ಈಗ ನನ್ನ ಜೇಬಿನಲ್ಲಿಯೇ ಎವಿಡೆನ್ಸ್ ಇದೆ, ಬಿಡುಗಡೆ ಮಾಡಿದರೆ ನೀವೇ ಶಾಕ್ ಆಗ್ತೀರಿ: ರಮೇಶ್ ಜಾರಕಿಹೊಳಿ

‘ಇದರ ಹಿಂದೆ ದೊಡ್ಡ ಪ್ರಮಾಣದ ಷಡ್ಯಂತ್ರ ನಡೆಯುತ್ತಿದೆ. ಈಗ ನನ್ನ ಜೇಬಿನಲ್ಲಿಯೇ ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿರುವುದರ ಕುರಿತು ಸಾಕ್ಷಿ ಇದೆ. ಷಡ್ಯಂತ್ರ ನಡೆಯುತ್ತಿರುವುರ ಕುರಿತು ಸಾಕ್ಷಿ ಬಿಡುಗಡೆ ಮಾಡಿದರೆ ನೀವು ಸಹ ದಂಗಾಗುತ್ತೀರಿ’

ಈಗ ನನ್ನ ಜೇಬಿನಲ್ಲಿಯೇ ಎವಿಡೆನ್ಸ್ ಇದೆ, ಬಿಡುಗಡೆ ಮಾಡಿದರೆ ನೀವೇ ಶಾಕ್ ಆಗ್ತೀರಿ: ರಮೇಶ್ ಜಾರಕಿಹೊಳಿ
‘ಆ ಪ್ರಭಾವಿ ವ್ಯಕ್ತಿ’ಗೆ ಬುದ್ಧಿ ಕಲಿಸಬೇಕು ಅಣ್ಣ ಎಂದು ಸಂತ್ರಸ್ತ ಯುವತಿ ನನ್ನ ಬಳಿ ಬಂದಿದ್ದಳು: ಎಸ್​ಐಟಿ ಎದುರು ಹೇಳಿಕೆ ಕೊಟ್ಟ ನರೇಶ್
Follow us
guruganesh bhat
| Updated By: ಆಯೇಷಾ ಬಾನು

Updated on: Mar 25, 2021 | 1:37 PM

ಬೆಂಗಳೂರು: ಇಂತಹ 10 ಸಿಡಿಗಳು ಬಂದರೂ ನಾನು ಎದುರಿಸುತ್ತೇನೆ. ತಪ್ಪು ಮಾಡಿದವರನ್ನು ಜೈಲಿಗೆ ಹಾಕುವವರೆಗೂ ಬಿಡಲ್ಲ. ನಾನು ತಪ್ಪು ಮಾಡಿಲ್ಲ, ನಾನು ಆರೋಪಮುಕ್ತನಾಗ್ತೇನೆ. ಯುವತಿ ಕೈಗೊಂಬೆಯಾಗಿದ್ದಾರೆ. ಅವಳನ್ನು ಬಳಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಮಾಜಿ ಸಚಿವ,ಶಾಸಕ ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಹೇಳಿದರು.

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಇದರ ಹಿಂದೆ ದೊಡ್ಡ ಪ್ರಮಾಣದ ಷಡ್ಯಂತ್ರ ನಡೆಯುತ್ತಿದೆ. ಈಗ ನನ್ನ ಜೇಬಿನಲ್ಲಿಯೇ ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿರುವುದರ ಕುರಿತು ಸಾಕ್ಷಿ ಇದೆ. ಷಡ್ಯಂತ್ರ ನಡೆಯುತ್ತಿರುವುರ ಕುರಿತು ಸಾಕ್ಷಿ ಬಿಡುಗಡೆ ಮಾಡಿದರೆ ನೀವು ಸಹ ದಂಗಾಗುತ್ತೀರಿ’ ಎಂದರು.

ಮೊಬೈಲ್ ವಶಕ್ಕೆ ಪಡೆದ ಎಸ್​ಐಟಿ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಸುದ್ದಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎಸ್​ಐಟಿ ತನಿಖೆ ನಡೆಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಾಕಷ್ಟು ಜನರನ್ನು ಕರೆದು ವಿಚಾರಣೆ ಕೂಡ ನಡೆಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಎಸ್​ಐಟಿ ರಮೇಶ್ ಜಾರಕಿಹೊಳಿ ಮೊಬೈಲ್​ಅನ್ನು ವಶಕ್ಕೆ ಪಡೆದಿದೆ.

ಅಶ್ಲೀಲ ಸಿಡಿಯಲ್ಲಿದ್ದ ಯುವತಿಗೆ ರಮೇಶ್​ ವಿಡಿಯೋ ಕಾಲ್ ಮಾಡಿದ್ದರು ಎನ್ನುವ ಆರೋಪ ಇದೆ. ಈ ಮಧ್ಯೆ, ಎಸ್​ಐಟಿ ವಿಚಾರಣೆ ವೇಳೆ ರಮೇಶ್​ ಜಾರಕಿಹೊಳಿ ಮರ್ಪಕವಾಗಿ ಉತ್ತರ ನೀಡಿರಲಿಲ್ಲ ಎಂದು ಮೂಲಗಳು ಹೇಳಿವೆ. ಹೀಗಾಗಿ, ಎಸ್​ಐಟಿ ಅಧಿಕಾರಿಗಳು ರಮೇಶ್ ಅವರ ಮೊಬೈಲ್​ ಅನ್ನು ವಶಕ್ಕೆ ಪಡೆದಿದ್ದಾರೆ.

ರಮೇಶ್​ ಜಾರಕಿಹೊಳಿ ತಮಗೂ ಈ ಸಿಡಿಗೂ ಸಂಬಂಧ ಇಲ್ಲ. ಇದು ಎಡಿಟ್​ ಮಾಡಿದ ವಿಡಿಯೋ ಎಂದು ದೂರಿದ್ದರು. ಅಲ್ಲದೆ, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬಳಿ ಮನವಿ ಮಾಡಿದ್ದರು. ಈ ಬಗ್ಗೆ ಮಾತನಾಡಿದ್ದ ಬಸವರಾಜ ಬೊಮ್ಮಾಯಿ, ‘ಸಚಿವ ರಮೇಶ್ ಜಾರಕಿಹೊಳಿ ಅವರ ವಿನಂತಿ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ’ ಎಂದಿದ್ದರು.

ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ಈಗ ತನಿಖೆಗೆ ನಡೆಸುತ್ತಿದೆ.  ರಮೇಶ್‌ ಜಾರಕಿಹೊಳಿ ಸೆಕ್ಸ್‌ ಸಿಡಿ ಎಲ್ಲಿ ತಯಾರಾಗಿದೆ, ವೆಬ್​ಸೈಟ್​ಗಳಿಗೆ ಎಲ್ಲಿಂದ ಅಪ್​ಲೋಡ್ ಆಯಿತು ಎಂಬ ಬಗ್ಗೆ ಈ ತನಿಖೆ ಬೆಳಕು ಚೆಲ್ಲಲಿದೆ. ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದ್ದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಶುದ್ಧ ರಾಜಕೀಯ ಪಿತೂರಿ; ಸದನದಲ್ಲಿ ಸಚಿವ ಸುಧಾಕರ

ರಮೇಶ್ ಜಾರಕಿಹೊಳಿ ವಿರುದ್ಧ ರೇಪ್ ಕೇಸ್ ಹಾಕಬೇಕು; ಸಿಡಿ ಯುವತಿಗೆ ರಕ್ಷಣೆ ಕೊಡಬೇಕು -ಸಿದ್ದರಾಮಯ್ಯ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ