂತಿ ಅಳವಡಿಸಲಾಗಿದೆ. 7 ಎಲಿಫೆಂಟಾ ಟಾಸ್ಕ್ ಫೋರ್ಸ್​ಗಳನ್ನು ರಚನೆ ಮಾಡಿದ್ದೇವೆ ಎಂದು ಸಚಿವ ಈಶ್ವರ್​ ಖಂಡ್ರೆ ಹೇಳಿದರು.

ಮಾನವ-ಪ್ರಾಣಿ ಸಂಘರ್ಷ: ಈ ವರ್ಷದ ಮೊದಲಾರ್ಧದಲ್ಲಿ 28 ಜನ ಮೃತ: ಸಚಿವ ಈಶ್ವರ್​ ಖಂಡ್ರೆ
ಸಚಿವ ಈಶ್ವರ್​ ಖಂಡ್ರೆ
Follow us
Sunil MH
| Updated By: ವಿವೇಕ ಬಿರಾದಾರ

Updated on:Sep 05, 2023 | 3:01 PM

ಬೆಂಗಳೂರು: ವನ್ಯ ಪ್ರಾಣಿಗಳ (Animelas) ದಾಳಿಯಿಂದ ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಈ ವರ್ಷದ ಮೊದಲಾರ್ಧದಲ್ಲಿ 28 ಜನ ಮೃತ ಪಟ್ಟಿದ್ದಾರೆ. ನಿನ್ನೆ (ಸೆ.04) ಮತ್ತೊಂದು ದುರ್ಘಟನೆ ಸಂಭವಿಸಿದೆ. ಹುಲಿ (Tigher) ದಾಳಿಯಿಂದ ಚರಣ್ ನಾಯ್ಕ್ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ವೆಂಕಟೇಶ್ ಆನೆ (Elephant) ತುಳಿತಕ್ಕೆ ಬಲಿಯಾಗಿದ್ದಾರೆ. ಮಾನವ ಪ್ರಾಣಿ ಸಂಘರ್ಷದ ಬಗ್ಗೆ ಚರ್ಚೆ ಮಾಡಿದ್ದೇವೆ. ಜೀವಹಾನಿ ಆಗದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ಆಗಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ (Eshwar Khandre) ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಬಗ್ಗೆ ಇಂದು (ಸೆ.05) ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಸಭೆ ಇದೆ. ಜನವಸತಿ ಪ್ರದೇಶಕ್ಕೆ ಆನೆ ಬರದಂತೆ ತಡೆಯಲು 640 ಕಿಮೀ ರೈಲ್ವೆ ಬ್ಯಾರಿಕೇಡ್ ಹಾಕಬೇಕಿದೆ. ಹೆಚ್ಚುವರಿ 300 ಕಿಮೀ ರೈಲ್ವೆ ಬ್ಯಾರಿಕೇಡ್ ಹಾಕಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಿದ್ದೇನೆ. 1000 ಕಿಮೀ ಸೋಲಾರ್ ತಂತಿ ಅಳವಡಿಸಲಾಗಿದೆ. 7 ಎಲಿಫೆಂಟಾ ಟಾಸ್ಕ್ ಫೋರ್ಸ್​ಗಳನ್ನು ರಚನೆ ಮಾಡಿದ್ದೇವೆ. ಇದರಲ್ಲಿ 38 ಜನ ನುರಿತವರು ಇರುತ್ತಾರೆ ಎಂದರು ತಿಳಿಸಿದರು.

ಇದನ್ನೂ ಓದಿ: ಮೈಸೂರು: ಹುಲಿ ದಾಳಿಗೆ ಬಾಲಕ ಸಾವು, ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ ಅರಣ್ಯ ಇಲಾಖೆ 

ಇನ್ನು ವನ್ಯ ಪ್ರಾಣಿಗಳಿಂದ ಹೊರ ಗುತ್ತಿಗೆಯ ಇಬ್ಬರು ನೌಕರರು ಮೃತ ಪಟ್ಟಿದ್ದಾರೆ. ಮುಂದೆ ಸಮಸ್ಯೆ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ. ಅರಣ್ಯ ಸಮೀಪ ಇರುವ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ. ವನ್ಯ ಜೀವಿಗಳ ದಾಳಿಯಿಂದ ಮೃತಪಟ್ಟವರಿಗೆ ಪರಿಹಾರ ನೀಡಿದ್ದೇವೆ. ಗಣಿಗಾರಿಕೆಯಿಂದಲೂ ವನ್ಯ ಜೀವಿಗಳು ಕಾಡಿಗೆ ಬರುತ್ತಿವೆ. ಕಾಡಿನಂಚಿನಲ್ಲಿ ಗಣಿಗಾರಿಕೆಗೆ ಅವಕಾಶ ಇಲ್ಲ ಎಂದು ಎಚ್ಚರಿಕೆ ನೀಡಿದರು

ಚಿತ್ರ ನಟ ಗಣೇಶ್​ಗೆ ಅರಣ್ಯ ಇಲಾಖೆಯ ಮಾಹಿತಿ ಇಲ್ಲದೇ ಜಮೀನು ನೀಡಿದರು. ಅದನ್ನ ವಾಪಸು ಪಡೆಯುವ ಕೆಲಸ ಆಗಿದೆ. ಪ್ರಕರಣ ಈಗ ಕೋರ್ಟ್​​ನಲ್ಲಿ ಇದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:59 pm, Tue, 5 September 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್