Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್​ ತಡೆ: ಆದೇಶವನ್ನು ಸ್ವಾಗತಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ನಾಯಕ​ ರಾಹುಲ್ ಗಾಂಧಿ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್​ ತಡೆ ವಿಚಾರವಾಗಿ ಬೆಂಗಳೂರಿನಲ್ಲಿ ಸಿಎಂ ಸಿದ್ಧರಾಮಯ್ಯ ಮಾತನಾಡಿ ‘ಸುಪ್ರೀಂ’ ಆದೇಶವನ್ನು ಸ್ವಾಗತಿಸುತ್ತೇನೆ. ಇದು ಪ್ರಜಾಪ್ರಭುತ್ವಕ್ಕೆ ಸಂದ ಜಯ ಎಂದು ಹೇಳಿದ್ದಾರೆ.

Follow us
Poornima Agali Nagaraj
| Updated By: ಗಂಗಾಧರ​ ಬ. ಸಾಬೋಜಿ

Updated on:Aug 04, 2023 | 8:09 PM

ಬೆಂಗಳೂರು, ಆಗಸ್ಟ್​ 04: ‘ಸುಪ್ರೀಂ’ ಆದೇಶವನ್ನು ಸ್ವಾಗತಿಸುತ್ತೇನೆ. ಇದು ಪ್ರಜಾಪ್ರಭುತ್ವಕ್ಕೆ ಸಂದ ಜಯ ಎಂದು ಸಿಎಂ ಸಿದ್ಧರಾಮಯ್ಯ (Siddaramaiah) ಹೇಳಿದರು. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್​ ತಡೆ ವಿಚಾರವಾಗಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿವ್ಯಕ್ತಿ ಸ್ವಾತಂತ್ರ್ಯ ಇರಬೇಕೆಂದು ಸುಪ್ರೀಂ ಅಭಿಪ್ರಾಯಪಟ್ಟಿದೆ. ಇದರಲ್ಲಿ ರಾಹುಲ್ ಗಾಂಧಿ ಅವರ ಸದಸ್ಯತ್ವ ರದ್ದು ಆಗಿತ್ತು ಎಂದು ಹೇಳಿದ್ದಾರೆ.

ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

76 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಲಾಲ್​ಬಾಗ್​​ನಲ್ಲಿ 214ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. 2.50 ಕೋಟಿ ರೂಪಾಯಿ ವೆಚ್ಚದಲ್ಲಿ ತೋಟಗಾರಿಕೆ ಇಲಾಖೆಯಿಂದ ಫ್ಲವರ್​ ಶೋ ಆಯೋಜನೆ ಮಾಡಲಾಗಿದ್ದು, ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮೂಲಕ ಚಾಲನೆ ನೀಡಿದರು.

ಇದನ್ನೂ ಓದಿ: ಸುಪ್ರೀಂ​ ಕೋರ್ಟ್​​ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ರಿಲೀಫ್.. ಡಿಕೆ ಶಿವಕುಮಾರ್ ರಿಯಾಕ್ಷನ್

ಬಳಿಕ ಸಿಎಂರಿಂದ ಕೆಂಗಲ್ ಹನುಮಂತಯ್ಯ ಜೀವನಾಧಾರಿತ ಪುಸ್ತಕ ಬಿಡುಗಡೆ ಮಾಡಲಾಯಿತು. ತೋಟಗಾರಿಕೆ ಇಲಾಖೆ ಸಚಿವ ಎಸ್​.ಎಸ್​​.ಮಲ್ಲಿಕಾರ್ಜುನ, ಎಂಎಲ್​ಸಿಗಳಾದ ಗೋವಿಂದರಾಜು, ಟಿ.ಎ.ಶರವಣ ಉಪಸ್ಥಿತರಿದ್ಧರು.

ಈ ಬಾರಿಯ ಫ್ಲವರ್ ಶೋ ಕೆಂಗಲ್ ಹನುಮಂತಯ್ಯ ಅವರ ಥೀಮ್

ಆಗಸ್ಟ್ 15ರ ತನಕ ಫ್ಲವರ್ ಶೋ ನಡೆಯಲಿದೆ. ಈ ಬಾರಿಯ ವಿಶೇಷ ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್. ಲಾಲ್​ಬಾಗ್ ಶುಚಿತ್ವದ ಉದ್ಯಾನವನ. 140 ಎಕರೆ ವಿಸ್ತಿರ್ಣ ಇರುವ ಉದ್ಯಾನ, ಇಲ್ಲಿ ಎಲ್ಲ ಮರಗಿಡಗಳು ಹೊಂದಿವೆ. ಕೆಂಗಲ್ ಹನುಮಂತಯ್ಯ 40 ಎಕರೆ ಅಕ್ವೈರ್ ಮಾಡಿ, ವಿಸ್ತೀರ್ಣ ಹೆಚ್ಚಿಸಿದ್ದಾರೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಮಾತನಾಡುವಾಗ ಖಂಡ್ರೆ ಬದಲು ಖರ್ಗೆ ಅಂತಾ ಹೇಳಿದ್ದೇನೆ: ಆರಗ ಜ್ಞಾನೇಂದ್ರ

ನಾವು ಚುನಾವಣೆ ಮಾಡಲು ತಯಾರಿದ್ದೇವೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ. ಆದರೆ ಕೋರ್ಟ್ ಆದೇಶವಿದೆ ಎಂದಿದ್ದಾರೆ.

ಜನರ ಆಯ್ಕೆಯನ್ನು ಪ್ರಶ್ನಿಸಿ ಹೊರಟಿದ್ದವರಿಗೆ ತಕ್ಕ ಉತ್ತರ ಸಿಕ್ಕಿದೆ: ಡಿ.ಕೆ.ಶಿವಕುಮಾರ್

ಡಿಸಿಎಂ ಡಿ.ಕೆ.ಶಿವಕುಮಾರ್​ ಮಾತನಾಡಿ, ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವು. ಜನರ ಆಯ್ಕೆಯನ್ನು ಪ್ರಶ್ನಿಸಿ ಹೊರಟಿದ್ದವರಿಗೆ ತಕ್ಕ ಉತ್ತರ ಸಿಕ್ಕಿದೆ. ಇಡೀ ದೇಶದಲ್ಲಿ ಸುಪ್ರೀಂಕೋರ್ಟ್ ದೊಡ್ಡದು. ಅನ್ಯಾಯ ಆದ ಕಡೆ ಸರಿ ಪಡಿಸುವ ಶಕ್ತಿ ಈ ಪೀಠಕ್ಕೆ ಇದೆ. ಇದಕ್ಕೆ ಈ ತೀರ್ಪು ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:09 pm, Fri, 4 August 23

VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್
VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?