ಯುವತಿ ದೂರಿನ ಮೇರೆಗೆ ದಯಾನಂದ ಅಲಿಯಾಸ್ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ನೀಡಿದ ದೂರಿನ ಅನ್ವಯ ಬೆಂಗಳೂರಿನ ಹುಣಸಮಾರನಹಳ್ಳಿ ಮಠದ ದಯಾನಂದ ಅಲಿಯಾಸ್ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿ ನೀಡಿದ ದೂರಿನ ಮೇರೆಗೆ ಈಶಾನ್ಯ ವಿಭಾಗದ ಮಹಿಳಾ ಠಾಣೆ ಪೊಲೀಸರು ಎಸ್ಐಆರ್ ದಾಖಲಿಸಿಕೊಂಡು ಇದೀಗ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಬೆಂಗಳೂರು, (ಅಕ್ಟೋಬರ್ 12): ಯುವತಿ ನೀಡಿದ ದೂರಿನ ಅನ್ವಯ ಬೆಂಗಳೂರಿನ ಹುಣಸಮಾರನಹಳ್ಳಿ ಮಠದ ದಯಾನಂದ ಅಲಿಯಾಸ್ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿ ನೀಡಿದ ದೂರಿನ ಮೇರೆಗೆ ಈಶಾನ್ಯ ವಿಭಾಗದ ಮಹಿಳಾ ಠಾಣೆ ಪೊಲೀಸರು ಎಸ್ಐಆರ್ ದಾಖಲಿಸಿಕೊಂಡು ಇದೀಗ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ನೂರಾರು ಕೋಟಿ ಜಮೀನು ಮಾಲೀಕತ್ವ ಹೊಂದಿರುವ ವೀರಶೈವ ಸಮುದಾಯದ ಹುಣಸಮಾರನಹಳ್ಳಿಮಠವು ವೀರಶೈವ ಲಿಂಗಾಯತ ಸಮುದಾಯದ ಪಂಚಪೀಠಗಳಲ್ಲಿ ಒಂದಾದ ಶ್ರೀಶೈಲ ಮಠದ ಶಾಖಾ ಮಠವಾಗಿದೆ. ಈ ಹಿಂದೆಯೂ ಕೂಡ ಕಳೆದ ಅರೇಳು ವರ್ಷಗಳ ಹಿಂದೆ ಸ್ಕ್ಯಾಂಡಲ್ ನಲ್ಲಿ ಈ ಸ್ವಾಮೀಜಿ ಸಿಕ್ಕಿಬಿದ್ದಿದ್ದ. ಇದೀಗ ಮತ್ತೆ ಸಿಕ್ಕಿಬಿದ್ದಿದ್ದಾನೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us

