AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ದನದ ಮಾಂಸ ತಿನ್ತೀನಿ.. ಅದು ನನ್ನ ಆಹಾರ, ನನ್ನ ಹಕ್ಕು – ಮಾಜಿ ಸಿಎಂ ಸಿದ್ದರಾಮಯ್ಯ

ನಾನು ದನದ ಮಾಂಸವನ್ನು ತಿನ್ನುತ್ತೇನೆ. ಆಹಾರ ಪದ್ಧತಿ ನನ್ನ ಹಕ್ಕು. ಅದನ್ನ ಕೇಳುವುದಕ್ಕೆ ನೀನ್ಯಾರು? ಎಂದು ಅಧಿವೇಶನದಲ್ಲಿಯೇ ನಾನು ಕೇಳಿದ್ದೇನೆ: ಮಾಜಿ ಸಿಎಂ ಸಿದ್ದರಾಮಯ್ಯ

ನಾನು ದನದ ಮಾಂಸ ತಿನ್ತೀನಿ.. ಅದು ನನ್ನ ಆಹಾರ, ನನ್ನ ಹಕ್ಕು - ಮಾಜಿ ಸಿಎಂ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Dec 28, 2020 | 3:19 PM

Share

ಬೆಂಗಳೂರು: ನಾನು ದನದ ಮಾಂಸವನ್ನು ತಿನ್ನುತ್ತೇನೆ. ಆಹಾರ ಪದ್ಧತಿ ನನ್ನ ಹಕ್ಕು ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ನಿನ್ನೆ (ಡಿ. 27) ಹನುಮ ಜಯಂತಿಯಂದು ಮೈಸೂರಿನಲ್ಲಿ ಸ್ನೇಹಿತನ ಮನೆಗೆ ಹೋಗಿ ಬಾಡೂಟ ಸವಿದಿದ್ದ ಸಿದ್ದು, ಇಂದು ಬೆಂಗಳೂರಿನಲ್ಲಿ ನಾನು ದನದ ಮಾಂಸ ತಿನ್ನುತ್ತೇನೆ ಎಂದು ಹೇಳಿದ್ದಾರೆ.

ನಾನು ದನದ ಮಾಂಸವನ್ನು ತಿನ್ನುತ್ತೇನೆ. ಆಹಾರ ಪದ್ಧತಿ ನನ್ನ ಹಕ್ಕು. ಅದನ್ನ ಕೇಳುವುದಕ್ಕೆ ನೀನ್ಯಾರು? ಎಂದು ಅಧಿವೇಶನದಲ್ಲಿಯೇ ನಾನು ಕೇಳಿದ್ದೇನೆ. ನಮ್ಮವರು ಇದನ್ನು ಗಟ್ಟಿಯಾಗಿ ಹೇಳಲ್ಲ. ಕೆಲ ವಿಚಾರಗಳ ಬಗ್ಗೆ ನಮಗೆ ಸ್ಪಷ್ಟತೆ ಇರಬೇಕು ಎಂದು ಅವರು ಹೇಳಿದ್ರು.

ಗೋವನ್ನು ನಾವು ಪೂಜಿಸುತ್ತೇವೆ ಎಂಬುದು ಸರಿ. ಆದರೆ ವಯಸ್ಸಾದ ಹಸು, ಗಂಡು ಕರು ಏನ್ ಮಾಡೋದು ಹೇಳಿ? ಕಾಂಗ್ರೆಸ್‌ನವರು ಕೂಡ ಈ ವಿಚಾರದ ಬಗ್ಗೆ ಹೇಳಬೇಕು. ಬೇರೆ ಜಾತಿಯವರು ಏನೋ ಅನ್ಕೊಳ್ತಾರೆಂದು ಸುಮ್ಮನಾಗ್ತಾರೆ. ಮೌನಕ್ಕೆ ಶರಣಾಗುವುದನ್ನು ಬಿಡಬೇಕು. ನಮ್ಮ ಸಿದ್ಧಾಂತವನ್ನ ನಾವು ಹೇಳಬೇಕು ಎಂದು ಸಿದ್ದರಾಮಯ್ಯ ಇತರರಿಗೆ ತಿಳಿಸಿದ್ದಾರೆ.

1964ರಲ್ಲಿಯೇ ಗೋಹತ್ಯೆ ನಿಷೇಧ ಕಾನೂನು ತಂದಿದ್ದೆವು. ಕಾನೂನು ಜಾರಿಯಾದಾಗ ಬಿಜೆಪಿಯವರು ಇದ್ದರಾ? ಬಿಜೆಪಿಗಿಂತ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್​ನಲ್ಲಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾದರೆ ಬಡವರು, ರೈತರು, ಕಾರ್ಮಿಕರು, ಹಿಂದುಳಿದವರು, ದಲಿತರಿಗೆ ಹಿನ್ನಡೆಯಾದಂತೆ ಎಂದು ಸ್ವಪಕ್ಷದ ಬಗ್ಗೆ ಹಿರಿಮೆಯ ಮಾತನಾಡಿದ್ದಾರೆ.

ಗೋಹತ್ಯೆ ನಿಷೇಧ ಮಸೂದೆ ಸುಗ್ರೀವಾಜ್ಞೆಗೆ ಅನುಮೋದನೆ​

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ