AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನೇ ಸ್ವತಃ ಬಾಗಲಕೋಟೆಗೆ ಬಂದು ಸತ್ಯಾಂಶ ಬಿಚ್ಚಿಡುತ್ತೇನೆ: ನಿರಾಣಿಗೆ ಟಾಂಗ್ ಕೊಟ್ಟ ಎಂಬಿ ಪಾಟೀಲ್

ಸಚಿವ ಎಂಬಿ ಪಾಟೀಲ್ ವಿರುದ್ದ ಮಾಜಿ ಸಚಿವ ಮುರುಗೇಶ ನಿರಾಣಿ ಇಂದು ಬಾಗಲಕೋಟೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಏಕ ವಚನದಲ್ಲಿ ಮಾತನಾಡಿದ್ದಾರೆ. ಸದ್ಯ ಈ ವಿಚಾರವಾಗಿ ಟ್ವೀಟ್ ಮಾಡಿರುವ ಸಚಿವ ಎಂಬಿ ಪಾಟೀಲ್​, ಅನವಶ್ಯಕವಾಗಿ ನನ್ನ ತಂಟೆಗೆ ಬಂದವರಿಗೆ ಹಿಂದೆಯೂ ಬಿಟ್ಟಿಲ್ಲ, ಇಂದು ಮತ್ತು ಮುಂದೆಯೂ ಬಿಡುವುದಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ನಾನೇ ಸ್ವತಃ ಬಾಗಲಕೋಟೆಗೆ ಬಂದು ಸತ್ಯಾಂಶ ಬಿಚ್ಚಿಡುತ್ತೇನೆ: ನಿರಾಣಿಗೆ ಟಾಂಗ್ ಕೊಟ್ಟ ಎಂಬಿ ಪಾಟೀಲ್
ನಾನೇ ಸ್ವತಃ ಬಾಗಲಕೋಟೆಗೆ ಬಂದು ಸತ್ಯಾಂಶ ಬಿಚ್ಚಿಡುತ್ತೇನೆ: ನಿರಾಣಿಗೆ ಟಾಂಗ್ ಕೊಟ್ಟ ಎಂಬಿ ಪಾಟೀಲ್
ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 01, 2024 | 9:17 PM

Share

ವಿಜಯಪುರ, ಸೆಪ್ಟೆಂಬರ್​ 01: ನನ್ನ ಸಂಸ್ಥೆ ಮತ್ತು ನನ್ನ ಕುರಿತು ಏಕವಚನದಲ್ಲಿ ಕೆಟ್ಟ ಭಾಷೆ ಬಳಸಿದ್ದಾನೆ. ನಾನು ವಿಜಯಪುರ ಜಿಲ್ಲೆಯವ. ಇಂಥಹ ಎಲ್ಲ ಭಾಷೆಗಳು ನನಗೂ ಬರುತ್ತವೆ. ನಾನೇ ಸ್ವತಃ ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲಿಯೇ ನಿನ್ನ ಸತ್ಯಾಂಶವನ್ನು ಬಿಚ್ಚಿಡುತ್ತೇನೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿಗೆ (Murugesh Nirani) ಕೈಗಾರಿಕಾ‌ ಸಚಿವ ಎಂಬಿ ಪಾಟೀಲ್​ (M B Patil) ಟಾಂಗ್ ಕೊಟ್ಟಿದ್ದಾರೆ.

ಸಚಿವ ಎಂಬಿ ಪಾಟೀಲ್ ವಿರುದ್ದ ಮಾಜಿ ಸಚಿವ ಮುರುಗೇಶ ನಿರಾಣಿ ಇಂದು ಬಾಗಲಕೋಟೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಏಕ ವಚನದಲ್ಲಿ ಮಾತನಾಡಿದ್ದಾರೆ. ಸದ್ಯ ಈ ವಿಚಾರವಾಗಿ ಟ್ವೀಟ್ ಮಾಡಿರುವ ಎಂಬಿ ಪಾಟೀಲ್​, ಮಿಸ್ಟರ್​. ಮುರುಗೇಶ ನಿರಾಣಿ ಬಾಗಲಕೋಟೆಯಲ್ಲಿ ನೀನು ಮಾಡಿರುವ ಪತ್ರಿಕಾಗೋಷ್ಠಿಯನ್ನು ಗಮನಿಸಿದ್ದೇನೆ. ಸಿದ್ದಾರ್ಥ ಟ್ರಸ್ಟ್​​ಗೆ ಯಾವುದೇ ರಿಯಾಯಿತಿ ಇಲ್ಲದೆ ಸಿಎ ನಿವೇಶನ ನೀಡಿದ್ದರೂ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೆಸರನ್ನು ಅನವಶ್ಯಕವಾಗಿ ಎಳೆದು ತಂದು ಹಗರಣವಾಗಿದೆ ಎಂದು ಬಿಜೆಪಿ ಅವರು ಬಿಂಬಿಸುತ್ತಿರುವುದಕ್ಕೆ ಪ್ರತಿಯಾಗಿ ನಾನು ಪತ್ರಿಕಾಗೋಷ್ಠಿ ನಡೆಸಿ, ಬಿಜೆಪಿ ಅವಧಿಯಲ್ಲಿ ಬಿಜೆಪಿ ನಾಯಕರು ಯಾರು ಯಾರು ಎಷ್ಟೆಷ್ಟು ಲಾಭ ಪಡೆದಿದ್ದಾರೆ ಎಂಬುದು ತಿಳಿಸುವದು ನನ್ನ ಉದ್ದೇಶವಾಗಿತ್ತು. ಈ ಸಂದರ್ಭದಲ್ಲಿ ಮಿ. ನಿರಾಣಿ ತನ್ನ ಶಿಕ್ಷಣ ಸಂಸ್ಥೆ ಮತ್ತು ಸಕ್ಕರೆ ಕಾರ್ಖಾನೆಗೆ ಪಡೆದಿರುವ ಲಾಭದ ಮಾಹಿತಿಯನ್ನು ನೀಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಪ್ರಾಸಿಕ್ಯೂಷನ್​​ಗೆ ಆಗ್ರಹ: ಕಾಂಗ್ರೆಸ್​ ಆರೋಪಕ್ಕೆ ಎಳೆಎಳೆಯಾಗಿ ಸ್ಪಷ್ಟನೆ ನೀಡಿದ ಮುರುಗೇಶ್ ‌ನಿರಾಣಿ

ಆದರೆ, “ದನಕಾಯುವವನು” ಎಂಬ ಶಬ್ದವನ್ನು ನಾನು ಎಲ್ಲಿಯೂ ಬಳಸಿಲ್ಲ ಮತ್ತು ಏಕವಚನದಲ್ಲೂ ನಾನು ಮಾತನಾಡಿಲ್ಲ. ಅಷ್ಟಕ್ಕೂ, ದನಕಾಯುವುದು ಗೌರವದ ಕಾಯಕ. ದನಕಾಯುವವರನ್ನು ನಾನು ಗೌರವಿಸುತ್ತೇನೆ. ಮಿ. ನಿರಾಣಿ ತಾನಾಗಿಯೇ “ದನಕಾಯುವವ” ಎಂದು ತಿಳಿದುಕೊಂಡು, ನನ್ನ ಸಂಸ್ಥೆ ಮತ್ತು ನನ್ನ ಕುರಿತು ಏಕವಚನದಲ್ಲಿ ಕೆಟ್ಟ ಭಾಷೆ ಬಳಸಿದ್ದಾನೆ. ನಾನು ವಿಜಯಪುರ ಜಿಲ್ಲೆಯವ. ಇಂಥಹ ಎಲ್ಲ ಭಾಷೆಗಳು ನನಗೂ ಬರುತ್ತವೆ. ನಾನೇ ಸ್ವತಃ ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲಿಯೇ ನಿನ್ನ ಸತ್ಯಾಂಶವನ್ನು ಬಿಚ್ಚಿಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.

ಸಚಿವ ಎಂಬಿ ಪಾಟೀಲ್ ಟ್ವೀಟ್

ಅನವಶ್ಯಕವಾಗಿ ನನ್ನ ತಂಟೆಗೆ ಬಂದವರಿಗೆ ಹಿಂದೆಯೂ ಬಿಟ್ಟಿಲ್ಲ, ಇಂದು ಮತ್ತು ಮುಂದೆಯೂ ಬಿಡುವುದಿಲ್ಲ. ಅದರ ಕಹಿ ಅನುಭವ ಈ ಹಿಂದೆ ನಿನಗೆ ಆಗಿದೆ ಎನ್ನುವುದನ್ನು ನೆನಪಿಸುತ್ತೇನೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ