ರಾಮನಗರ: ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಡಬೇಡಿ ಎಂದು ನಾನು ಎಲ್ಲೂ ಹೇಳಿಲ್ಲ. ನಾನು ಯಾರಿಗೂ ಮೋಸ ಮಾಡಿಲ್ಲ. ಸಿಎಂ ಯಡಿಯೂರಪ್ಪನವರು ನೂರು ಮೆಡಿಕಲ್ ಕಾಲೇಜು ಬೇಕಾದ್ರೂ ಕೊಡಲಿ, ಚಿಕ್ಕಬಳ್ಳಾಪುರಕ್ಕೂ ಕೊಡಲಿ ಎಂದು ಕಾಂಗ್ರೆಸ್ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ನಮ್ಮ ಕ್ಷೇತ್ರಕ್ಕೆ ಸಿದ್ದರಾಮಯ್ಯನವರು ಬಜೆಟ್ನಲ್ಲಿ ಒಂದು ಮೆಡಿಕಲ್ ಕಾಲೇಜು ಸೇರಿಸಿದ್ರು. ಅದಕ್ಕೆ ಬೇಕಾದ ಅನುದಾನವನ್ನು ಸಿಎಂ ಆಗಿದ್ದಾಗ ಹೆಚ್.ಡಿ.ಕುಮಾರಸ್ವಾಮಿ ನೀಡಿದ್ರು. ಆದ್ರೆ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಡಬೇಡಿ ಎಂದು ನಾನೆಲ್ಲಿ ಹೇಳಿದ್ದೇನೆ. ಇದನ್ನೇ ರಾಜಕಾರಣ ಮಾಡ್ತೀವಿ ಅಂದ್ರೆ ಮಾಡ್ಕೊಳ್ಳಿ. ನಾವೇನ್ ದಡ್ಡರಾ? ಉತ್ತರ ಕೊಡ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Published On - 10:32 am, Wed, 27 November 19