AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗ್ಯಾವ ಅಸಮಾಧಾನವೂ ಇಲ್ಲ..ಯಾವ ಖಾತೆಗಳೂ ಬೇಡ, ಶಾಸಕನಾಗಿ ಉಳಿಯುತ್ತೇನೆ: ಆನಂದ್ ಸಿಂಗ್​

ನಾನು ಖಾತೆ ಬದಲಾವಣೆ ಬಗ್ಗೆ ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ. ರಾಜಕೀಯದ ಬಗ್ಗೆ ನನ್ನ ಕುಟುಂಬಸ್ಥರ ಜತೆ ಚರ್ಚಿಸಿರಬಹುದು ಹೊರತು ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಆನಂದ್​ ಸಿಂಗ್ ಹೇಳಿದ್ದಾರೆ.

ನನಗ್ಯಾವ ಅಸಮಾಧಾನವೂ ಇಲ್ಲ..ಯಾವ ಖಾತೆಗಳೂ ಬೇಡ, ಶಾಸಕನಾಗಿ ಉಳಿಯುತ್ತೇನೆ: ಆನಂದ್ ಸಿಂಗ್​
ಆನಂದ್ ಸಿಂಗ್
Lakshmi Hegde
| Updated By: ಆಯೇಷಾ ಬಾನು|

Updated on: Jan 25, 2021 | 12:46 PM

Share

ಬೆಂಗಳೂರು: ಆನಂದ್​ಸಿಂಗ್​ರಿಂದ ಪ್ರವಾಸೋದ್ಯಮ ಮತ್ತು ಪರಿಸರ ಖಾತೆಯನ್ನು ವಾಪಸ್​ ಪಡೆದು, ಅವರಿಗೆ ಹಜ್, ವಕ್ಫ್​ ಮತ್ತು ಮೂಲಸೌಕರ್ಯ ಅಭಿವೃದ್ಧಿ ಖಾತೆಯನ್ನು ನೀಡಲು ಸಿಎಂ ಯಡಿಯೂರಪ್ಪ ನಿರ್ಧಾರ ಮಾಡಿದ್ದಕ್ಕೆ, ಆನಂದ್​ ಸಿಂಗ್​ ಬೇಸರಗೊಂಡು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಆನಂದ್​ ಸಿಂಗ್​ ಇದನ್ನು ನಿರಾಕರಿಸಿದ್ದಾರೆ.

ಟಿವಿ 9ಜತೆ ಮಾತನಾಡಿದ ಆನಂದ್ ಸಿಂಗ್, ನಾನು ಖಾತೆ ಬದಲಾವಣೆ ಬಗ್ಗೆ ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ. ರಾಜಕೀಯದ ಬಗ್ಗೆ ನನ್ನ ಕುಟುಂಬಸ್ಥರ ಜತೆ ಚರ್ಚಿಸಿರಬಹುದು ಹೊರತು ಅಸಮಾಧಾನ ವ್ಯಕ್ತಪಡಿಸಿಲ್ಲ. ನಾನು ಸಚಿವ ಸ್ಥಾನ ನಿರೀಕ್ಷೆ ಮಾಡಿ ಬಂದ ವ್ಯಕ್ತಿಯಲ್ಲ. ನನ್ನ ನಿರೀಕ್ಷೆ, ಮನವಿಯನ್ನು ಮುಖ್ಯಮಂತ್ರಿ ಪುರಸ್ಕರಿಸಿದ್ದಾರೆ.

ಖಾತೆ ಬದಲಾವಣೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ನನಗೆ ಹೇಳಿದ್ದಾರೆ. ನನಗೆ ಯಾವ ಖಾತೆಯೂ ಬೇಡ, ಶಾಸಕನಾಗಿ ಉಳಿಯುತ್ತೇನೆ ಎಂದು ಮನವಿ ಮಾಡಿದ್ದೇನೆ. ಅವರು ನನ್ನ ಮನವಿ ಪುರಸ್ಕರಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಆನಂದ್ ಸಿಂಗ್ ಹೇಳಿದ್ದಾರೆ.

ಮತ್ತೆ ಖಾತೆ ಬದಲಾವಣೆಗೆ ಸಿಎಂ ನಿರ್ಧಾರ; ವೈದ್ಯಕೀಯ ಶಿಕ್ಷಣ ಖಾತೆ ಸುಧಾಕರ್​ ಹೆಗಲಿಗೆ?..ಆನಂದ್ ಸಿಂಗ್ ಮುನಿಸು !

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?