ಹೆದ್ದಾರಿಯಲ್ಲಿ ಗಂಡನ ಶವ: ಖಡಕ್​ ಪೊಲೀಸ್ ಶ್ವಾನ ಮನೆಯಲ್ಲಿದ್ದ ಪತ್ನಿ ಮುಂದೆ ಬಂದು ನಿಂತಿದ್ದೇಕೆ ಗೊತ್ತಾ?

ನಿನ್ನೆ ತಡರಾತ್ರಿ ಮನೆಯಲ್ಲೇ ಗಂಡನನ್ನು ಕೊಂದು ಹೆದ್ದಾರಿಯಲ್ಲಿ ಬಿಸಾಕಿ ಅಪಘಾತ ಕಥೆ ಸೃಷ್ಟಿಸಿದ್ದಾರೆ ಎನ್ನಲಾಗುತ್ತಿದೆ. ಆಕೆಯನ್ನ ಕೇಳಿದರೆ ನಮ್ಮ ತಮ್ಮನ‌ ಕೊಲೆ ಬಗ್ಗೆ ಗೊತ್ತಾಗುತ್ತೆ ಪತ್ನಿ ವಿರುದ್ಧ ಮಂಜುನಾಥ್ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೆದ್ದಾರಿಯಲ್ಲಿ ಗಂಡನ ಶವ: ಖಡಕ್​ ಪೊಲೀಸ್ ಶ್ವಾನ ಮನೆಯಲ್ಲಿದ್ದ ಪತ್ನಿ ಮುಂದೆ ಬಂದು ನಿಂತಿದ್ದೇಕೆ ಗೊತ್ತಾ?
ಹೆದ್ದಾರಿಯಲ್ಲಿ ಗಂಡನ ಶವ: ಮನೆಯಲ್ಲಿದ್ದ ಪತ್ನಿ ಮುಂದೆ ಬಂದು ನಿಂತ ಪೊಲೀಸ್ ಶ್ವಾನ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ

Updated on:Aug 30, 2024 | 5:43 PM

ಗದಗ, ಆಗಸ್ಟ್​ 30: ಪತ್ನಿಯೇ ಗಂಡನನ್ನು (Husband) ಕೊಲೆ ಮಾಡಿ ಅಪಘಾತ ಕಥೆ ಸೃಷ್ಟಿಸಿರುವಂತಹ ಘಟನೆ ಗದಗ ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ನಡೆದಿದೆ. ಗಂಡನನ್ನು ಕೊಂದು ರಾಜ್ಯ ಹೆದ್ದಾರಿಯಲ್ಲಿ ಶವ ಬಿಸಾಕಿದ್ದಾರೆ ಎನ್ನಲಾಗುತ್ತಿದ್ದು, ಪತ್ನಿ ಶಾರದಮ್ಮಳೇ ಕೊಲೆ ಮಾಡಿದ್ದಾಳೆ ಎಂದು ಮೃತ ಗಂಡ ಮಂಜುನಾಥ್​ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಮಂಜುನಾಥ್​ ಪತ್ನಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪತ್ನಿ ಮೇಲೆ ಕುಟುಂಬಸ್ಥರ ಅನುಮಾನ

ನಿನ್ನೆ ತಡರಾತ್ರಿ ಮನೆಯಲ್ಲೇ ಗಂಡನನ್ನು ಕೊಂದು ಹೆದ್ದಾರಿಯಲ್ಲಿ ಬಿಸಾಕಿ ಅಪಘಾತ ಕಥೆ ಸೃಷ್ಟಿಸಿದ್ದಾರೆ ಎನ್ನಲಾಗುತ್ತಿದೆ. ಆಕೆಯನ್ನ ಕೇಳಿದರೆ ನಮ್ಮ ತಮ್ಮನ‌ ಕೊಲೆ ಬಗ್ಗೆ ಗೊತ್ತಾಗುತ್ತೆ ಪತ್ನಿ ವಿರುದ್ಧ ಮಂಜುನಾಥ್ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಕುಟುಂಬ ಹಾಳು; ರೊಚ್ಚಿಗೆದ್ದ ವ್ಯಕ್ತಿ ಏರ್ಪೋರ್ಟ್​ನಲ್ಲಿಯೇ ಚಾಕುವಿನಿಂದ ಚುಚ್ಚಿ ಕೊಂದ

ಸಾಂಬರಗೆ ಕೊಬ್ಬರಿ ಮಿಕ್ಸಿಗೆ ಹಾಕಿಸಿಕೊಳ್ಳಲು ಕೋಟುಮಚಗಿಯಲ್ಲಿ ಅಕ್ಕ ನನ್ನು ಭೇಟಿಯಾಗಿ ರಾತ್ರಿ ಮರಳಿ ಮಂಜುನಾಥ್ ಮನೆಗೆ ಹೋಗಿದ್ದಾರೆ. ಅಕ್ಕನ ಮನೆಯ ಪಕ್ಕದ ಬಡಾವಣೆಯಲ್ಲಿ ಹೆಂಡತಿ, ಮಕ್ಕಳ ಜೊತೆ ಮಂಜುನಾಥ್ ವಾಸವಿದ್ದರು.

ಮಧ್ಯರಾತ್ರಿ 3 ಗಂಟೆಗೆ ಹೆಂಡತಿ ಶಿವಮ್ಮ ಬಂದು ರಸ್ತೆಯಲ್ಲಿ ಬಿದ್ದಿದ್ದಾರೆ ಎಂದು ಮಂಜುನಾಥ್​ನ ಅಕ್ಕನಿಗೆ ಹೇಳಿದ್ದಾರೆ. ಮಾಹಿತಿ ನೀಡಿದ ಬಳಿಕ ಪೊಲೀಸರು ಮತ್ತು ಶ್ವಾನದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಕೊಲೆಯಾದ ಶವದ ವಾಸನೆಯನ್ನು ಶ್ವಾನಕ್ಕೆ ಸಿಬ್ಬಂದಿ ತೋರಿಸಿದ್ದಾರೆ. ಎರಡೇ ನಿಮಿಷದಲ್ಲಿ ಪತ್ನಿ ಮನೆ ಮುಂದೆ ಶ್ವಾನ ಬಂದು ನಿಂತಿದೆ. ತಕ್ಷಣ ಪತ್ನಿಯನ್ನು ಗದಗ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Bengaluru Crime: ಬೆಳಗ್ಗೆ ಎದ್ದಾಗ ಕತ್ತು ಸೀಳಿದ ಗೆಳತಿಯ ಶವ ಕಂಡು ಯುವತಿ ಶಾಕ್; ಬೆಂಗಳೂರಿನಲ್ಲೊಂದು ಬರ್ಬರ ಹತ್ಯೆ

ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಗದಗ ಎಸ್​ಪಿ ಬಿಎಸ್ ನೇಮಗೌಡ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿತ್ರದುರ್ಗದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು ಆರೋಪ

ಚಿತ್ರದುರ್ಗ: ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಜಿಲ್ಲೆಯ ಹೊಳಲ್ಕೆರೆ ಮೂಲದ ಭಾವನಾ(25) ಮೃತ ಮಹಿಳೆ.

ಜ್ವರದಿಂದ ಚಿತ್ರದುರ್ಗದ ಆಸ್ಪತ್ರೆಗೆ ಭಾವನಾ ದಾಖಲಾಗಿದ್ದರು. ಲೋಬಿಪಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಬಸವೇಶ್ವರ ಆಸ್ಪತ್ರೆ ವೈದ್ಯರ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:42 pm, Fri, 30 August 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ