ಬೈಎಲೆಕ್ಷನ್​ನಲ್ಲಿ ಸ್ಪರ್ಧೆಗೆ ಸಿದ್ಧ: ಡಿಸಿಎಂ ಸವದಿ ಘೋಷಣೆ

ಬೆಂಗಳೂರು: ಚುನಾವಣೆಯಲ್ಲಿ ಸೋತಿದ್ದರೂ ಡಿಸಿಎಂ ಪಟ್ಟ ಅಲಂಕರಿಸಿರುವ ಲಕ್ಷ್ಮಣ ಸವದಿ ವಿರುದ್ಧ ಸ್ವಪಕ್ಷೀಯರು ಸೇರಿದಂತೆ ಹಲವರಿಂದ ಆಕ್ರೋಶಗಳು ವ್ಯಕ್ತವಾಗಿದ್ದವು. ಆದ್ರೆ ಇದೀಗ ರಾಜ್ಯದಲ್ಲಿ ಉಪಚುನಾವಣೆ ಎದುರಾಗಿದ್ದು, ಅಥಣಿ ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧನಿದ್ದೇನೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷ ಏನು ಹೇಳುತ್ತದೋ ಅದರಂತೆ ನಡೆದುಕೊಳ್ಳುತ್ತೇನೆ ಎಂದಿದ್ದಾರೆ. ಇದೇ ವೇಳೆ ಅನರ್ಹರ ಬಗ್ಗೆ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ, ಅನರ್ಹ ಶಾಸಕರ ಬಗ್ಗೆ ನಮ್ಮ ಯಾವುದೇ ತಕರಾರು ಇಲ್ಲ. ಅನರ್ಹ ಶಾಸಕರ […]

ಬೈಎಲೆಕ್ಷನ್​ನಲ್ಲಿ ಸ್ಪರ್ಧೆಗೆ ಸಿದ್ಧ: ಡಿಸಿಎಂ ಸವದಿ ಘೋಷಣೆ
ಸಾಧು ಶ್ರೀನಾಥ್​

Updated on: Nov 07, 2019 | 4:27 PM

ಬೆಂಗಳೂರು: ಚುನಾವಣೆಯಲ್ಲಿ ಸೋತಿದ್ದರೂ ಡಿಸಿಎಂ ಪಟ್ಟ ಅಲಂಕರಿಸಿರುವ ಲಕ್ಷ್ಮಣ ಸವದಿ ವಿರುದ್ಧ ಸ್ವಪಕ್ಷೀಯರು ಸೇರಿದಂತೆ ಹಲವರಿಂದ ಆಕ್ರೋಶಗಳು ವ್ಯಕ್ತವಾಗಿದ್ದವು. ಆದ್ರೆ ಇದೀಗ ರಾಜ್ಯದಲ್ಲಿ ಉಪಚುನಾವಣೆ ಎದುರಾಗಿದ್ದು, ಅಥಣಿ ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧನಿದ್ದೇನೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷ ಏನು ಹೇಳುತ್ತದೋ ಅದರಂತೆ ನಡೆದುಕೊಳ್ಳುತ್ತೇನೆ ಎಂದಿದ್ದಾರೆ. ಇದೇ ವೇಳೆ ಅನರ್ಹರ ಬಗ್ಗೆ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ, ಅನರ್ಹ ಶಾಸಕರ ಬಗ್ಗೆ ನಮ್ಮ ಯಾವುದೇ ತಕರಾರು ಇಲ್ಲ. ಅನರ್ಹ ಶಾಸಕರ ವಿಚಾರ ಈಗಾಗಲೇ ಕೋರ್ಟ್​ನಲ್ಲಿದೆ. ಅನರ್ಹ ಶಾಸಕರು ನಮ್ಮ ಪಕ್ಷಕ್ಕೆ ಸೇರ್ಪಡೆಯಾದರೆ ಸ್ವಾಗತಿಸುತ್ತೇವೆ. ಅವರ ಬೇಡಿಕೆಗಳಿಗೆ ಸಂಬಂಧಪಟ್ಟಂತೆ ಪಕ್ಷದ ವರಿಷ್ಠರು ನಿರ್ಧರಿಸ್ತಾರೆ ಎಂದರು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us