ಕೆ.ಮಂಜು ಯಾರು ಎಂದೇ ನನಗೆ ಗೊತ್ತಿಲ್ಲ; ಸಚಿವ ಡಾ.ಕೆ.ಸುಧಾಕರ್​ ತಿರುಗೇಟು

ಕೆ.ಮಂಜು ಎಂದರೆ ನನಗೆ ಯಾರೂ ಎಂದೇ ಗೊತ್ತಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ತಿರುಗೇಟು ನೀಡಿದ್ದಾರೆ.

ಕೆ.ಮಂಜು ಯಾರು ಎಂದೇ ನನಗೆ ಗೊತ್ತಿಲ್ಲ; ಸಚಿವ ಡಾ.ಕೆ.ಸುಧಾಕರ್​ ತಿರುಗೇಟು
ಡಾ. ಕೆ.ಸುಧಾಕರ್
Follow us
shruti hegde
| Updated By: Skanda

Updated on: Apr 04, 2021 | 11:54 AM

ಬೆಂಗಳೂರು: ಕೆ.ಮಂಜು ಎಂದರೆ ನನಗೆ ಯಾರೂ ಎಂದೇ ಗೊತ್ತಿಲ್ಲ ಎಂದು ನಿರ್ಮಾಪಕ ಕೆ.ಮಂಜು ಅವರಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ತಿರುಗೇಟು ನೀಡಿದ್ದಾರೆ. ಚಿತ್ರರಂಗದ ಬಗ್ಗೆ ಸಚಿವ ಸುಧಾಕರ್​ಗೆ ಮಾಹಿತಿ ಕೊರತೆ ಇದೆ. ಚಿತ್ರರಂಗದ ಆರೋಗ್ಯದ ಬಗ್ಗೆಯೂ ಸುಧಾಕರ್​ಗೆ ಗೊತ್ತಿಲ್ಲ ಎಂದು ನಿರ್ಮಾಪಕ ಕೆ. ಮಂಜು ಮಾತಿಗೆ ಸಚಿವ ಡಾ.ಕೆ ಸುಧಾಕರ್​ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಯಾರ ಟೀಕೆಗಳಿಗೂ ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ಆರೋಗ್ಯ ಸಚಿವನಾಗಿ ನನ್ನ ಕೆಲಸವನ್ನು ನಾನು ಮಾಡಿದ್ದೇನೆ. ನಮಗೆ ಜನರ ರಕ್ಷಣೆ ಬಹಳ ಮುಖ್ಯ ಎಂದು ಮಾತನಾಡಿದ್ದಾರೆ. ರಾಜ್ಯ ಸರ್ಕಾರ ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗಬೇಕಾಗುತ್ತದೆ. ಹೀಗಾಗಿ ಸಿಎಂ ಬಿಎಸ್​ವೈ ಚಿತ್ರರಂಗದ ಮನವಿಗೆ ಸ್ಪಂದಿಸಿದ್ದಾರೆ. ಸಿಎಂ ನಿರ್ಧಾರವನ್ನು ತಪ್ಪು ಎಂದು ಕೂಡ ಹೇಳೋದಿಲ್ಲ. ಆದರೆ, ಈಗ ಕಠಿಣ ಕ್ರಮ ಕೈಗೊಳ್ಳದಿದ್ದರೆ ಸಮಸ್ಯೆ ಆಗುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ: ಡಾ.ಕೆ ಸುಧಾಕರ್ ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ನಿನ್ನೆ ಒಂದೇ ದಿನ 50 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್‌ಗಳು ಪತ್ತೆಯಾಗಿವೆ. 500ಕ್ಕೂ ಹೆಚ್ಚು ಜನರು ಕೊರೊನಾಗೆ ಬಲಿಯಾಗಿದ್ದಾರೆ. ಇಂತಹ ಸ್ಥಿತಿ ರಾಜ್ಯದಲ್ಲಿ ಬರದಂತೆ ನೋಡಿಕೊಳ್ಳಬೇಕಿದೆ. ಇಲ್ಲದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಕಷ್ಟವಾಗುತ್ತದೆ. ಆರೋಗ್ಯ ಇಲಾಖೆ, ತಾಂತ್ರಿಕ ಸಮಿತಿ ವರದಿ ಸಲ್ಲಿಸಿದಂತೆ ಕಠಿಣ ಕ್ರಮ ಅನಿವಾರ್ಯವಾಗಿದೆ ಎಂದು ಸೂಚನೆ ನಿಡಿದ್ದಾರೆ.

ಇದನ್ನೂ ಓದಿ: ಹಣ ವಂಚನೆ ಆರೋಪ: ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್ಐಆರ್​ ದಾಖಲು

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್