
ದಾವಣಗೆರೆ: ಮಧ್ಯ ಕರ್ನಾಟಕವಾಗಿರುವ ದಾವಣಗೆರೆಗೆ ಒಂದು ಸಚಿವ ಸ್ಥಾನ ನೀಡಿ ಎಂದು ಯಡಿಯೂರಪ್ಪನವರ ಬಳಿ ಮನವಿ ಮಾಡಿದ್ದೇನೆ. ನಾನೂ ಕೂಡ ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದೇನೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಹೊನ್ನಾಳಿಯಲ್ಲಿ ಮಾತನಾಡಿದ ಅವರು, ನಾನು ಸಚಿವ ಸ್ಥಾನ ಆಕಾಂಕ್ಷಿ ಹೌದು. ಆದರೆ ಈ ವಿಚಾರದಲ್ಲಿ ಸಿಎಂ BSYರದ್ದೇ ಪರಮಾಧಿಕಾರ. ಅದನ್ನು ಯಾರೂ ಪ್ರಶ್ನೆ ಮಾಡುವಂತೆಯೇ ಇಲ್ಲ ಎಂದೂ ಹೇಳಿದ್ದಾರೆ.
ವದಂತಿಯಷ್ಟೇ !
ಇನ್ನು ನಾಯಕತ್ವ ಬದಲಾವಣೆ ಒಂದು ವದಂತಿಯಷ್ಟೇ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ಮೇಲಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಇದನ್ನು ರಾಜ್ಯ ಉಸ್ತುವಾರಿಗಳೇ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು. ಮುಂದಿನ ವಿಧಾನಸಭೆ ಚುನಾವಣೆಯೂ ಯಡಿಯೂರಪ್ಪನವರ ನೇತೃತ್ವದಲ್ಲೇ ನಡೆಯಲಿದೆ. ಹಾಗೇ, ಯತ್ನಾಳ್ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಅವರ ಹೇಳಿಕೆಗಳ ಬಗ್ಗೆ ಈಗಾಗಲೇ ರಾಜ್ಯಧ್ಯಕ್ಷರು ವರದಿ ನೀಡಿದ್ದಾರೆ. ಸೂಕ್ತ ಸಮಯದಲ್ಲಿ ಪಕ್ಷವೇ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ರೇಣುಕಾಚಾರ್ಯ ತಿಳಿಸಿದರು.
ಮಂತ್ರಿ ಮಾಡಬೇಕು ಅಂತ ನಿರ್ಧಾರ ಕೈಗೊಂಡರೆ ಅವರು ಒಪ್ಪಿಕೊಳ್ಳಬೇಕು- ಯತ್ನಾಳ್ ಹೇಳಿಕೆಗೆ ಈಶ್ವರಪ್ಪ ತಿರುಗೇಟು
Published On - 3:28 pm, Mon, 11 January 21