ಶೀಲ ಶಂಕಿಸಿ ಪತ್ನಿಯನ್ನ ಚೇರ್​ಗೆ ಕಟ್ಟಿಹಾಕಿ ಕತ್ತು ಕೊಯ್ದು ಕೊಂದ ಗಂಡ: ಕೊರಿಯೊಗ್ರಾಫರ್ ದುರಂತ ಸಾವು

ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ಚೇರ್​ಗೆ ಕಟ್ಟಿಹಾಕಿ ಕತ್ತು ಕೊಯ್ದು ಕೊಲೆ ಮಾಡಿರುವಂತಹ ಭೀಕರ ಘಟನೆ ಬೆಂಗಳೂರಿನ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್​ನ ಮನೆಯಲ್ಲಿ ನಡೆದಿದೆ. ಅಲ್ಲಿಗೆ ಕೊರಿಯೊಗ್ರಾಫರ್​ ಆಗಿದ್ದ ಪತ್ನಿಯ ದುರಂತ ಅಂತ್ಯವಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ಕೆಂಗೇರಿ ಪೊಲೀಸರಿಂದ ವಿಚಾರಣೆ ಮಾಡಲಾಗುತ್ತಿದೆ.

ಶೀಲ ಶಂಕಿಸಿ ಪತ್ನಿಯನ್ನ ಚೇರ್​ಗೆ ಕಟ್ಟಿಹಾಕಿ ಕತ್ತು ಕೊಯ್ದು ಕೊಂದ ಗಂಡ: ಕೊರಿಯೊಗ್ರಾಫರ್ ದುರಂತ ಸಾವು
ಶೀಲ ಶಂಕಿಸಿ ಪತ್ನಿಯನ್ನ ಚೇರ್​ಗೆ ಕಟ್ಟಿಹಾಕಿ ಕತ್ತು ಕೊಯ್ದು ಕೊಂದ ಗಂಡ, ಕೊರಿಯೊಗ್ರಾಫರ್ ದುರಂತ ಸಾವು
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on: Aug 28, 2024 | 9:00 PM

ಬೆಂಗಳೂರು, ಆಗಸ್ಟ್​​ 28: ಶೀಲ ಶಂಕಿಸಿ ಪತಿಯಿಂದ (husband) ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್​ನ ಮನೆಯಲ್ಲಿ ದುಷ್ಕೃತ್ಯ ನಡೆದಿದೆ. ಪತ್ನಿ ನವ್ಯಾ(24)ರನ್ನು ಚೇರ್​ಗೆ ಕಟ್ಟಿಹಾಕಿ ಕತ್ತು ಕೊಯ್ದು ಪತಿ ಕಿರಣ್ ಕೊಲೆ ಮಾಡಿದ್ದಾರೆ. ಕಳೆದ 3 ವರ್ಷಗಳ ಹಿಂದೆ ವಿವಾಹವಾಗಿದ್ದರು. ಘಟನಾ ಸ್ಥಳಕ್ಕೆ ಕೆಂಗೇರಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಮೂಲದ ಕಿರಣ್​​ ಕ್ಯಾಬ್​ ಚಾಲಕನಾಗಿದ್ದ. ಖಾಸಗಿ ಶಾಲೆಯಲ್ಲಿ ಮಕ್ಕಳಿಗೆ ನೃತ್ಯ  ಹೇಳಿಕೊಡುತ್ತಿದ್ದ ಮೃತ ನವ್ಯಾ ಕೊರಿಯೊಗ್ರಾಫರ್ ಆಗಿದ್ದರು. ಆರೋಪಿ ವಶಕ್ಕೆ ಪಡೆದು ಕೆಂಗೇರಿ ಪೊಲೀಸರಿಂದ ವಿಚಾರಣೆ ಮಾಡಲಾಗುತ್ತಿದೆ.

ಕೆಂಪೇಗೌಡ ಏರ್​​ಪೋರ್ಟ್​ ಟರ್ಮಿನಲ್​​ನಲ್ಲಿ ಭೀಕರ ಕೊಲೆ

ಪತ್ನಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಹಿನ್ನೆಲೆ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಮತ್ತೊಬ್ಬ ವ್ಯಕ್ತಿ ಭೀಕರ ಕೊಲೆ ಮಾಡಿರುವಂತಹ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ಏರ್​​ಪೋರ್ಟ್​ ಟರ್ಮಿನಲ್​​ 1ರಲ್ಲಿ ನಡೆದಿದೆ.

ಇದನ್ನೂ ಓದಿ: ಅಯ್ಯೋ ದೇವರೇ…ಬುದ್ದಿ ಹೇಳಿದಕ್ಕೆ ಹೆತ್ತ ತಾಯಿಯನ್ನೇ ಕೊಂದ ಮಗ, ಬಳಿಕ ಮಾಡಿದ್ದೇನು ಗೊತ್ತಾ?

ಟ್ರಾಲಿ ಆಪರೇಟರ್ ರಾಮಕೃಷ್ಣಪ್ಪ ಹತ್ಯೆಗೊಳಗಾದ ವ್ಯಕ್ತಿ. ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ರಮೇಶ್​ನಿಂದ ಕೃತ್ಯವೆಸಗಲಾಗಿದೆ. ಕೆಂಪೇಗೌಡ ಏರ್​​ಪೋರ್ಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಡುಪಿ: 21 ವರ್ಷಗಳಿಂದ ನ್ಯಾಯಾಲಯದ ವಿಚಾರಣೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಟಪಾಡಿಯ ಸೈಯದ್‌ ಮುಸ್ತಾಕ್‌ (45) ಬಂಧಿತ ಆರೋಪಿ. 1993 ರ ಜು.21 ರಂದು ಶಿವಳ್ಳಿಯ ಇಂದ್ರಾಳಿ ದೇವಸ್ಥಾನದ ಹತ್ತಿರ ದೇವೇಂದ್ರ ನಾಯ್ಕ್ ರವರ ಗದ್ದೆಯ ಬಳಿ ಮೇಯಲು ಬಿಟ್ಟಿದ್ದ ಎರಡು ದನಗಳನ್ನು ಯಾರೋ ಕಳವು ಮಾಡಿಕೊಂಡು ಹೋದ ಬಗ್ಗೆ ದೇವೇಂದ್ರ ನಾಯ್ಕ ರವರು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಸಹಾಯ ನೆಪದಲ್ಲಿ ಮೋಸ ಮಾಡಿ ಇಡೀ ಕುಟುಂಬವನ್ನೇ ಮನೆ ಬಿಟ್ಟು ಓಡಿಸಿದ್ದ ಪೊಲೀಸ್ ಪೇದೆ ಅರೆಸ್ಟ್

ಅಂದಿನ ತನಿಖಾಧಿಕಾರಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿ, ಆರೋಪಿತನ ವಿರುದ್ದ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ನಂತರ ಈತನು ಸುಮಾರು 21 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದನು. ಈ ಬಗ್ಗೆ ಈಗಿನ ಮಣಿಪಾಲ ಪೊಲೀಸ್ ಠಾಣಾ ನಿರೀಕ್ಷಕ ದೇವರಾಜ ಟಿ.ವಿ ರವರ ನೇತೃತ್ವದಲ್ಲಿ ಮಣಿಪಾಲ ಪೊಲೀಸ್ ಠಾಣಾ ಸಿಬ್ಬಂದಿ ಪ್ರಸನ್ನ ಕಾರ್ಯಾಚರಣೆ ನಡೆಸಿ ಆ.24 ರಂದು ಕಟಪಾಡಿಯ ಮಣಿಪುರ ಗುಜ್ಜಿ ಹೌಸ್‌ ಬಳಿ ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ