ಎರಡ್ಮೂರು ದಿನದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರುತ್ತೇನೆ: ಸಂದೇಶ್ ನಾಗರಾಜ್

ನಾನು 2-3 ವರ್ಷದಿಂದ ಮಾನಸಿಕವಾಗಿ ಬಿಜೆಪಿಯಲ್ಲಿದ್ದೇನೆ. ಹೀಗಾಗಿ ಜೆಡಿಎಸ್ ತೊರೆದು ಬಿಜೆಪಿ ಸೇರುತ್ತೇನೆ ಎಂದು ಮೈಸೂರಿನಲ್ಲಿ ಜೆಡಿಎಸ್ ಎಂಎಲ್‌ಸಿ ಸಂದೇಶ್ ನಾಗರಾಜ್ ಹೇಳಿದ್ದಾರೆ.

ಎರಡ್ಮೂರು ದಿನದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರುತ್ತೇನೆ: ಸಂದೇಶ್ ನಾಗರಾಜ್
ಸಂದೇಶ್ ನಾಗರಾಜ್
Follow us
TV9 Web
| Updated By: preethi shettigar

Updated on:Nov 12, 2021 | 12:57 PM

ಮೈಸೂರು: ಎರಡ್ಮೂರು ದಿನದಲ್ಲಿ ಜೆಡಿಎಸ್‌ಗೆ ರಾಜೀನಾಮೆ ನೀಡುತ್ತೇನೆ. ಆನಂತರ ಬಿಜೆಪಿ ಪಕ್ಷ ಸೇರುತ್ತೇನೆ. ಬಿಜೆಪಿ ಸೇರಿದ ಬಳಿಕ ಜೆಡಿಎಸ್(JDS) ಪಕ್ಷ ಬಿಡಲು ಕಾರಣ ಏನು ಎಂದು ಸುದ್ದಿಗೋಷ್ಠಿ ಮಾಡಿ ತಿಳಿಸುತ್ತೇನೆ. ಹೆಚ್.ಡಿ.ಕುಮಾರಸ್ವಾಮಿಗೆ ನನ್ನ ಅಗತ್ಯವಿಲ್ಲ ಎಂದು ಅನಿಸುತ್ತಿದೆ. ನನ್ನ ಅಗತ್ಯವಿಲ್ಲದಿದ್ದಾಗ ಆ ಜಾಗದಲ್ಲಿ ನಾನು ಏಕೆ ಇರಬೇಕು. ನಾನು 2 ರಿಂದ 3 ವರ್ಷದಿಂದ ಮಾನಸಿಕವಾಗಿ ಬಿಜೆಪಿಯಲ್ಲಿದ್ದೇನೆ. ಹೀಗಾಗಿ ಜೆಡಿಎಸ್ ತೊರೆದು ಬಿಜೆಪಿ (BJP) ಸೇರುತ್ತೇನೆ ಎಂದು ಮೈಸೂರಿನಲ್ಲಿ ಜೆಡಿಎಸ್ ಎಂಎಲ್‌ಸಿ ಸಂದೇಶ್ ನಾಗರಾಜ್ ಹೇಳಿದ್ದಾರೆ.

ಕೇವಲ ದೈಹಿಕವಾಗಿ ಮಾತ್ರ ಜೆಡಿಎಸ್ ಪಕ್ಷದಲ್ಲಿ ಇದ್ದೇನೆ. 3 ವರ್ಷದಿಂದ ನಾನು ಜೆಡಿಎಸ್ ನಾಯಕರ ಸಂರ್ಪಕದಲ್ಲಿಲ್ಲ. ವಿಧಾನ ಪರಿಷತ್ ಒಳಗೂ ನಾನು ಬಿಜೆಪಿ ಪರವೇ ಬಿಲ್​ಗಳಿಗೆ ಕೈ ಎತ್ತಿದ್ದೇನೆ. ನನಗೆ ಬಿಜೆಪಿಯಿಂದ ಪರಿಷತ್ ಟಿಕೆಟ್ ಸಿಗುವ ವಿಶ್ವಾಸವಿದೆ. ಮೈಸೂರಿನ ಬಿಜೆಪಿ ಕಚೇರಿಯಲ್ಲೆ ಬಿಜೆಪಿ ಸೇರ್ಪಡೆಯಾಗುತ್ತೇನೆ ಜೆಡಿಎಸ್ ಎಂಎಲ್‌ಸಿ ಸಂದೇಶ್ ನಾಗರಾಜ್ ತಿಳಿಸಿದ್ದಾರೆ.

ಜೆಡಿಎಸ್​ ಪಕ್ಷ ಕಾಲಿಯಾಗುತ್ತಿದೆ ಎಂಬ ಮಾತಿಗೆ ಈ ಹಿಂದೆಯೇ ಹೆಚ್​.ಡಿ.ಕುಮಾರಸ್ವಾಮಿ ಪ್ರತಿ ಉತ್ತರವನ್ನು ನೀಡಿದ್ದಾರೆ. ಆದರೆ ಇತ್ತೀಚೆಗೆ ಈ ಆರೋಪ ನಿಜವೆಂಬಂತೆ ಒಬ್ಬರಿಂದ ಮತ್ತೊಬ್ಬರು ಪಕ್ಷ ತೊರೆಯುತ್ತಿದ್ದಾರೆ.

ಜೆಡಿಎಸ್ ಪಕ್ಷ ಬಿಟ್ಟು ಹೋಗುವುದು ಹೊಸದೇನಲ್ಲ: ಹೆಚ್​.ಡಿ.ಕುಮಾರಸ್ವಾಮಿ ಜೆಡಿಎಸ್ ಪಕ್ಷ ಬಿಟ್ಟು ಹೋಗುವುದು ಹೊಸದೇನಲ್ಲ. ಇದರಿಂದ ಜೆಡಿಎಸ್​ಗೆ ಯಾವುದೇ ಶಾಕ್ ಇಲ್ಲ ಅಂತ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ, ರಮೇಶ್ ಕುಮಾರ್ ಯಾವ ಪಕ್ಷದಲ್ಲಿದ್ರು ಅಂತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್​ಡಿಕೆ, ಜೆಡಿಎಸ್ ಪಕ್ಷ ನಿಂತಿರುವುದು ನಾಯಕರಿಂದ ಅಲ್ಲ. ನಮ್ಮ ಲಕ್ಷಾಂತರ ಕಾರ್ಯಕರ್ತರಿಂದ ಅಂತ ಹೇಳಿದರು.

ಜೆಡಿಎಸ್ ನಾಲ್ಕು ದಿನಗಳ ಕಾರ್ಯಾಗಾರವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದೇವೆ. ನಾಳೆ ಮತ್ತು ನಾಡಿದ್ದು ಅಲ್ಪಸಂಖ್ಯಾತರ ಕಾರ್ಯಾಗಾರ ಏರ್ಪಾಡು ಮಾಡಿದ್ದೇವೆ. ಸೋಮವಾರ ಎಸ್​ಸಿ, ಎಸ್​ಟಿ, ಓಬಿಸಿ ಕಾರ್ಯಾಗಾರ ಏರ್ಪಾಡು ಮಾಡಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು. 1.0 ಯಿಂದ 10.ಓ ತನಕ ನಿರಂತರ ಪಕ್ಷ ಸಂಘಟನೆಗೆ ಚಾಲನೆ ಕೊಟ್ಟಿದ್ದೇವೆ. ಇದು ಜೆಡಿಎಸ್​ನ ಆರಂಭಿಕ ಶೂರತ್ವ ಅಂತ ಹಲವರು ಭಾವನೆ ಇಟ್ಟುಕೊಂಡಿದ್ದಾರೆ. ಒಂದು ಕಡೆ ಸಂಘಟನೆ, ಇನ್ನೊಂದು ಕಡೆ ಜೆಡಿಎಸ್ ಮನೆ ಖಾಲಿ ಆಗುತ್ತಿದೆ ಎನ್ನುವ ದೊಡ್ಡ ಸುದ್ದಿಗಳು ಬರುತ್ತಿವೆ. ನಮಗೆ ಇದರಲ್ಲಿ ಯಾವುದೇ ಶಾಕ್ ಇಲ್ಲ ಅಂತ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಎಪಿಎಸ್ ಡಿಯೋಲ್ ರಾಜೀನಾಮೆ ತಿರಸ್ಕರಿಸುವ ಮೂಲಕ ನವಜೋತ್ ಸಿಂಗ್ ಸಿಧುಗೆ ಖಡಕ್ ಸಂದೇಶ ರವಾನಿಸಿದ ಪಂಜಾಬ್ ಮುಖ್ಯಮಂತ್ರಿ

Babul Supriyo: ಬಿಜೆಪಿ ತೊರೆದು ಬೇರೆ ಪಕ್ಷ ಸೇರುತ್ತಾರಾ ಸಂಸದ ಬಾಬುಲ್ ಸುಪ್ರಿಯೋ?; ಅನುಮಾನಕ್ಕೆ ಕಾರಣವಾಯ್ತು ಫೇಸ್​ಬುಕ್ ಪೋಸ್ಟ್

Published On - 11:47 am, Fri, 12 November 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ