ರಾಜ್ಯದಲ್ಲಿ ಮಾನವ-ವನ್ಯಜೀವಿ ಸಂಘರ್ಷ: ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ಹೈಕೋರ್ಟ್

| Updated By: ವಿವೇಕ ಬಿರಾದಾರ

Updated on: Jul 11, 2023 | 2:30 PM

ರಾಜ್ಯದಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಡೆಗೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.

ರಾಜ್ಯದಲ್ಲಿ ಮಾನವ-ವನ್ಯಜೀವಿ ಸಂಘರ್ಷ: ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ಹೈಕೋರ್ಟ್
ಹೈಕೋರ್ಟ್
Follow us on

ಬೆಂಗಳೂರು: ರಾಜ್ಯದಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಡೆಗೆ ರಾಜ್ಯ ಸರ್ಕಾರ (Karnataka Government) ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್ (Highcourt) ವಿಭಾಗೀಯ ಪೀಠ ನಿರ್ದೇಶನ ನೀಡಿದೆ. ಆನೆಗಳ ಸಂಚಾರಕ್ಕೆ ಸುರಕ್ಷಿತ ಕಾರಿಡಾರ್ ಒದಗಿಸಬೇಕು. ಸ್ಥಳೀಯರಿಂದ 24X7 ಮಾಹಿತಿ ಸ್ವೀಕರಿಸಲು ಕೇಂದ್ರ ಸ್ಥಾಪಿಸಬೇಕು. ವನ್ಯಜೀವಿ, ಗಾಯಗೊಂಡವರ ನೆರವಿಗೆ ಕಂಟ್ರೋಲ್ ರೂಮ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಹಿತಿ ರವಾನಿಸಬೇಕು ಎಂದು ಹೇಳಿದೆ.

ಗಾಯಾಳುಗಳಿಗೆ ಚಿಕಿತ್ಸೆ ಒದಗಿಸಲು ಜಿಲ್ಲಾ ಆಸ್ಪತ್ರೆ ಕ್ರಮಕೈಗೊಳ್ಳಬೇಕು. ಜನರ ಅಹವಾಲು ಪರಿಹಾರ ಘಟಕ ಸ್ಥಾಪಿಸಬೇಕು. ಅರಣ್ಯ ಇಲಾಖೆಗೆ ಅಗತ್ಯ ಮಾನವ ಸಂಪನ್ಮೂಲ, ವಾಹನ ಒದಗಿಸಬೇಕು. ಅರಣ್ಯ ಪಡೆ ಮುಖ್ಯಸ್ಥರು, ವನ್ಯಜೀವಿ ಪರಿಪಾಲಕರು ವರ್ಷಕ್ಕೆ 4 ಬಾರಿ ಸಭೆ ನಡೆಸಬೇಕು. ತಾಲೂಕು ಮಟ್ಟದಲ್ಲಿ ದೂರು‌ಕೋಶ ಸ್ಥಾಪಿಸಿ ಮಾಹಿತಿ ಪಡೆಯಬೇಕು. ವಲಯ ಅರಣ್ಯ ಅಧಿಕಾರಿ, ತಹಶೀಲ್ದಾರ್ 2 ತಿಂಗಳಿಗೊಮ್ಮೆ ಸಭೆ ಸೇರಬೇಕು. ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:30 pm, Tue, 11 July 23